Belagavi News In Kannada | News Belgaum

ಬಸವೇಶ್ವರ ಪ್ರತಿಮೆ ಅನಾವರಣ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಸಿಎಂ ಆದ ಬಳಿಕ ಮೊದಲ ಬಾರಿಗೆ ಸಿದ್ಧರಾಮಯ್ಯ ಅವರು ಶುಕ್ರವಾರ ಬೆಳಗಾವಿಗೆ ಆಗಮಿಸಿದ್ದು, ಜಿಲ್ಲೆಯ ಅಥಣಿ ನಗರದ ಬಸವೇಶ್ವರ ವೃತ್ತದಲ್ಲಿರುವ ಅಶ್ವಾರೂಢ ಜಗಜ್ಯೋತಿ ಬಸವೇಶ್ವರ ಪ್ರತಿಮೆಯನ್ನು ಅನಾವರಣಗೊಳಿಸಿದರು..

 

ಈ ವೇಳೆ ಮಾತನಾಡಿದ ಅವರು, ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದು ಬಸವಾದಿ ಶರಣರಿಗೆ ಗೌರವವನ್ನು ಸಲ್ಲಿಸಲಾಗುತ್ತಿದೆ. ಬಸವಣ್ಣನವರು ಹಾಕಿ ಕೊಟ್ಟ ಮಾರ್ಗದಲ್ಲಿ ನಡೆಯುವ ಪ್ರೇರಣೆ ಎಲ್ಲರಿಗೂ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನುಡಿದಂತೆ ನಡೆಯಲು ಪ್ರಾಮಾಣಿಕ ಪ್ರಯತ್ನ: ನಾವೆಲ್ಲರೂ ನುಡಿದಂತೆ ನಡೆಯಬೇಕು ಎಂಬ ವಿಚಾರವನ್ನು ಬಸವಾದಿ ಶರಣರು ನಮ್ಮ ಸಮಾಜಕ್ಕೆ ನೀಡಿದರು.

 

ಈ ವಿಚಾರದಲ್ಲಿ ನಂಬಿಕೆಯಿರುವ ನಮ್ಮ ಸರ್ಕಾರ ನುಡಿದಂತೆ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಗೃಹಜ್ಯೋತಿ, , ಶಕ್ತಿ, ಅನ್ನಭಾಗ್ಯ, ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯನ್ನು ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ನೇತೃತ್ವದಲ್ಲಿ ಚಾಲನೆ ನೀಡಲಾಗುವುದು. ಈ ಕಾರ್ಯಕ್ರಮಕ್ಕೆ ಸುಮಾರು 30 ಸಾವಿರ ಕೋಟಿ ರೂ. ವೆಚ್ಚವಾಗಲಿದೆ ಎಂದರು..

ಸಿಎಂ ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್​, ಶಾಸಕ ಲಕ್ಷ್ಮಣ್ ಸವದಿ, ರಾಜು ಕಾಗೆ, ಮಹೇಂದ್ರ ತಮ್ಮಣ್ಣವರ್ ಸೇರಿ ಹಲವರು ಸಾಥ್​ ನೀಡಿದರು.