ಯಾವ ಬಿಜೆಪಿ ಶಾಸಕರೂ ಕಾಂಗ್ರೆಸ್ಗೆ ಹೋಗಲ್ಲ: ಮಾಜಿ ಸಚಿವ ಗೋವಿಂದ ಕಾರಜೋಳ

ಬೆಳಗಾವಿ: ಯಾವ ಬಿಜೆಪಿ ಶಾಸಕರು ಪಕ್ಷ ಬಿಟ್ಟು ಹೋಗುತ್ತಾರೆ ಎಂಬ ಬಗ್ಗೆ ನಿಖರವಾಗಿ ಹೇಳಿಲ್ಲ. ಕೇವಲ ಮಾಧ್ಯಮಗಳಲ್ಲಿ ಊಹಾಪೋಹಗಳು ಸೃಷ್ಟಿ ಆಗುತ್ತಿವೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಹೇಳಿಕೆ ನೀಡಿದ್ದಾರೆ.
ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜತೆಗೆ ಮಾತನಾಡಿದ ಅವರು, ನನ್ನ ಮಾಹಿತಿ ಪ್ರಕಾರ ಯಾರು ಪಕ್ಷ ಬಿಟ್ಟು ಹೋಗುವವರಿಲ್ಲ. ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ಹಾಗಾಗಿ ಬಿಜೆಪಿ ಬಿಟ್ಟು ಯಾಕೆ ಹೋಗುತ್ತಾರೆ ಎಂದು ಮಾಜಿ ಸಚಿವರು ಪ್ರಶ್ನಿಸಿದರು.
ಈ ಮೂರು ತಿಂಗಳಲ್ಲಿ ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಕಾರ್ಯ ಶೂನ್ಯವಾಗಿದೆ. ನೌಕರರ ವರ್ಗಾವಣೆ ದಂಧೆ ಮಾಡಿಕೊಂಡು ಕುಳಿತಿರುವ ಕಾಂಗ್ರೆಸ್ ಪಕ್ಷಕ್ಕೆ ಯಾರೂ ಹೋಗುವುದಿಲ್ಲ. ರಾತ್ರಿ ಕಂಡ ಬಾವಿಗೆ ಹಗಲು ಯಾರು ಬೀಳುವುದಿಲ್ಲ ಎನ್ನುವುದು ನನ್ನ ಅಭಿಪ್ರಾಯ ಎಂದು ಗೋವಿಂದ ಕಾರಜೋಳ ಲೇವಡಿ ಮಾಡಿದರು./////