Belagavi News In Kannada | News Belgaum

ಮುನಿಸು ಶಮನಕ್ಕೆ ಮುಂದಾದ ಸಿಎಂ-ಡಿಸಿಎಂ; ಜಿಲ್ಲಾವಾರು ಶಾಸಕರು-ಸಚಿವರ ಜತೆ ಸಭೆ..

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ 20 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿರುವ ಕಾಂಗ್ರೆಸ್ ಪಕ್ಷ ತಂತ್ರಗಳನ್ನು ಹೆಣೆಯುವುದರಲ್ಲಿ ನಿರತವಾಗಿದೆ. ಇದರ ಫಲವಾಗಿಯೇ ಪಕ್ಷದೊಳಗಿನ ಬೇಗುದಿಯನ್ನೂ ತಣಿಸಲು ಮುಂದಾಗಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಆರು ಜಿಲ್ಲೆಗಳ ಕಾಂಗ್ರೆಸ್ ಶಾಸಕರೊಂದಿಗೆ ಶಿವಕುಮಾರ್ ಸಭೆ ನಡೆಸಿದ್ದಾರೆ..

ಅದರಂತೆ ಮೊದಲ ಹಂತದಲ್ಲಿ ತುಮಕೂರು, ಚಿತ್ರದುರ್ಗ, ಬಾಗಲಕೋಟೆ, ಧಾರವಾದ, ಬಳ್ಳಾರಿ ಮತ್ತು ಯಾದಗಿರಿ ಕ್ಷೇತ್ರದ ಶಾಸಕರು, ಉಸ್ತುವಾರಿ ಸಚಿವರ ಜೊತೆ ಸಿಎಂ ಹಾಗೂ ಡಿಸಿಎಂ ಸಭೆ ನಡೆಸಿದ್ದಾರೆ..

ಗೃಹ ಕಚೇರಿ ಕೃಷ್ಣಾದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಈ ಬಾರಿ ಹೆಚ್ಚಿನ ಅನುದಾನದ ನಿರೀಕ್ಷೆ ಮಾಡಬೇಡಿ. ಇರುವ ಆರ್ಥಿಕ ವ್ಯವಸ್ಥೆಯಲ್ಲಿ ನಿಮ್ಮ ಕ್ಷೇತ್ರದ ಅಭಿವೃದ್ಧಿಗೆ ಹಂತಹಂತವಾಗಿ ಅನುದಾನ ಕೊಡ್ತೀವಿ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ. ಸಂಬಂಧಪಟ್ಟ ಸಚಿವರಿಗೆ ಆಯಾ ಇಲಾಖೆ ಕೆಲಸ ಮಾಡಿಕೊಡುವಂತೆ ಸೂಚಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ..

ಏನೇ ಅಸಮಾಧಾನಗಳಿದ್ದರೂ ನನ್ನ ಬಳಿ ಹೇಳಿ ಅಥವಾ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ. ಏನೇ ಒತ್ತಡ ಇದ್ದರೂ ತಿಂಗಳಿಗೊಮ್ಮೆ ಜಿಲ್ಲಾವಾರು ಶಾಸಕರ ಸಭೆ ನಡೆಸಿ ಅವರ ಕುಂದುಕೊರತೆಗಳನ್ನೂ ಆಲಿಸುತ್ತೇನೆ. ಸರ್ಕಾರದಿಂದ ಆಗಬೇಕಾಗಿರುವ ಕೆಲಸಗಳೂ ಸಮಪರ್ಕವಾಗಿ ಆಗುವಂತೆ ನೋಡಿಕೊಳ್ಳುತ್ತೇನೆ ಎಂದು ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಶಾಸಕರಿಗೆ ಭರವಸೆ ನೀಡಿದ್ದಾರೆ..