ಸಾರ್ವಜನಿಕರ ಸಮಸ್ಯೆ ಆಲಿಸಿದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ನಗರದ ಕಾಂಗ್ರೆಸ್ ಕಚೇರಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.
ವಿವಿಧ ಕಡೆಯಿಂದ ಹೆಚ್ಚು ಜನ ಬಂದಿದ್ದ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಅವರ ಮನವಿಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿದ್ದರು. ಅಲ್ಲದೇ ಕೆಲ ಅಹವಾಲಗಳಿಗೆ ಸರ್ಕಾರಿ ಅಧಿಕಾರಿಗಳ ಮೂಲಕ ಸ್ಥಳದಲ್ಲಿಯೇ ಸಮಸ್ಯೆಗಳನ್ನು ಬಗೆಹರಿಸಿದರು.
ಜನರ ಹಲವಾರು ಮನವಿಗಳನ್ನು ಸ್ವೀಕರಿಸಿ, ಸದ್ಯದಲ್ಲಿ ಅವರೆಲ್ಲರ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಸಚಿವ ಸತೀಶ ಜಾರಕಿಹೊಳಿ ಅವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಇತರರು ಇದ್ದರು./////