ಲೋಕಸಭಾ ಚುನಾವಣೆ ಗೆಲ್ಲಲು ಮೋದಿ ನಾಯಕತ್ವ ಸಾಕು: ಶಾಸಕ ಯತ್ನಾಳ್

ಬೆಂಗಳೂರು: ಎಷ್ಟೇ ನಾಯಕರು ಬಿಜೆಪಿ ತೊರೆದರೂ 2024ರ ಲೋಕಸಭೆ ಚುನಾವಣೆಯಲ್ಲಿ 25 ಸ್ಥಾನಗಳ ಉಳಿಸಿಕೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಾಯಕತ್ವ ಸಾಕು ಎಂದು ಬಿಜೆಪಿಯ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಂಗಳವಾರ ಹೇಳಿದರು.
ಕೆಲ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆಂಬ ಊಹಾಪೋಹಗಳ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಷ್ಟೇ ನಾಯಕರು ಬಿಜೆಪಿ ತೊರೆದರೂ ರಾಜ್ಯದಲ್ಲಿ ಕನಿಷ್ಠ 25 ಸ್ಥಾನಗಳನ್ನು ಉಳಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಸಾಕು ಎಂದು ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತವಾಗಿ. ಪಕ್ಷವು ಯಾವುದೇ ನಾಯಕನ ಮೇಲೆ ಅವಲಂಬಿತವಾಗಿಲ್ಲ. ಪಕ್ಷವು ಜಾಗತಿಕ ಐಕಾನ್ ಮೋದಿ ನೇತೃತ್ವದಲ್ಲಿ ಮುನ್ನಡೆಯುತ್ತಿದೆ ಎಂದು ತಿಳಿಸಿದರು.//////