Belagavi News In Kannada | News Belgaum

ಬಿಹಾರದಲ್ಲಿ ಮನೆಗೆ ನುಗ್ಗಿ ಪತ್ರಕರ್ತನನ್ನು ಗುಂಡಿಕ್ಕಿ ಹತ್ಯೆ

ಬಿಹಾರ: ಅಪರಿಚಿತ ವ್ಯಕ್ತಿಗಳ ಗುಂಪೊಂದು ಮನೆಗೆ ನುಗ್ಗಿ ಪತ್ರಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ.

ಬಿಹಾರ ಮೂಲದ ಪತ್ರಕರ್ತ ವಿಮಲ್ ಕುಮಾರ್ (41) ಮೃತ ದುರ್ದೈವಿಯಾಗಿದ್ದು ಇವರು ದೈನಿಕ್ ಜಾಗರಣ ಪತ್ರಿಕೆಯಲ್ಲಿ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ.

ವಿಮಲ್ ಕುಮಾರ್ ಅವರು ಪತ್ನಿ ಮತ್ತು ಮಕ್ಕಳೊಂದಿಗೆ ರಾಣಿಗಂಜ್ ಪ್ರದೇಶದ ಪ್ರೇಮ್ ನಗರದಲ್ಲಿ ವಾಸಿಸುತ್ತಿದ್ದು ಶುಕ್ರವಾರ ಮುಂಜಾನೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ವಿಮಲ್ ಕುಮಾರ್ ಅವರ ಮನೆಯೊಳಗೆ ಪ್ರವೇಶಿಸಿ ಮಾತನಾಡಲಿದೆ ಎಂದು ಮನೆಯಿಂದ ಹೊರಗೆ ಕರೆದಿದ್ದಾರೆ ಈ ವೇಳೆ ಮನೆಯಿಂದ ಹೊರ ಬಂದ ವಿಮಲ್ ಕುಮಾರ್ ನ ಮೇಲೆ ಗುಂಡು ಹಾರಿಸಿದ್ದಾರೆ, ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿಮಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗುಂಡಿನ ಸದ್ದು ಕೇಳಿ ಅಕ್ಕಪಕ್ಕದವರು ಬಂದು ನೋಡಿದಾಗ ವಿಮಲ್ ರಕ್ತದ ಮಡುವಿನಲ್ಲಿ ಬಿದ್ದಿದ್ದು ಈ ವೇಳೆ ದುಷ್ಕರ್ಮಿಗಳು ಜನರಿಗೆ ಬಂದೂಕು ತೋರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ./////