Belagavi News In Kannada | News Belgaum

ಪತ್ರಕರ್ತರ ವಾಹನದಲ್ಲಿ ಸಚಿವ ಸತೀಶ್ ಜಾರಕಿಹೊಳಿ ರೌಂಡ್ಸ್

ಬೆಳಗಾವಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪತ್ರಕರ್ತರ ನೂತನ ವಾಹನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ನಗರದ ಬುಡಾ ಆವರಣದಲ್ಲಿ ಮಂಗಳವಾರ ನೂತನ ವಾಹನಕ್ಕೆ ಹಸಿರು ನಿಶಾನೆ ತೋರಿಸಿದರು. ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪತ್ರಕರ್ತರ ಪ್ರವಾಸಕ್ಕಾಗಿ ನೂತನ ವಾಹನವು ಅನುಕೂಲವಾಗಲಿದೆ ಎಂದು ಹೇಳಿದರು.

ನಂತರ ಇದೇ ವಾಹನದಲ್ಲಿ ಪ್ರಯಾಣಿಸಿದ ಸಚಿವರು, ನೂತನ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕಾಗಿ ಅಶೋಕ ನಗರದ ಬಳಿ ಪಾಲಿಕೆಯ ಜಾಗೆಯನ್ನು ಪರಿಶೀಲಿಸಿದರು.

ಶಾಸಕ ಆಸೀಫ್(ರಾಜು) ಸೇಠ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕರಾದ ಗುರುನಾಥ ಕಡಬೂರ, ಮಾಧ್ಯಮ ಪ್ರತಿನಿಧಿಗಳು ಸಚಿವರೊಂದಿಗೆ ವಾರ್ತಾ ಇಲಾಖೆಯ ನೂತನ ವಾಹನದಲ್ಲಿ ಪ್ರಯಾಣಿಸಿದರು.

ವಾರ್ತಾ ಮತ್ತು ಸಾರ್ವಜನಿಕಇಲಾಖೆಯ ಕಾರ್ಯದರ್ಶಿಗಳಾದ ಎನ್.ಜಯರಾಮ್, ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರು ವಿಶೇಷ ಮುತುವರ್ಜಿಯಿಂದ ಬೆಳಗಾವಿ ಜಿಲ್ಲೆಗೆ ಹೊಸ ವಾಹನವನ್ನು ಒದಗಿಸಿರುವುದಕ್ಕೆ ಮಾಧ್ಯಮ ಪ್ರತಿನಿಧಿಗಳು ಸಂತಸ ವ್ಯಕ್ತಪಡಿಸಿದರು./////