Belagavi News In Kannada | News Belgaum

ಕೊಕಟನೂರ ನೂತನ ಬಸ್ ನಿಲ್ದಾಣ ಉದ್ಘಾಟನಾ ಸಮಾರಂಭ ಅಗಸ್ಟ್ 11 ರಂದು

ಬೆಳಗಾವಿ, ಆ.09 : ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಚಿಕ್ಕೋಡಿ ವಿಭಾಗದ ಅಥಣಿ ಘಟಕದ ನೂತನ ಕಟ್ಟಡ ಹಾಗೂ ಕೊಕಟನೂರ ನೂತನ ಬಸ್ ನಿಲ್ದಾಣ ಉದ್ಘಾಟನಾ ಸಮಾರಂಭ ಅಗಸ್ಟ್ 11 2023 ರಂದು ಬೆಳಿಗ್ಗೆ 11 ಗಂಟೆಗೆ ಕೊಕಟನೂರ ಪಶು ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ..

ಕರ್ನಾಟಕ ಸರ್ಕಾರದ ಮುಖ್ಯಮಂತ್ರಿUಳಾದ ಸಿದ್ದರಾಮಯ್ಯ ನವರು ಕಾರ್ಯಕ್ರಮ ಉದ್ಘಾಟನೆ ಮಾಡಲ್ಲಿದ್ದಾರೆ.
ಉದ್ಘಾಟನಾ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ಭಾರಿ ಮತ್ತು ಮಧ್ಯಮ ನೀರಾವರಿ ಸಚಿವರಾದ ಡಿ.ಕೆ.ಶಿವಕುಮಾರ, ಲೋಕೊಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ,

 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳಕರ ಹಾಗೂ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ, ಮುಖ್ಯ ಅತಿಥಿಗಳಾಗಿ ಆಗಮಿಸಲ್ಲಿದ್ದಾರೆ.
ಅಥಣಿ ಶಾಸಕರಾದ ಲಕ್ಷ್ಮಣ ಸಂ. ಸವದಿಯವರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ, ವಿಧಾನಸಭೆ ಮುಖ್ಯ ಸಚೇತರಾದ ಅಶೋಕ ಮ. ಪಟ್ಟನ ವಿಶೇಷ ಆಮಂತ್ರಿತರಾಗಿ ಆಗಮಿಸಲಿದ್ದಾರೆ..

ಉತ್ತರ ಕನ್ನಡ ಲೋಕಸಭೆ ಸಂಸದರಾದ ಅನಂತಕುಮಾರ ಹೆಗಡೆ, ಚಿಕ್ಕೋಡಿ ಲೋಕಸಭೆ ಸಂಸದರಾದ ಅಣ್ಣಾಸಾಹೇಬ ಜೋಲ್ಲೆ, ರಾಜ್ಯಸಭೆ ಸಂಸದರಾದ ಈರಣ್ಣ ಕಡಾಡಿ, ಬೆಳಗಾವಿ ಸಂಸದರಾದ ಮಂಗಳ ಸುರೇಶ ಅಂಗಡಿ ಎಲ್ಲರೂ ಕಾರ್ಯಕ್ರಮದ ಗೌರವಾನ್ವಿತ ಅತಿಥಿಗಳಾಗಿ ಆಗಮಿಸಲಿದ್ದಾರೆ..

ಜಿಲ್ಲೆಯ ಸಂಸತ್ ಲೋಕಸಭೆ ರಾಜ್ಯ ಸಭೆ ಶಾಸಕರುಗಳು (ವಿಧಾನ ಸಭೆ/ವಿಧಾನ ಪರಿಷತ್), ಹಾಗೂ ವಿವಿಧ ಜನಪ್ರತಿನಿಧಿಗಳು ಉಪಸ್ಥಿತರಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.