Belagavi News In Kannada | News Belgaum

ಕೈಗಾರಿಕೆಗಳ ಸ್ಥಾಪನೆಗೆ ಅವಕಾಶ ನೀಡಿ: ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ನೂತನ ಕೈಗಾರಿಕೆಗಳ ಸ್ಥಾಪನೆಗೆ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿಯ (ಏIಂಆಃ) ಅಧಿಕಾರಿಗಳು ಅವಕಾಶ ಮಾಡಿಕೊಡಬೇಕು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ (ಎಚಿgಚಿಜish Sheಣಣಚಿಡಿ) ಮನವಿ ಮಾಡಿದ್ದಾರೆ.

ತಮ್ಮ ಗೃಹ ಕಚೇರಿಯಲ್ಲಿ ಕರ್ನಾಟಕ ಕೈಗಾರಿಕ ಪ್ರದೇಶಗಳ ಅಭಿವೃದ್ಧಿ ಮಂಡಳಿ ಮತ್ತು ಕೈಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು. ಈ ವೇಳೆ ಅವರು, ಎಫ್.ಎಂ.ಜಿ.ಸಿ. ಕ್ಲಸ್ಟರ್ ಹಾಗೂ ಇತರ ಕೈಗಾರಿಕೆಗಳನ್ನು ಸ್ಥಾಪಿಸಲು ಅಗತ್ಯವಿರುವ ಖಾಲಿ ಪ್ರದೇಶಗಳನ್ನು ಕೈಗಾರಿಕೋದ್ಯಮಿಗಳಿಗೆ ಒದಗಿಸಬೇಕು. ಈ ಮೂಲಕ ಕೈಗಾರಿಕೆಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಹೊಸ ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯ ಇರುವ ಸವಲತ್ತು ಮತ್ತು ಅನುಕೂಲಗಳನ್ನು ಅಧಿಕಾರಿಗಳು ಮಾಡಿಕೊಡಬೇಕು. ಜಿಲ್ಲೆಯಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಒತ್ತು ನೀಡಬೇಕು. ಇದರಿಂದ ನಗರ ಅಭಿವೃದ್ಧಿ ಹೊಂದಲಿದೆ ಎಂದು ಅವರು ತಿಳಿಸಿದ್ದಾರೆ. ಸಭೆಯಲ್ಲಿ ಕೆಐಎಡಿಬಿ ಅಭಿವೃದ್ಧಿ ಅಧಿಕಾರಿಗಳಾದ ಬಿ.ಟಿ ಪಾಟೀಲ್, ನವೀನ್ ಹುಲ್ಲೂರ್, ಉಪ ಅಭಿವೃದ್ಧಿ ಅಧಿಕಾರಿ ಗೋವಿಂದ್ ಭಜಂತ್ರಿ, ಇಂಜಿನಿಯರ್ ಎಸ್.ಎಂ ಕಣಬೂರ ಹಾಗೂ ಇತರರು ಉಪಸ್ಥಿತರಿದ್ದರು.//////