ಬಸ್-ಕಾರು ಮಧ್ಯೆ ಭೀಕರ ಅಪಘಾತ: ಸ್ಥಳದಲ್ಲೇ ಐವರ ದುರ್ಮರಣ

ರಾಮನಗರ: ಕಾರಿಗೆ ಕೆಎಸ್‌ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿನಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೆಮ್ಮಾಳೆ ಗೇಟ್ ಬಳಿ ನಡೆದಿದೆ.
ಕಾರಿನಲ್ಲಿರುವವರು ಮಲೆ ಮಹಾದೇಶ್ವರ ಬೆಟ್ಟದಿಂದ ವಾಪಸ್ ಬರುವಾಗ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಅಪಘಾತದಲ್ಲಿ ಮೃತಪಟ್ಟವರ ಹೆಸರು ಇನ್ನು ತಿಳಿದು ಬಂದಿಲ್ಲ. ಸದ್ಯ ಕ್ರೇನ್ ಸಹಾಯದಿಂದ ಗಾಯಾಳುಗಳ ರಕ್ಷಣಾ ಕಾರ್ಯನಡೆದಿದೆ. ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ./////