ಇಂದಿರಾ ಗಾಂಧಿ ಕಾಲ ಮತ್ತೆ ಮರುಕಳಿಸುತ್ತಿದೆ: ಡಿ.ಕೆ.ಶಿವಕುಮಾರ್

ಮೈಸೂರು: ನೂರು ದಿನದಲ್ಲಿ 4 ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಗೃಹಲಕ್ಷ್ಮೀ ಯೋಜನೆಗೆ 1.10 ಕೋಟಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ. ಇಂದಿರಾ ಗಾಂಧಿಯವರ ಕಾಲ ಮತ್ತೆ ಮರುಕಳಿಸುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಮನೆ ಯಜಮಾನಿಗೆ 2 ಸಾವಿರ ರೂ. ನೀಡುವ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಅವರು, ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ನಡೆಸಿದ್ದರು. ಚಾಮರಾಜನಗರದಿಂದ ಬೀದರ್ವರೆಗೆ ಪಾದಯಾತ್ರೆ ನಡೆಸಿದ್ರು. ಯಾತ್ರೆ ವೇಳೆ ಜನರ ಸಮಸ್ಯೆಗಳನ್ನು ರಾಹುಲ್ ಗಾಂಧಿ ಆಲಿಸಿದರು. ಯಾತ್ರೆ ವೇಳೆ ನನಗೆ, ಸಿದ್ದರಾಮಯ್ಯಗೆ ರಾಹುಲ್ ಹಲವು ಸಲಹೆ ನೀಡಿದರು. ಚುನಾವಣೆ ವೇಳೆ ನಾವು 5 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೆವು. ಚಾಮುಂಡೇಶ್ವರಿ ತಾಯಿ ದರ್ಶನ ಪಡೆದು ಶಪಥ ಮಾಡಿದ್ದೆವು. ಯೋಜನೆಗಳನ್ನು ಜಾರಿ ಮಾಡಿ ನಾವು ನುಡಿದಂತೆ ನಡೆದಿದ್ದೇವೆ ಎಂದು ಹೇಳಿದರು.//////