Belagavi News In Kannada | News Belgaum

ಪ್ರಭಾಶುಗರ್ಸ್ ಕಾರ್ಖಾನೆಯ ಅಭಿವೃದ್ಧಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಪಣ

ಗೋಕಾಕ: ಈ ಭಾಗದ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗೆ ಸದಾ ಬದ್ಧನಿರುವೆ. ರೈತರು ಹಾಗೂ ಕಾರ್ಮಿಕರ ಏಳ್ಗೆಗಾಗಿ ಶ್ರಮಿಸಲು ನಾವು ಸಿದ್ಧರಿದ್ದೇವೆ.        ಕಾರ್ಖಾನೆಯ ಅಭಿವೃದ್ಧಿಯಲ್ಲಿ ರೈತರ ಸಹಕಾರ ಅಗತ್ಯವಾಗಿದೆ ಎಂದು ಅರಭಾವಿ ಶಾಸಕ ಹಾಗೂ ಕಾರ್ಖಾನೆಯ ಮಾರ್ಗದರ್ಶಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಶುಕ್ರವಾರದಂದು ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯವರ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಈ ಕಾರ್ಖಾನೆಯನ್ನು ಮಾದರಿಯನ್ನಾಗಿ ಪರಿವರ್ತಿಸುವ ಮಹತ್ವಾಕಾಂಕ್ಷೆ ಹೊಂದಿರುವುದಾಗಿ ಅವರು ತಿಳಿಸಿದರು.

ಜಿಲ್ಲೆಯಲ್ಲಿಯೇ ಸಹಕಾರಿ ತತ್ವದಡಿ ಸ್ಥಾಪಿತಗೊಂಡಿರುವ ಈ ಕಾರ್ಖಾನೆಯ ಉನ್ನತಿ ಮತ್ತು ಪ್ರಗತಿಗಾಗಿ ನಾವೆಲ್ಲರೂ ಶ್ರಮಿಸುತ್ತೇವೆ. ಆಡಳಿತ ಮಂಡಳಿಯ ಹೊಸ ಸದಸ್ಯರು ರೈತರು ಹಾಗೂ ನೌಕರರ ಹಿತಾಸಕ್ತಿಗೆ ಬದ್ಧರಾಗಿ ಕರ್ತವ್ಯ ನಿರ್ವಹಿಸುವಂತೆ ಅವರು ಮಂಡಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸೂಚಿಸಿದರು.

ಇದೇ ಸಂದರ್ಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಕಾರ್ಖಾನೆಯ ಆಡಳಿತ ಮಂಡಳಿ ಪರವಾಗಿ ಅಧ್ಯಕ್ಷ ಅಶೋಕ ಪಾಟೀಲ ಅವರು ಸತ್ಕರಿಸಿದರು.
ಈ ಸಂದರ್ಭದಲ್ಲಿ ಕಾರ್ಖಾನೆಯ ಅಧ್ಯಕ್ಷ ಅಶೋಕ ಪಾಟೀಲ, ಉಪಾಧ್ಯಕ್ಷ ರಾಮಣ್ಣಾ ಮಹಾರಡ್ಡಿ, ನಿರ್ದೇಶಕ ಮಂಡಳಿ ಸದಸ್ಯರಾದ ಕೆಂಚನಗೌಡ ಪಾಟೀಲ, ಗಿರೀಶ ಹಳ್ಳೂರ, ಜಗದೀಶ ಬಂಡ್ರೊಳ್ಳಿ, ಬಸನಗೌಡ ಪಾಟೀಲ, ಭೂತಪ್ಪ ಗೋಡೇರ, ಮಲ್ಲಿಕಾರ್ಜುನ ಕಬ್ಬೂರ, ಮಹಾದೇವಪ್ಪ ಭೋವಿ, ಮಾಳಪ್ಪ ಜಾಗನೂರ, ಯಲ್ಲವ್ವ ಸಾರಾಪೂರ, ಲಕ್ಕವ್ವಾ ಬೆಳಗಲಿ, ಲಕ್ಷ್ಮಣ ಗಣಪ್ಪಗೋಳ, ಶಿದ್ಲಿಂಗಪ್ಪ ಕಂಬಳಿ, ಶಿವಲಿಂಗಪ್ಪ ಪೂಜೇರಿ ಅವರು ಉಪಸ್ಥಿತರಿದ್ದರು.//////