Belagavi News In Kannada | News Belgaum

ವಿಶ್ವ ಕುಬ್ಜರ ಕ್ರೀಡಾಕೂಟದಲ್ಲಿ ಸಾಧನೆಗೈದ ಗೋಕಾಕ ಯುವತಿ ; ಯುವನಾಯಕಿ ಪ್ರಿಯಾಂಕಾ ಜಾರಕಿಹೊಳಿ, ಯುವನಾಯಕ ರಾಹುಲ್ ಜಾರಕಿಹೊಳಿ ಅವರಿಂದ ಸತ್ಕಾರ

ಗೋಕಾಕ : ಜರ್ಮನಿಯಲ್ಲಿ ನಡೆದ 8ನೇ ವಿಶ್ವ ಕುಬ್ಜರ ಕ್ರೀಡಾಕೂಟದಲ್ಲಿ ಭಾಗವಹಿಸಿದ ಬೆಳಗಾವಿಯ ಗೋಕಾಕ ತಾಲೂಕಿನ ಚಿಕ್ಕನಂದಿ ಗ್ರಾಮದ ಮಂಜುಳಾ ಶಿವಾನಂದ ಗೊರಗುದ್ದಿ ಅವರು ಒಂದೊಂದು ಚಿನ್ನ, ಬೆಳ್ಳಿ, ಕಂಚಿನ ಪದಕ ಗೆದ್ದು ಸಾಧನೆ ಮಾಡಿದ್ದು ಅವರಿಗೆ ಯುವ ನಾಯಕರಾದ ಪ್ರಿಯಾಂಕಾ ಜಾರಕಿಹೊಳಿ ಹಾಗೂ ರಾಹುಲ್ ಜಾರಕಿಹೊಳಿ ಅವರು ಸತ್ಕಾರ ಮಾಡಿ ಅಭಿನಂದನೆ ಸಲ್ಲಿಸಿದರು..

 

ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದ ಮಂಜುಳಾ ಶಿವಾನಂದ ಗೊರಗುದ್ದಿ ಅವರು ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎನ್ನುವಂತೆ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಮುಡಿಗೇರಿಸಿಕೊಂಡರೆ, ಚಕ್ರ ಎಸೆತದಲ್ಲಿ ಎರಡನೇ ಸ್ಥಾನ ಗಳಿಸುವ ಮೂಲಕ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ..

 

ಹಾಗೆಯೇ, ಜಾವೆಲಿನ್ ಥ್ರೋದಲ್ಲಿ ಮೂರನೇ ಸ್ಥಾನ ಗಳಿಸಿ ಕಂಚಿನ ಪದಕ ಗೆದ್ದಿದ್ದರು.ಇವರಿಗೆ ಜರ್ಮನ್ ಗೆ ಹೋಗಲು ಈ ಹಿಂದೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಪ್ರೋತ್ಸಾಹ ಧನವನ್ನು ನೀಡಿದ್ದರು..

ಈ ಸಂದರ್ಭದಲ್ಲಿ ಮುಖಂಡರಾದ ಪಾಂಡು ದೊಡಮನಿ, ಜುಬೇರ್ ಮಿರ್ಜಾಬಾಯಿ ಹಾಗೂ ಅನೇಕರು ಉಪಸ್ಥಿತರಿದ್ದರು.