Belagavi News In Kannada | News Belgaum

ಬೆಳಗಾವಿಯಲ್ಲಿ ಸೆ. 9ರಂದು ಲೋಕ ಅದಾಲತ್

ಬೆಳಗಾವಿ:  ಬೆಳಗಾವಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಶ ಎಲ್. ವಿಜಯಲಕ್ಷ್ಮೀ ದೇವಿ ಅವರ ಮಾರ್ಗದರ್ಶನದಲ್ಲಿ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಸೆ. 9ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ಎಲ್ಲಾ ನ್ಯಾಯಾಧೀಶರ ಹಾಗೂ ವಕೀಲರ ಸಹಯೋಗದಲ್ಲಿ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ.
ಲೋಕ ಅದಾಲತ್ ವ್ಯಾಪ್ತಿಯ ಪ್ರಕರಣ: ವೈವಾಹಿಕ ಕೌಟುಂಬಿಕ ಮತ್ತು ಪಾಲು ವಿಭಾಗಕ್ಕೆ, ಬ್ಯಾಂಕುಗಳಿಗೆ ಸಂಬಂಧಪಟ್ಟ ಪ್ರಕರಣಗಳು ಹಾಗೂ ಚೆಕ್‌ಬೌನ್ಸ ಪ್ರಕರಣ, ಐಪಿಸಿ ರಾಜಿಯಾಗಬಲ್ಲ ಪ್ರಕರಣಗಳು, ಹಣಕಾಸಿನ ದಾವೆಗಳು, ಸಿವಿಲ್ ವ್ಯಾಜ್ಯಗಳು, ಮೋಟಾರ ವಾಹನ ಅಪಘಾತ ಪರಿಹಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಕಂದಾಯ ಪ್ರಕರಣಗಳು ಮತ್ತು ಇತರ ಎಲ್ಲಾ ರೀತಿಯ ರಾಜಿಯಾಗಬಹುದಾದಂತಹ ಪ್ರಕರಣಗಳನ್ನು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ತೆಗೆದುಕೊಂಡು ರಾಜಿ ಸಂಧಾನದ ಮುಖಾಂತರ ಇತ್ಯರ್ಥಪಡಿಸಲಾಗುವುದು. ಬ್ಯಾಂಕುಗಳು, ಕಕ್ಷಿದಾರರು ಹಾಗೂ ಜನ ಸಾಮಾನ್ಯರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಬೆಳಗಾವಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕಾ ಕಾನೂನು ಸೇವಾ ಸಮಿತಿಗಳನ್ನು ಕೂಡಲೇ ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಬೆಳಗಾವಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ./////