Belagavi News In Kannada | News Belgaum

ಅರ್ಜಿ ಆಹ್ವಾನ : ಯುವತಿ ನಾಪತ್ತೆ

ನಿಷೇಧಾಜ್ಞೆ ಜಾರಿ

ಯುವತಿ ನಾಪತ್ತೆ

ಬೆಳಗಾವಿ, ಆ.22 : ಕಾರವಾರ ತಾಲೂಕಿನ ಕಾಜುಬಾಗ ಗ್ರಾಮದ ನಿವಾಸಿಯಾದ ಐಶ್ವರ್ಯ ರವೀಂದ್ರ ಕಾಂಬಳೆ(22) ಇವರು ಆಗಸ್ಟ್ 18, 2023 ರಂದು ಮದ್ಯಾಹ್ನ 1 ಗಂಟೆಗೆ ಕೆಎಲ್‍ಇ ಆಸ್ಪತ್ರೆಯಿಂದ ಕಾಣೆಯಾಗಿದ್ದಾರೆ ಎಂದು ಇವರ ತಾಯಿಯಾದ ಮನಿಷಾ ರವೀಂದ್ರ ಕಾಂಬಳೆ ಅವರು ಎ.ಪಿ.ಎಮ್.ಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕಾಣೆಯಾದ ಯುವತಿಯ ಚಹರೆ ಪಟ್ಟಿ:
5 ಪೂಟ 8 ಇಂಚು ಎತ್ತರ, ಗೋಧಿಗೆಂಪು ಮೈಬಣ, ಸದೃಢ ಮೈಕಟು ಇದ್ದು ಕೋಂಕಣಿ, ಹಿಂದಿ, ಇಂಗ್ಲೀಷ, ಮರಾಠಿ, ಹಾಗೂ ಕನ್ನಡ ಭಾಷೆ ಮಾತನಾಡುತ್ತಾರೆ.
ಈ ರೀತಿ ಚೆಹರೆಯುಳ್ಳ ಯುವತಿಯ ಬಗ್ಗೆ ದೊರೆತಲ್ಲಿ ಪೊಲೀಸ್ ಆಯುಕ್ತರು ಬೆಳಗಾವಿ ನಗರ ಅಥವಾ ಪೊಲೀಸ್ ಇನ್ಸಪೆಕ್ಟರ್ ಎ.ಪಿ.ಎಂ.ಸಿ ಪೊಲೀಸ ಠಾಣೆ ಬೆಳಗಾವಿ ಎ.ಪಿ.ಎಮ್.ಸಿ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ (0831) 2405250. ಮೋಬೈಲ್ ಸಂ.9480804106, 9480804047. ಗೆ ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///

ಕಡ್ಡಾಯವಾಗಿ ಯು.ಡಿ.ಐ.ಡಿ. ಪಡೆಯಲು ಸೂಚನೆ

ಬೆಳಗಾವಿ, ಆ.22 : ಯು.ಡಿ.ಐ.ಡಿ. ಗುರುತಿನ ಚೀಟಿ ಪಡೆದುಕೊಳ್ಳುವಂತೆ ವಿಕಲಚೇತನರ ಮನೆ ಬಾಗಿಲಿಗೆ ಯು.ಡಿ.ಐ.ಡಿ. ಕಾರ್ಡ” ಎಂಬ ಘೋಷವಾಕ್ಯದಡಿ ಆಗಸ್ಟ್ ತಿಂಗಳನ್ನು ಮಾಸಾಚರಣೆಯನ್ನಾಗಿ ಆಚರಿಸಲಾಗುತ್ತಿದೆ.
ಬೆಳಗಾವಿ ಜಿಲ್ಲೆಯಲ್ಲಿ ವಿಕಲಚೇತನರ ಯು.ಡಿ.ಐ.ಡಿ. ಕಾರ್ಡ ಪಡೆಯಲು ಅರ್ಜಿ ಸಲ್ಲಿಸಿ ಬಹಳ ದಿನಗಳು/ ತಿಂಗಳು/ವರ್ಷಗಳು ಮೀರಿದ್ದರು ಇಲ್ಲಿಯವರೆಗೆ ತಮ್ಮ ತಾಲೂಕಿನ ಅಥವಾ ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ವೈದ್ಯಕೀಯ ಮಂಡಳಿಯಲ್ಲಿ ತಮ್ಮ ಯು.ಡಿ.ಐ.ಡಿ. ಕಾರ್ಡ ಅನುಮೋದನೆ ಪಡೆಯದೆ ಇರುವ ವಿಕಲಚೇತನರು ಆಗಸ್ಟ-31ನೇ ತಾರೀಖಿನ ವರೆಗೆ ಅಂದರೆ ದೈಹಿಕ ವಿಕಲಚೇತನರು ಮತು ್ತಅಂಧರು ಸಂಬಂಧಪಟ್ಟ ತಾಲೂಕು ಆಸ್ಪತ್ರೆಯ ವೈದ್ಯಕೀಯ ಮಂಡಳಿಯಲ್ಲಿ ಮತ್ತು ಮಾನಸಿಕ ಅಸ್ವಸ್ಥರು, ಬುದ್ಧಿಮಾಂದ್ಯರು ಹಾಗೂ ಶ್ರವಣದೋಷವುಳ್ಳ ವಿಕಲಚೇತನರು ಜಿಲ್ಲಾ ಆಸ್ಪತ್ರೆಯ ವೈದ್ಯಕೀಯ ಮಂಡಳಿಯನ್ನು ಸಂಪರ್ಕಿಸಿ ಕಡ್ಡಾಯವಾಗಿ ತಮ್ಮ ಯು.ಡಿ.ಐ.ಡಿ. ಕಾರ್ಡ ಅನುಮೋದಿಸಿಕೊಳ್ಳಬಹುದಾಗಿದೆ.
ತಪ್ಪಿದಲ್ಲಿ ತಮ್ಮ ಅರ್ಜಿಯನ್ನು ವಿಲೆಗೆ ಹಾಕಲಾಗುವುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////

ನಿಷೇಧಾಜ್ಞೆ ಜಾರಿ

ಬೆಳಗಾವಿ, ಆ.22: ಬೆಳಗಾವಿ ನಗರದ ಸರ್ಕಾರಿ ಐಟಿಐ, (ಪುರುಷ), ಕಾಲೇಜು, ಉದ್ಯಮಬಾಗ 01 ಪರೀಕ್ಷಾ ಕೇಂದ್ರದಲ್ಲಿ ಆಗಸ್ಟ್ 18, 2023 ರಿಂದ ಆ.24 ವರೆಗೆ ರಾಜ್ಯ ವೃತ್ತಿ ಪರೀಕ್ಷೆ (ಎನ್‍ಸಿವಿಟಿ) ಪೂರಕ ಪರೀಕ್ಷೆಗಳು ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗಳ ಕಾಲಕ್ಕೆ ದಂಡ ಪ್ರಕ್ರಿಯೆ ಸಂಹಿತೆಯ ಕಲಂ 144 ಸಿ.ಅರ್.ಪಿ.ಸಿ ಅಡಿಯಲ್ಲಿ ಪರೀಕ್ಷಾ ಕೇಂದ್ರ ಸುತ್ತಲೂ 200 ಮೀ. ಅಂತರದಲ್ಲಿ ಪರೀಕ್ಷೆಗಳು ನಡೆಯುವ ಸಮಯದಲ್ಲಿ ನಿಷೇದಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾ ಹೆಚ್ಚುವರಿ ದಂಡಾಧಿಕಾರಿ ಎಸ್.ಎನ್ ಸಿದ್ರಾಮಪ್ಪಾ ಅವರು ಆದೇಶ ಹೊರಡಿಸಿರುತ್ತಾರೆ.
ನಿಷೇಧಾಜ್ಞೆಯ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲು 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ ಹಾಗೂ ಪರೀಕ್ಷಾ ಕೇಂದ್ರದ ಸುತ್ತಲು 200 ಮೀಟರ ಸುತ್ತಳತೆಯಲ್ಲಿ ಅಭ್ಯರ್ಥಿಗಳು, ಶಾಲಾ/ ಕಾಲೇಜ ಸಿಬ್ಬಂದಿ ಜನರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಹೊರತುಪಡಿಸಿ ಸಾರ್ವಜನಿಕರು, ಪಾಲಕರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಯಾವುದೇ ಸಭೆ/ ಸಮಾರಂಭಗಳು ನಡೆಯದಂತೆ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ.
ಪರೀಕ್ಷಾ ಕೇಂದ್ರದ ಸುತ್ತಲು ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗಧೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕೂ ಅಥವಾ ದೇಹಕ್ಕೆ ಅಪಾಯವನ್ನುಂಟು ಮಾಡಲು ಉಪಯೋಗಿಸಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವದನ್ನು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.
ಪರೀಕ್ಷಾ ಕೇಂದ್ರದ ಸುತ್ತಲು ಕಲ್ಲುಗಳನ್ನು ಕ್ಷಾರ ಪದಾರ್ಥ ಇಲ್ಲವೇ ಸ್ಪೋಟಕ ವಸ್ತುಗಳು ಯಾವುದೇ ದಹನಕಾರಿ ವಸ್ತುಗಳು ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಮತ್ತು ಶೇಖರಿಸುವುದನ್ನು ನಿಷೇಧಿಸಲಾಗಿದೆ.
ನಿಷೇಧಾಜ್ಞೆಯ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲು ಯಾವುದೇ ವ್ಯಕ್ತಿ ಸಾರ್ವಜನಿಕರಾಗಲಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರೆ ಆಕ್ಷೇಪಾರ್ಹ ವಸ್ತುಗಳು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಯಾವುದೇ ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂಥಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಅಲ್ಲದೆ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು.
ಪರೀಕ್ಷಾ ಕೇಂದ್ರದ ಸುತ್ತಲಿನ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖನ ಕೊಡುವುದು ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೈತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.
ನಿಷೇಧಾಜ್ಞೆಯ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ಅಂತರದಲ್ಲಿ ದ್ವನಿವರ್ಧಕ ಉಪಯೋಗಿಸುವದನ್ನು ನಿಷೇಧಿಸಲಾಗಿದೆ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಲೂ ಇರುವ ಸೈಬರ್ ಕೆಫೆ, ಝೆರಾಕ್ಸ್ ಅಂಗಡಿ ಹಾಗೂ ಇನ್ನಿತರ ಅಂತರ್ಜಾಲ ಕೇಂದ್ರಗಳನ್ನು ನಿಷೇಧಾಜ್ಞೆಯ ಕಾಲಕ್ಕೆ ಕಡ್ಡಾಯವಾಗಿ ಮುಚ್ಚಲು ಆದೇಶಿಸಲಾಗಿದೆ.
ಈ ಆಜ್ಞೆಯು ಅಂತ್ಯಕ್ರಿಯೆ ಮೆರವಣಿಗೆಗಳಿಗೆ ಮತ್ತು ಇನ್ನಿತರ ಕಾರಣಗಳಿಗಾಗಿ ಅನುಮತಿ ಪಡೆದು ತೆಗೆಯಿಸಲಾದ ಮೆರವಣಿಗೆಗಳಿಗೆ ಅನ್ವಯಿಸುವದಿಲ್ಲ.
ಸದರಿ ಆಜ್ಞೆಯನ್ನು ಉಲ್ಲಂಘಿಸುವವರ ವಿರುದ್ದ ಕಲಂ 188 ಭಾರತೀಯ ದಂಡ ಸಂಹಿತೆಯ ಪ್ರಕಾರ ಕ್ರಮ ಜರುಗಿಸಲಾಗುವುದು ನಗರ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾ ಹೆಚ್ಚುವರಿ ದಂಡಾಧಿಕಾರಿ ಎಸ್. ಎನ್. ಸಿದ್ರಾಮಪ್ಪಾ ಅವರು ಆದೇಶದಲ್ಲಿ ತಿಳಿಸಿದ್ದಾರೆ.////

ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ: ವಿವಿಧ ಸೌಲಭ್ಯಗಳಿಗಾಗಿ ಅರ್ಜಿ

ಆಹ್ವಾನ

ಬೆಳಗಾವಿ, ಆ.22 :ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ವಿವಿಧ ಯೋಜನೆಗಳಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ
ಯೋಜನೆಗಳಡಿಯಲ್ಲಿ ಸಾಲ ಸೌಲಭ್ಯವನ್ನು ಪಡೆಯಲು ಅರ್ಜಿ ಸಲ್ಲಿಸಲು ಸೆಪ್ಟಂಬರ್.18 2023 ರಂದು ಆನ್‍ಲೈನ್ ಏಚಿಛಿಜಛಿ ಏಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹತೆಗಳು
ಸಾಮಾನ್ಯ ವರ್ಗದಲ್ಲಿ ಆರ್ಯವೈಶ್ಯ ಸಮುದಾಯಕ್ಕೆ ಸೇರಿರಬೇಕು, ಜಾತಿ ಆದಾಯ ಪ್ರಮಾಣ ಪತ್ರ ನಮೂನೆ- ಜಿ ಯಲ್ಲಿ ಪಡೆರಬೇಕು, ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು, ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು, ಹಾಗೂ ಅವರ ಖಾಯಂ ವಿಳಾಸ ಕರ್ನಾಟಕ ರಾಜ್ಯದಲ್ಲಿರಬೇಕು, ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡನೆ ಮಾಡಿರಬೇಕು,
ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಟ್ ಮಾಡಿಸಿರಬೇಕು,
ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33% ವಿಕಲಚೇತನರಿಗೆ ಶೇ 5% ಹಾಗೂ ತೃತೀಯ ಲಿಂಗಗಳಿಗೆ ಶೇ.5 ಮಿಸಲಾತಿ ಇರಿಸಲಾಗಿದೆ. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ, ಅರಿವು ಶೈಕ್ಷಣಿಕ ಸಾಲ ಯೋಜನೆಗಳಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯ ಅರ್ಹತೆಗಳು:
ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.3 ಲಕ್ಷ ಮಿತಿಯೊಳಗಿರಬೇಕು, ಅರ್ಜಿದಾರರು 18 ವರ್ಷ ಮೇಲ್ಪಟ್ಟು 45 ವರ್ಷ ಒಳಗಿನವರಾಗಿರಬೇಕು, ಯೋಜನೆಗಳಲ್ಲಿ ಕನಿಷ್ಠ ರೂ.50 ಸಾವಿರ ಗಳಿಂದ ಗರಿಷ್ಠ 1 ಲಕ್ಷದ ವರಗೆ ಸಾಲ ಒದಗಿಸಲಾಗುವುದು, ಮೊತ್ತದಲ್ಲಿ ಶೇ.20 ರಷ್ಟು ಸಹಾಯಧನ ಹಾಗೂ ಶೇ.80ರಷ್ಟು ಸಾಲವನ್ನು ವಾರ್ಷಿಕ ಶೇ.4 ರ ಬಡ್ಡಿ ದದದಲ್ಲಿ ಮಂಜೂರು ಮಾಡಲಾಗುವುದು. 2 ತಿಂಗಳ ವಿರಾಮ ಅವಧಿ ಇರುತ್ತದೆ, ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.
ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆಯ ಅರ್ಹತೆಗಳು
ಅರ್ಜಿದಾರರ ಕುಟುಂಬ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ 6 ಲಕ್ಷ ರೂ ಗಳ ಮಿತಿಯೊಳಗಿರಬೇಕು, ಅರ್ಜಿದಾರರು 21 ವರ್ಷ ಮೇಲ್ಪಟ್ಟು 55 ವರ್ಷದ ಒಳಗಿನವರಾಗಿರಬೇಕು, ಯೋಜನೆಯಡಿ ಆಹಾರ ವಾಹಿನಿ ಪ್ರಾರಂಭಿಸಲು ಬ್ಯಾಂಕ್ ಸಹಕಾರಿ ಸಂಘಗಳಿಂದ ಸಾಲ ಪಡೆಯಬೇಕು ಹಾಗೂ ನಿಗಮದಿಂದ ಗರಿಷ್ಠ . 2 ಲಕ್ಷ ರೂ ಗಳ ಸಹಾಯಧನವನ್ನು ನೀಡಲಾಗುವುದು,
ವಾಸವಿ ಜಲಶಕ್ತಿ ಯೋನೆಯ ಅರ್ಹತೆಗಳು:
ಯೋಜನೆಯಡಿ 2 ರಿಂದ 5 ಎಕರೆ ಕೃಷಿ ಭೂಮಿ ಹೊಂದಿದವರಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲು ಸಾಲ ಸಹಾಯಧನವನ್ನು ನೀಡಲಾಗುವುದು, ಅರ್ಜಿದಾರ ಕುಟುಂಬ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ 6 ಲಕ್ಷ ರೂ ಗಳ ಮಿತಿಯೊಳಗಿರಬೇಕು, ಅರ್ಜಿದಾರರು 21 ವರ್ಷ ಮೇಲ್ಪಟ್ಟು 50 ವರ್ಷದ ಒಳಗಿನವರಾಗಿರಬೇಕು, ಈ ಯೋಜನೆಯಡಿ ಗರಿಷ್ಠ 2 ಲಕ್ಷ ರೂ ಗಳ ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿ ದರದಲ್ಲಿ ಒದಗಿಸಲಾಗುವದು ಹಾಗೂ ವಿದ್ಯುದ್ದೀಕರಣಕ್ಕಾಗಿ ರೂ.50 ಸಾವಿರ ಸಹಾಯಧನ ನೀಡಲಾಗುವುದು, 6 ತಿಂಗಳ ವಿರಾಮಾವಧಿ ಇರುತ್ತದೆ ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.
ಅರಿವು ಶೈಕ್ಷಣಿಕ ಸಾಲ ಯೋಜನೆಯ ಅರ್ಹತೆಗಳು :

ಯೋಜನೆಯಲ್ಲಿ ಸಿ.ಇ. ಟಿ. ಎನ್.ಇ.ಇ. ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀಣ9ರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿಹೆಚ್.ಡಿನಲ್ಲಿ ವ್ಯಾಸಂಗ ಮಾಡುವ ಆರ್ಯವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ 1 ಲಕ್ಷ ರೂ ಗಳ ಸಾಲವನ್ನು ಶೇ.2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು, ವ್ಯಾಸಂಗ ಪೂರ್ಣಗೊಂಡ ನಂತರ 4 ತಿಂಗಳ ವಿರಾಮಾವಧಿ ಇರುತ್ತದೆ,ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು,ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು, ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ 6 ಲಕ್ಷ ರೂ ಗಳ ಮಿತಿಯೊಳಗಿರಬೇಕು. (Counselling ಮುಗಿದ ನಂತರ ಅರ್ಜಿ ಅಹ್ವಾನ ಮಾಡಲಾಗುವುದು)
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9448451111 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಆರ್ಯವೈಶ್ಯ ಸಮುದಾಯದ ಅಭಿವೃದ್ದಿ ನಿಗಮ ಬೆಳಗಾವಿ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///