ಗೃಹಲಕ್ಷ್ಮಿ ಯೋಜನೆಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಚಾಲನೆ

ಮೈಸೂರು: ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ನಾಲ್ಕನೇ ಗ್ಯಾರಂಟಿ ಮನೆ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹ ಲಕ್ಷ್ಮಿ ಯೋಜನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬುಧವಾರ ಚಾಲನೆ ನೀಡಿದರು.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆಯವರು ಯೋಜನೆಗೆ ಚಾಲನೆ ನೀಡಿದರು. ಡಿಜಿಟಲ್ ಬಟನ್ ಒತ್ತುವ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ವೇದಿಕೆ ಮೇಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಸಚಿವರಾದ ಸತೀಶ್ ಜಾರಕಿಹೊಳಿ, ಡಾ.ಜಿ. ಪರಮೇಶ್ವರ್, ಡಾ. ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳ್ಕರ್, ಕೆ. ವೆಂಕಟೇಶ್, ಕೃಷ್ಣ ಭೈರೇಗೌಡ, ಚಲುವರಾಯಸ್ವಾಮಿ, ಕೆ.ಎನ್. ರಾಜಣ್ಣ, ಲಕ್ಷ್ಮೀ ಹೆಬ್ಬಾಳಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು./////