Belagavi News In Kannada | News Belgaum

ಪ್ರಕಣೆ : ಬ್ಯೂಟಿ ಪಾರ್ಲರ 30 ದಿನಗಳ ತರಬೇತಿ

ನೈರುತ್ಯ ರೈಲ್ವೆ ವಲಯ : ಸಲಹಾ ಸಮಿತಿ ಸದಸ್ಯ ನೇಮಕ

ಬೆಳಗಾವಿ, ಸೆ.08 : ನೈರುತ್ಯ ರೈಲ್ವೆ ವಲಯ ಬಳಕೆದಾರರ ಸಲಹಾ ಸಮಿತಿ ಸದಸ್ಯರಾಗಿ ಬೆಳಗಾವಿಯ ಗಜಾನನ ಮಹಾರಾಜ ನಗರ ತಿಲಕವಾಡಿ ನಿವಾಸಿಯಾದ ಪ್ರಸಾದ ಡಿ. ಕುಲಕರ್ಣಿ ಅವರನ್ನು ನೇಮಿಸಲಾಗಿದೆ ಎಂದು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///

ಬೆಳೆ ವಿಮೆ ಪಾವತಿಸಿದ ಬೆಳೆಯ ಛಾಯಾಚಿತ್ರಗಳ ಇಂದೀಕರಿಸುವುದು ಕಡ್ಡಾಯ

ಬೆಳಗಾವಿ, ಸೆ.08 : ಮುಂಗಾರು 2023 ನೇ ಹಂಗಾಮಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆವಿಮಾ ಯೋಜನೆಯಡಿ ಬೆಳೆ ಸಮೀಕ್ಷೆಯಲ್ಲಿ ತಾಳೆಯಾಗದಿರುವ ಬೆಳೆಗಳಿಗೆ ವಿಮಾ ಪಾವತಿಸಿದ ಪ್ರಸ್ತಾವನೆಗಳಿಗೆ ಬೆಳೆ ಸಮೀಕ್ಷೆ ಆ್ಯಪ್ ಮುಖಾಂತರ ಸಂಬಂಧಪಟ್ಟ ರೈತರು ಸೆ.15 2023 ರೊಳಗಾಗಿ ತಾವು ಬೆಳೆ ವಿಮೆ ಪಾವತಿಸಿದ ಬೆಳೆಯ ಛಾಯಾಚಿತ್ರಗಳನ್ನು ಬೆಳೆ ಸಮೀಕ್ಷೆ ಆ್ಯಪ್ ಮುಖಾಂತರ ಇಂದೀಕರಿಸುವುದು ಕಡ್ಡಾಯವಾಗಿದ್ದು, ತಪ್ಪಿದ್ದಲ್ಲಿ ಅರ್ಜಿಯನ್ನು ತಿರಸ್ಕರಿಸಲಾಗುವುದು.
ಸದರಿ ರೈತರ ನೋಂದಾಯಿತ ದೂರವಾಣಿ ಸಂಖ್ಯೆಗಳಿಗೆ ಈಗಾಗಲೇ ಸಂದೇಶಗಳನ್ನು ಕೇಂದ್ರ ಕಛೇರಿಯಿಂದ ಕಳುಹಿಸಲಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಹೋಬಳಿ ಅಥವಾ ತಾಲ್ಲೂಕು ಅಧಿಕಾರಿಗಳನ್ನು ಮಟ್ಟದ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಬೆಳಗಾವಿ (ಜಿ.ಪಂ) ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///

ಮಾದಕವಸ್ತು ಮಾರಾಟ, ಸಾಗಾಣಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ, ಸೆ.08 : ಜಿಲ್ಲೆಯಲ್ಲಿ ಯಾವುದೇ ರೀತಿಯ ಮಾದಕವಸ್ತು ಸಾಗಾಣಿಕೆ ಮತ್ತು ಮಾರಾಟವನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಮಾದಕ ವಸ್ತುಗಳ ಅಕ್ರಮ ಮಾರಾಟ ಕಂಡುಬಂದರೆ ಸಾರ್ವಜನಿಕರು ಕೂಡಲೇ ಮಾಹಿತಿಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ಸೆ.8) ನಡೆದ ಮಾದಕವಸ್ತುಗಳ ಮಾರಾಟ-ಸಾಗಾಣಿಕೆ ತಡೆ ಕುರಿತ ಜಿಲ್ಲಾಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಯಾವುದೇ ಭಾಗದಲ್ಲಿ ಮಾದಕ ವಸ್ತುಗಳ ಸಂಗ್ರಹ, ಮಾರಾಟ, ಸಾಗಾಣಿಕೆ ಕಂಡುಬಂದಲ್ಲಿ ಮಾಹಿತಿಯನ್ನು ಒದಗಿಸಬೇಕು.
ಇದೇ ರೀತಿ ಶಾಲಾ-ಕಾಲೇಜುಗಳ ಬಳಿ ಮಾದಕ ವಸ್ತುಗಳ ಮಾರಾಟದ ಮೇಲೆ ಎಲ್ಲರೂ ನಿಗಾ ವಹಿಸಬೇಕು ಎಂದರು.
ಕೆಲವು ಕೃಷಿ ಜಮೀನುಗಳ ಮಧ್ಯೆ ಗಾಂಜಾ ಬೆಳೆಯುವುದು ಕೂಡ ಕೆಲವೆಡೆ ಕಂಡುಬಂದಿದ್ದು, ಈ ಬಗ್ಗೆ ಸ್ಥಳೀಯರು ಪೆÇಲೀಸ್ ಅಥವಾ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಇಂತಹ ಮಾಹಿತಿಯನ್ನು ನೀಡುವವರ ಹೆಸರನ್ನು ಗೌಪ್ಯವಾಗಿರಿಸಲಾಗುವುದು.
ಮಾದಕವಸ್ತುಗಳ ಮಾರಾಟ ಅಥವಾ ಸಾಗಾಣಿಕೆಯನ್ನು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ.
ವಿದೇಶಿ ಸಿಗರೇಟ್, ತಂಬಾಕು ಮತ್ತಿತರ ಮಾದಕ ವಸ್ತುಗಳ ಅಕ್ರಮ ಮಾರಾಟದ ಮೇಲೆ ನಿಗಾ ವಹಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.
ಮಾದಕವಸ್ತು ಸಾಗಾಣಿಕೆ-ಪೆÇಲೀಸ್ ನಿಗಾ:
ರಾಜ್ಯದ ರಾಜಧಾನಿಯಲ್ಲಿ ಮಾದಕವಸ್ತು ಸೇವನೆ ಮತ್ತು ಮಾರಾಟ ಹಾವಳಿ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಇಂತಹ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೆÇಲೀಸ್ ಇಲಾಖೆ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ತಿಳಿಸಿದರು.
ಮಾದಕವಸ್ತು ಪಿಡುಗು ತಡೆಗಟ್ಟಲು ಸಾರ್ವಜನಿಕರು ಸಹಕರಿಸಬೇಕು. ಬೆಳಗಾವಿ ಜಿಲ್ಲೆಯು ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಜತೆ ಗಡಿ ಹಂಚಿಕೊಂಡಿರುವುದರಿಂದ ಮಾದಕ ವಸ್ತುಗಳ ಸಾಗಾಣಿಕೆ ಸಾಧ್ಯತೆಗಳಿರುತ್ತವೆ. ಆದ್ದರಿಂದ ಹೆಚ್ಚಿನ ನಿಗಾ ವಹಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ್, ಬೆಳಗಾವಿ ಉಪ ಪೆÇಲೀಸ್ ಆಯುಕ್ತರಾದ ರೋಹನ್ ಜಗದೀಶ್, ಮಹಾನಗರ ಪಾಲಿಕೆ ಆಯುಕ್ತರಾದ ಅಶೋಕ ದುಡಗುಂಟಿ, ಕಸ್ಟಮ್ಸ್ ಇಲಾಖೆಯ ಅಧಿಕಾರಿ ಶ್ರೀಕಾಂತ್, ಪೆÇ್ರೀಬೇಷನರಿ ಐ.ಎ.ಎಸ್. ಅಧಿಕಾರಿ ಶುಭಂ ಶುಕ್ಲಾ ಉಪಸ್ಥಿತರಿದ್ದರು.///

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಬೆಳಗಾವಿ, ಸೆ.08: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ “ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ”ಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು.
ಪ್ರಶಸ್ತಿಯನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ರಚಿಸಲಾಗುವುದು. 2023 ರ ಅಕ್ಟೋಬರ್ 02 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಮಹಾತ್ಮಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು.ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಶಿಫಾರಸ್ಸನ್ನು ಕೂಡ ಮಾಡಬಹುದಾಗಿದೆ.
ಸೆ.15 ರ ಒಳಗಾಗಿ ಅರ್ಜಿಗಳನ್ನು, ಆಯುಕ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ. 17, ಭಗವಾನ್ ಮಹಾವೀರ ರಸ್ತೆ (ಇನ್‍ಫೆಂಟ್ರಿ ರಸ್ತೆ), ಬೆಂಗಳೂರು-560 001 ಅಥವಾ ಇ-ಮೇಲ್ : iಟಿಜಿoಡಿmಚಿಣioಟಿ ಜiಠಿಡಿಚಿತಿಚಿಡಿಜs@gmಚಿiಟ.ಛಿom ವಿಳಾಸಕ್ಕೆ ಕಳುಹಿಸಬಹುದಾಗಿದೆ ಎಂದು ಪ್ರಕಣೆಯಲ್ಲಿ ತಿಳಿಸಿದ್ದಾರೆ.////

ಚಿದಾನಂದ ಬೆಳಗಲಿ ಅವರಿಗೆ ಪಿ. ಎಚ್. ಡಿ. ಪದವಿ ಪ್ರಧಾನ

ಬೆಳಗಾವಿ, ಸೆ.08 : 2023-24 ನೇ ಸಾಲಿನ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ (ಕನ್ನಡ) ವಿಭಾಗದ ಸಂಶೋಧನಾ ವಿದ್ಯಾರ್ಥಿ ಚಿದಾನಂದ ಯಲ್ಲಪ್ಪ ಬೆಳಗಲಿ ಅವರು ಪೆÇ್ರ. ಎಸ್.ಎಂ.ಸಿ. ಗಂಗಾಧರಯ್ಯ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಪಂಪನ ಕಾವ್ಯಗಳಲ್ಲಿ ಸ್ತ್ರೀ ಪಾತ್ರಗಳ ವಿಶೇಷ ಅಧ್ಯಯನ ಪ್ರಬಂಧಕ್ಕೆ ಪಿ. ಎಚ್.ಡಿ. ಪದವಿ ಪ್ರಧಾನ ಮಾಡಲಾಗಿರುತ್ತದೆ.///

 

ಬೆಳಗಾವಿ ಭೂದಾಖಲೆಗಳ ಇಲಾಖಾ ನೌಕರರ ಸಹಕಾರ ಪತ್ತಿನ ಸಂಘ ನಿಯಮಿತ

75ನೇ ಅಮೃತ ಮಹೋತ್ಸವ ಕಾರ್ಯಕ್ರಮ ಸೆ.9 ರಿಂದ

ಬೆಳಗಾವಿ, ಸೆ.08 : ಭೂದಾಖಲೆಗಳ ಇಲಾಖಾ ನೌಕರರ ಸಹಕಾರ ಪತ್ತಿನ ಸಂಘ ನಿಯಮಿತ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕೆ.ಪಿ.ಟಿ.ಸಿ.ಎಲ್ ಸಭಾ ಭವನದಲ್ಲಿ ಸೆ. 9, 10 ರಂದು ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ 75 ನೇ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೆ.9 ರಂದು ಬೆಳಿಗ್ಗೆ 9 ಗಂಟೆಗೆ ನಡೆಯಲಿರುವ ಕ್ರೀಡಾಕೂಟದ ಉದ್ಘಾಟಕರಾಗಿ ಬೆಳಗಾವಿ ಭೂ ದಾಖಲೆಗಳ ಉಪ ನಿರ್ದೇಶಕರಾದ ವಿಜಯಕುಮಾರ ಎ.ಪಿ ಅವರು ಆಗಮಿಸಲಿದ್ದಾರೆ.
ಅದೇ ದಿನ ಸಂಜೆ 6 ಗಂಟೆಗೆ ನಗರದ ಕೆ.ಪಿ.ಟಿ.ಸಿ.ಎಲ್ ಸಭಾ ಭನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟಕರಾಗಿ ಧಾರವಾಡ ಭೂ ದಾಖಲೆಗಳು ಉಪ ನಿರ್ದೇಶಕರಾದ ಮೋಹನ ಶಿವಣ್ಣನವರ ಅವರು ಇರಲಿದ್ದಾರೆ.
ಹಾಸ್ಯ ಹಾಗೂ ಸಂಗೀತ ರಸಮಂಜರಿ ಕಾರ್ಯಕ್ರಮ ಜಿ ವಾಹಿನಿಯ ಕಾಮಿಡಿ ಕಿಲಾಡಿ ಖ್ಯಾತಿಯ ಸಂಜು ಬಸಯ್ಯ ಮತ್ತು ತಂಡದವರಿಂದ ನಡೆಯಲಿದೆ.
ಸೆ. 10 ರಂದು ನೆಹರು ನಗರದ ಕೆಪಿಟಿಸಿಎಲ್ ಸಭಾ ಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಅಮೃತ ಮಹೋತ್ಸವ ಕಾರ್ಯಕ್ರಮದ ಉದ್ಘಾಟಕರಾಗಿ ಬೆಳಗಾವಿ ವಿಭಾಗದ ಪ್ರಾದೇಶಿಕ ಭೂ ದಾಖಲೆಗಳ ಜಂಟಿ ನಿರ್ದೇಶಕರಾದ ನಜ್ಮಾ ಎಮ್. ಪೀರಜಾದೆ ಅವರು ಆಗಮಿಸಲಿದ್ದಾರೆ.
ಭೂದಾಖಲೆಗಳ ಇಲಾಖಾ ನೌಕರ ಸಹಕಾರ ಪತ್ತಿನ ಸಂಘದ ಅಧ್ಯಕ್ಷರಾದ ಕೆ.ಜಿ ಪಾಟೀಲ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಸಹಕಾರ ಸಂಘದ ಸಂಯುಕ್ತ ನಿಬಂಧಕರಾದ ಡಾ. ಸುರೇಶ್ ಗೌಡ, ಕಲಬುರ್ಗಿಯ ಪ್ರಾದೇಶಿಕ ಭೂ ದಾಖಲೆಗಳ ಜಂಟಿ ನಿರ್ದೇಶಕರು (ಪ್ರಭಾರ) ಹಾಗೂ ಗದಗ ಭೂದಾಖಲೆಗಳ ಉಪ ನಿರ್ದೇಶಕರಾದ ಗೋಪಾಲ ಮಾಲಗತ್ತಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದಾರೆ.
ಬೆಳಗಾವಿ ವಿಭಾಗದ ಭೂ ದಾಖಲೆಗಳ ಸಹಾಯಕ ನಿರ್ದೇಶಕರುಗಳು, ರಾಜ್ಯ ಸರ್ಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು, ತಾಲೂಕಾಧ್ಯಕ್ಷರು, ಹಾಗೂ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಣೆಯಲ್ಲಿ ತಿಳಿಸಲಾಗಿದೆ.///

 

2023-24 ನೇ ದೌರ್ಜನ್ಯ ನಿಯಂತ್ರಣ: ಜಿಲ್ಲಾ ಜಾಗೃತಿ ಸಮಿತಿ ಸಭೆ

ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಸ್ಮಶಾನಭೂಮಿ ಲಭ್ಯ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ, ಸೆ.08 : ಈಗಾಗಲೇ ಜಿಲ್ಲೆಯ ಎಲ್ಲ ಗ್ರಾಮಗಳಿಗೆ ಸಾರ್ವಜನಿಕ ಸ್ಮಶಾನಭೂಮಿಯನ್ನು ಒದಗಿಸಲಾಗಿದೆ. ಆದರೆ ಕೆಲವೆಡೆ ನಿರ್ದಿಷ್ಟ ಸಮುದಾಯಗಳು ತಮಗೆ ಪ್ರತ್ಯೇಕ ಸ್ಮಶಾನಭೂಮಿ ಒದಗಿಸುವಂತೆ ಬೇಡಿಕೆ ಸಲ್ಲಿಸುತ್ತಿದ್ದಾರೆ. ಈ ಬಗ್ಗೆ ನಿಯಮಾವಳಿ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ಸೆ.8) ನಡೆದ ಅನುಸೂಚಿತ ಜಾತಿ/ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಲ್ಲಿ ಸಾರ್ವಜನಿಕ ಸ್ಮಶಾನಭೂಮಿ ಇಲ್ಲವೋ ಅಂತಹ ಕಡೆಗಳಲ್ಲಿ ಖಾಸಗಿ ಭೂಮಿಯನ್ನು ಖರೀದಿಸಲಾಗುವುದು ಎಂದು ಭರವಸೆ ನೀಡಿದರು.
ಸ್ಮಶಾನಭೂಮಿ ಅಭಿವೃದ್ಧಿಗಾಗಿ ಸಮಾಜಕಲ್ಯಾಣ ಇಲಾಖೆಯ ವತಿಯಿಂದ ಒಂದು ಕೋಟಿ ರೂಪಾಯಿ ಅನುದಾನ ಕೋರಿ ಪ್ರಸ್ತಾವನೆ ಕಳಿಸುವಂತೆ ಜಿಲ್ಲಾಧಿಕಾರಿಗಳು ಸಮಾಜಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸ್ಮಶಾನಭೂಮಿ ಅಭಿವೃದ್ಧಿಯನ್ನು ನರೇಗಾ ಯೋಜನೆಯಡಿ ಪಂಚಾಯತ್ ಅನುದಾನದಲ್ಲಿ ಕೂಡ ಕೈಗೆತ್ತಿಕೊಳ್ಳಲಾಗುವುದು.
ಫಲಾನುಭವಿಗಳಿಗೆ ಸಾಲ-ಸೌಲಭ್ಯ:
ರಾಜ್ಯ ಮತ್ತು ಕೇಂದ್ರ ಸರಕಾರಗಳ ಸಾಲ-ಸೌಲಭ್ಯ ಯೋಜನೆಯಡಿ ಆಯ್ಕೆಗೊಂಡ ಫಲಾನುಭವಿಗಳಿಗೆ ಸೌಲಭ್ಯ ಒದಗಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸಮನ್ವಯತೆ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.
ಸಭೆಯಲ್ಲಿ ಮಾತನಾಡಿದ ಶಾಸಕ ಆಸೀಫ್(ರಾಜು) ಸೇಠ್ ಅವರು, ಅಲರವಾಡ, ಕಣಬರಗಿ ಸೇರಿದಂತೆ ಕೆಲವು ಕಡೆಗಳಲ್ಲಿ ಸ್ಮಶಾನಭೂಮಿ ಕೊರತೆ ಕಂಡುಬಂದಿದೆ. ಆದ್ದರಿಂದ ಕೂಡಲೇ ಭೂಮಿಯನ್ನು ಖರೀದಿಸಿ ಕೊಡಬೇಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಮಿತಿಯ ಸದಸ್ಯರಾದ ವಿಜಯ ತಳವಾರ, ಇನ್ನೂ ಕೆಲವೆಡೆ ಸ್ಮಶಾನಭೂಮಿ ಒದಗಿಸಿರುವುದಿಲ್ಲ ಎಂದು ಹೇಳಿದರು.
ವಿವಿಧ ಸಾಲ ಸೌಲಭ್ಯ ಯೋಜನೆಯಡಿ ಅರ್ಜಿಗಳನ್ನು ಸಲ್ಲಿಸಿದವರಿಗೆ ಸಿಬಿಲ್ ಸ್ಕೋರ್ ಸೇರಿದಂತೆ ಕೆಲ ತಾಂತ್ರಿಕ ಕಾರಣಗಳಿಂದ ಸಾಲ ದೊರಕುತ್ತಿಲ್ಲ. ಆದ್ದರಿಂದ ಸರಕಾರಿ ಯೋಜನೆಗಳ ಪ್ರಯೋಜನ ದೊರಕುತ್ತಿಲ್ಲ. ಆದ್ದರಿಂದ ಸಾಲ-ಸೌಲಭ್ಯ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಆರ್ಪಿ.ಡಿ. ವೃತ್ತಕ್ಕೆ ವೀರ ಮದಕರಿ ನಾಯಕರ ಹೆಸರು ಇಡುವುದಕ್ಕೆ ಸಂಬಂಧಿಸಿದಂತೆ ಅನೇಕ ಸಭೆಯಲ್ಲಿ ಚರ್ಚಿಸಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ವಿಜಯ ತಳವಾರ ಅಸಮಾಧಾನ ವ್ಯಕ್ತಪಡಿಸಿದರು. ಕೂಡಲೇ ಈ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಕಳಿಸಬೇಕು ಎಂದು ವಿಜಯ್ ತಳವಾರ ಅವರು ಒತ್ತಾಯಿಸಿದರು.
ಈ ಕುರಿತು ಮಹಾನಗರ ಪಾಲಿಕೆಯ ಚುನಾಯಿತ ಜನಪ್ರತಿನಿಧಿಗಳ ಮಂಡಳಿಯು ಮುಂದಿನ ಕ್ರಮ ಕೈಗೊಳ್ಳಲಿದೆ. ಈ ಬಗ್ಗೆ ಪಾಲಿಕೆಗೆ ಪತ್ರವನ್ನು ಬರೆಯಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ಸಭೆಯಲ್ಲಿ ಮಾತನಾಡಿದ ನೂತನ ಸದಸ್ಯ ಕರೆಪ್ಪ ಗುಡೇನ್ನವರ, “ನಟ ಉಪೇಂದ್ರ ಅವರ ಇತ್ತೀಚಿನ ಹೇಳಿಕೆಯು ಸಮುದಾಯಕ್ಕೆ ನೋವುಂಟು ಮಾಡಿದೆ. ಇಂತಹ ಘಟನೆಗಳನ್ನು ಮರುಕಳಿಸದಂತೆ ತಡೆಯಲು ಸಮುದಾಯಗಳಿಗೆ ನೋವುಂಟು ಮಾಡುವ ಕೆಲವು ಜನ ರೂಢಿಗತ ಶಬ್ದಗಳ ಬಳಕೆಯನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.
ಕೆಲವು ಜನರೂಢಿಗತ ಮಾತುಗಳಿಂದ ಜಾತಿನಿಂದನೆ ಆಗುತ್ತಿರುವುದರಿಂದ ಇಂತಹ ಮಾತುಗಳ ನಿರ್ಬಂಧಿಸುವಂತೆ ಕೋರಿ ಸರಕಾರಕ್ಕೆ ವರದಿ ಕಳಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಇದಲ್ಲದೇ ದೌರ್ಜನ್ಯ ತಡೆ ಸಮಿತಿಯ ಸದಸ್ಯರಿಗೆ ಗುರುಗಿನ ಚೀಟಿಯನ್ನು ಒದಗಿಸಬೇಕು ಎಂದು ನೂತನ ಸದಸ್ಯರು ಮನವಿ ಮಾಡಿಕೊಂಡರು.
ಮುಂದಿನ ಸಭೆಯ ಒಳಗಾಗಿ ಗುರುತಿನ ಚೀಟಿ ಒದಗಿಸಬೇಕು ಎಂದು ಸಮಾಜಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ನೂತನ ಸದಸ್ಯರಾದ ಜೀವನ ಮಾಂಜ್ರೇಕರ್,, ಕರೆಪ್ಪ ಗುಡೇನ್ನವರ, ಸಿದ್ದರಾಯ ಮೇತ್ರಿ, ಬಸಪ್ಪ ತಳವಾರ, ಬಸವರಾಜ ಆಯಟ್ಟಿ, ನಾಗಪ್ಪ ನರಗಟ್ಟಿ ಅವರನ್ನು ಜಿಲ್ಲಾಧಿಕಾರಿಗಳು ಅಭಿನಂದಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಲಕ್ಷ್ಮಣ ಬಬಲಿ ಅವರು ಸಭೆಯನ್ನು ನಿರ್ವಹಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ್, ಬೆಳಗಾವಿ ಉಪ ಪೆÇಲೀಸ್ ಆಯುಕ್ತರಾದ ರೋಹನ್ ಜಗದೀಶ್, ಮಹಾನಗರ ಪಾಲಿಕೆ ಆಯುಕ್ತರಾದ ಅಶೋಕ ದುಡಗುಂಟಿ, ಪೆÇ್ರೀಬೇಷನರಿ ಐ.ಎ.ಎಸ್. ಅಧಿಕಾರಿ ಶುಭಂ ಶುಕ್ಲಾ ಉಪಸ್ಥಿತರಿದ್ದರು.////

 

ಬೆಳಗಾವಿ, ಸೆ.08 : ಬೆಳಗಾವಿಯ ಕನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ನಗರದ ಗ್ರಾಮೀಣ ಪ್ರದೇಶದ ಮಹಿಳಾ ನಿರುದ್ಯೋಗಿಗಳಗೆ ಸೆ.17 2023 ರಂದು 30 ದಿನಗಳ ಬ್ಯೂಟಿ ಪಾರ್ಲರ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಅರ್ಹತೆಗಳು: 18 ರಿಂದ 45 ವಯಸ್ಸಿನವರಾಗಿರಬೇಕು, ಗ್ರಾಮೀಣ ಪ್ರದೇಶದವರಾಗಿರಬೇಕು ಹಾಗೂ ಃPಐ ಕಾರ್ಡ ಹೊಂದಿರಬೇಕು.
ದಾಖಲಾತಿಗಳು : ಃPಐ ಕಾರ್ಡ, ಆಧಾರ ಕಾರ್ಡ, ಬ್ಯಾಂಕ ಪಾಸ್ ಬುಕ್, 3.ಭಾವಚಿತ್ರಗಳುನ್ನು ಲಗತ್ತಿಸಬೇಕು. ತರಬೇತಿಯಲ್ಲಿ ಊಟ, ವಸತಿ ಸಂಪೂರ್ಣ ಉಚಿತವಾಗಿರುತ್ತದೆ.
ಸೆ.15 2023 ರಂದು ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕವಾಗಿದ್ದು, ಅರ್ಜಿಯನ್ನು ಸಂಸ್ಥೆಯ ಅರ್ಜಿ ನಮೂನೆಯಲ್ಲಿ ಅಥವಾ ಬಿಳಿಹಾಳೆಯಲ್ಲಿ ನೇರವಾಗಿ ಕಾರ್ಯಾಲಯಕ್ಕೆ, ಪೆÇೀಸ್ಟ್ ಮುಖಾಂತರ ಅಥವಾ ಗೂಗಲ್ ಪರ್ಮ ಲಿಂಕ್ hಣಣಠಿs://ಜಿoಡಿms.gಟe/ಙ1hಟಿಣಓgಊiರಿಞmgಚಿ8ಜ7exಚಿಟಿಜ ಗೆ ಸಲ್ಲಿಸಬಹುದಾಗಿದೆ.
ಸಂಸ್ಥೆಯ ವಿಳಾಸ : ಕನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (ಸಿಟರ್ಸಿಟಿ) ಫ್ಲಾಟ್ ನಂ. ಸಿವಿ -03 (ಪಾರ್ಟ) ಕಣಬರ್ಗಿ ಇಂಡಸ್ಟ್ರಿಯಲ್ ಏರಿಯಾ, ಆಟೋ ನಗರ, ಬೆಳಗಾವಿ 590015, ದೂರವಾಣಿ – 0831-2440644, 8296792166, 9845750043, 8050406866, 3867388906, 9449860064 ಗೆ ಬೆಳಗ್ಗೆ 9.30 ರಿಂದ ಸಂಜೆ 5 ಗಂಟೆ ವರೆಗೆ ಸಂಪರ್ಕಿಸಬಹುದಾಗಿದೆ ಎಂದು ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///

ಎಸ್.ಸಿ.ಪಿ-ಟಿ.ಎಸ್.ಪಿ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆ

ಅವಧಿಯೊಳಗೆ ಅನುದಾನ ಬಳಕೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನ

ಬೆಳಗಾವಿ, ಸೆ.08 : ಇಲಾಖಾವಾರು ಬಿಡುಗಡೆಯಾದ ಎಸ್.ಸಿ.ಪಿ-ಟಿ.ಎಸ್.ಪಿ ಅನುದಾನ ಬಳಕೆಗೆ ತ್ವರಿತವಾಗಿ ಟೆಂಡರ್ ಕರೆದು ನಿಗದಿತ ಅವಧಿಯೊಳಗೆ ಶೇಕಡ ನೂರರಷ್ಟು ಅನುದಾನ ಬಳಸಬೇಕು. ಪ್ರಸಕ್ತ ಸಾಲಿನ ಇಲಾಖೆಗಳ ಅನುದಾನ ಬಳಕೆಗೆ ವಿಳಂಬ ತೋರಬಾರದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ಸೆ.08) ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಉಪಯೋಜನೆಗಳಡಿಯಲ್ಲಿ ಇಲಾಖಾವಾರು ಲಭ್ಯವಿರುವ ಅನುದಾನದಲ್ಲಿ ಕೈಗೊಂಡ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಣ್ಣ ನೀರಾವರಿ ಇಲಾಖೆಗೆ ಈಗಾಗಲೇ 35 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಕೇವಲ 15 ಲಕ್ಷ ಮಾತ್ರ ಬಳಕೆಯಾಗಿದೆ. ಸಂಬಂಧಿತ ಇಲಾಖೆಯ ಅಧಿಕಾರಿಗಳು ಸಭೆಗೆ ಹಾಜರಾಗುತ್ತಿಲ್ಲ. ಸಭೆಗಳಿಗೆ ಹಾಜರಾಗದ ಅಧಿಕಾರಿಗೆ ನೋಟಿಸ್ ಜಾರಿ ಮಾಡಲಾಗುವುದು ಎಂದು ಸೂಚನೆ ನೀಡಿದರು.
ಹೆಸ್ಕಾಂ ಇಲಾಖೆಯಿಂದ ಖಾನಾಪೂರ ಬೆಳಗಾವಿ ವಿಭಾಗದಲ್ಲಿ ಶೇಕಡಾ 10 ರಷ್ಟು ಎಸ್.ಸಿ.ಪಿ-ಟಿ.ಎಸ್.ಪಿ ಅನುದಾನ ಬಳಕೆಯಾಗಿದೆ. ಬಾಕಿಯಿರುವ ಅನುದಾನ ಬಳಕೆಗೆ ಯೋಜನೆ ರೂಪಿಸಲಾಗಿದ್ದು, ಮುಂದಿನ ದಿನಗಳಲ್ಲಿ ಅನುದಾನ ಬಳಕೆ ಕ್ರಮ ವಹಿಸಲಾಗುವುದು ಎಂದು ಹೆಸ್ಕಾಂ ಇಲಾಖೆಯ ಅಧಿಕಾರಿಗಳು ವಿವರಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಣ್ಣ ನೀರಾವರಿ ಇಲಾಖೆ, ತೋಟಗಾರಿಕೆ ಇಲಾಖೆ ನಿಗದಿತ ಅವಧಿಯೊಳಗೆ ಪ್ರಗತಿ ಸಾಧಿಸಬೇಕು. ಈವರೆಗೂ ಟೆಂಡರ್ ಆಹ್ವಾನಿಸಿದ ಇಲಾಖೆಗಳು ಕೂಡಲೇ ಟೆಂಡರ್ ಬಾಕಿ ಅನುದಾನ ಬಳಕೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಹರ್ಷಲ್ ಭೋಯರ್, ಮಹಾನಗರ ಪಾಲಿಕೆ ಆಯುಕ್ತರಾದ ಅಶೋಕ ದುಡಗುಂಟಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಲಕ್ಷ್ಮಣ ಬಬಲಿ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.///

ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳು ಸೆ.14 ರಂದು

ಬೆಳಗಾವಿ, ಸೆ.08 : 2023-24ನೇ ಸಾಲಿನ ಬೆಳಗಾವಿ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳು ಸೆ.14 2023 ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿವೆ.
ಸ್ಪರ್ಧೆಗಳ ವಿವರ :
ಅಥ್ಲೆಟಿಕ್ಸ್ ಪುರುಷರಿಗಾಗಿ 100ಮೀ, 200ಮೀ, 400ಮೀ, 800ಮೀ, 1500ಮೀ, 5000ಮೀ, 10,000ಮೀ, ಓಟ, ಉದ್ದಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್‍ಜಂಪ್, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ, 110ಮೀ ಹರ್ಡಲ್ಸ್, 4 x100 ರಿಲೇ, ಹಾಗೂ 4×400 ರಿಲೇ ಸ್ಪರ್ಧೆಗಳು ಹಮ್ಮಿಕೊಳಲಾಗುವುದು.
ಅಥ್ಲೆಟಿಕ್ಸ್ ಮಹಿಳೆಯರಿಗಾಗಿ 100ಮೀ, 200ಮೀ, 400ಮೀ, 800ಮೀ, 1500ಮೀ, 3000ಮೀ ಓಟ, ಉದ್ದಜಿಗಿತ, ಎತ್ತರಜಿಗಿತ, ಗುಂಡು ಎಸೆತ, ಟ್ರಪಲ್‍ಜಂಪ್, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ, 100 ಮೀ ಹರ್ಡಲ್ಸ್, 4 x100 ರಿಲೇ, ಹಾಗೂ 4×400 ರಿಲೇ ಸ್ಪರ್ಧೆಗಳು ಹಮ್ಮಿಕೊಳ್ಳಲಾಗುವುದು.
ಗುಂಪು ಆಟಗಳು: ವಾಲಿಬಾಲ್, ಫುಟಬಾಲ್, ಖೋಖೋ, ಕಬಡ್ಡಿ, ಥ್ರೋ ಬಾಲ್, ಯೋಗ (ಪುರುಷ ಮತ್ತು ಮಹಿಳೆಯರಿಗಾಗಿ)
ನಿಯಮಗಳು:
ಭಾಗವಹಿಸುವ ತಾಲೂಕಿನ ಕ್ರೀಡಾಪಟುಗಳು ಸೆ.14 2023 ರಂದು ಬೆಳಗ್ಗೆ 9 ಗಂಟೆಗೆ ಹಾಜರಿದ್ದು ಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು, ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಬೆಳಗಾವಿ ತಾಲೂಕಿನ ರಹವಾಸಿಯಾಗಿರಬೇಕು, ಕ್ರೀಡಾಕೂಟದಲ್ಲಿ ರಕ್ಷಣಾ ಪಡೆ, ಅರೆ ರಕ್ಷಣಾಪಡೆಗೆ ಸೇರಿದ ಕ್ರೀಡಾಪಟುಗಳು ಭಾಗವಹಿಸಲು ಅರ್ಹರಾಗಿರುವುದಿಲ್ಲ, ಕ್ರೀಡಾಕೂಟದಲ್ಲಿ ತಾಲೂಕಿನ ಶಾಲಾ ಕಾಲೇಜು, ಯುವಕ ಯುವತಿಯರು ಸಂಘಗಳ ಹಾಗೂ ಕ್ರೀಡಾ ಸಂಘ ಸಂಸ್ಥೆಗಳ ಕ್ರೀಡಾಪಟುಗಳು ಭಾಗವಹಿಸಬಹುದು ಹಾಗೂ ಭಾಗವಹಿಸುವ ಕ್ರೀಡಾ ಪಟುಗಳು ತಮ್ಮ ಬ್ಯಾಂಕ್ ಪಾಸ್‍ಬುಕ್ ಪ್ರತಿ ಮತ್ತು ಆಧಾರ್ ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿ ತರಬೇಕು.
ಒಂದು ತಾಲೂಕಿನಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ಮತ್ತೊಂದು ತಾಲೂಕಿನಲ್ಲಿ ಭಾಗವಹಿಸವುಂತಿಲ್ಲ. ಒಂದು ವೇಳೆ ಭಾಗವಹಿಸಿದ್ದ. ಅಂತವರ ಆಯ್ಕೆಯನ್ನು ರದ್ದುಗೊಳಸಲಾಗುವುದು, ನಿರ್ಣಾಯಕರ ನಿರ್ಣಯವೇ ಅಂತಿಮ ವಾಗಿದ್ದು, ಕ್ರೀಡಾಕೂಟದಲ್ಲಿ ಅಸಭ್ಯವಾಗಿ ವರ್ತಿಸಿದ ಕ್ರೀಡಾಪಟು ಅಥವಾ ತಂಡಗಳನ್ನು ಅನರ್ಹಗೊಕಲಾಗುವುದು, ಭಾಗವಹಿಸುವ ಕ್ರೀಡಾಪಟುಗಳಿಗೆ ಇಲಾಖೆಯ ವತಿಯಿಂದ ಯಾವುದೇ ಪ್ರಯಾಣ ಭತ್ಯೆ ಹಾಗೂ ದಿನ ಭತ್ಯೆಯನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ. 0831-2950306 ಗೆ ಸಂಪರ್ಕಿಸಬಹುದಾಗಿದೆ ಎಂದು ಬೆಳಗಾವಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///

ಸೆ.13 ರಂದು ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ- 2023

ಬೆಳಗಾವಿ, ಸೆ.08 : ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ , ಸಾರ್ವಜನಿಕ ಶಿಕ್ಷಣ ಇಲಾಖೆ , ಪೆÇಲೀಸ ಆಯುಕ್ತರು ಕೆ.ಎಲ್.ಇ ಪದವಿ ಪೂರ್ವ ಮಹಾವಿದ್ಯಾಲಯ ಬೆಳಗಾವಿ, ವೈದ್ಯಕೀಯ ಮಹಾವಿದ್ಯಾಲಯ, ಕೆ. ಎಲ್ .ಇ .ವೇನು ಧ್ವನಿ 90.4 ಎಫ್ ಎಮ್ ,ಜಾನಕಿ ಸೇವಾ ಸಂಘ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು , ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ತಾಲೂಕಾ ಆರೋಗ್ಯ ಅಧಿಕಾರಿಗಳ ಸಹಯೋಗದಲ್ಲಿ ನಗರದ ಬೆಳಗಾವಿ ಕೆ.ಎಲ್.ಇ ಲಿಂಗರಾಜ ಕಾಲೇಜನಲ್ಲಿ ಸೆ.13 2023 ರಂದು ಬೆಳಿಗ್ಗೆ 11 ಗಂಟೆಗೆ “ಕ್ರಿಯಾತ್ಮಕ ಕೆಲಸಗಳ ಮೂಲಕ ಭರವಸೆಯನ್ನು ಮೂಡಿಸೋಣ” ಎಂಬ ಘೋಷ ವಾಕ್ಯದೊಂದಿಗೆ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ 2023 ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗಿದೆ.
ಬೆಳಗಾವಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಗೌರವಾನ್ವಿತ ಹಿರಿಯ ದಿವಾನಿ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಪಿ ಮುರಳಿಮೋಹನ್ ರೆಡ್ಡಿ ಅವರು ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಲಿದ್ದಾರೆ
ಬೆಳಗಾವಿ ಕೆ.ಎಲ್.ಇ ಪದವಿ ಮಹಾವಿದ್ಯಾಲಯ ಪ್ರಾಚಾರ್ಯರಾದ ಹೆಚ್ ಎಸ್ ಮೇಲಮನಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಬೆಳಗಾವಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಮಹೇಶ್ ಕೋಣಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕರಾದ ಗುರುನಾಥ ಕಡಬೂರ , ಬೆಳಗಾವಿ ನಗರ ಪೆÇಲೀಸ್ ಆಯುಕ್ತರಾದ ಡಾ. ಎಸ್ ಎನ್. ಸಿದ್ದರಾಮಪ್ಪ , ಬೆಳಗಾವಿ ಶಿಕ್ಷಣ ಇಲಾಖೆ ಪದವಿ ಪೂರ್ವ ಉಪನಿರ್ದೇಶಕರಾದ ಎಮ್ . ಎಮ್. ಕಾಂಬಳೆ, ಬೆಳಗಾವಿ ಬಿಮ್ಸ್ ಆಸ್ಪತ್ರೆ ನಿರ್ದೇಶಕರಾದ ಡಾ. ಅಶೋಕ್ ಕುಮಾರ ಶೆಟ್ಟಿ , ಬಿಮ್ಸ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕರಾದ ಡಾ. ಸರೋಜಿನಿ ತಿಗಡಿ , ಬಿಮ್ಸ್ ಆಸ್ಪತ್ರೆ ಮುಖ್ಯಸ್ಥರಾದ ಡಾ. ಚಂದ್ರಶೇಖರ್ ಟಿ.ಆರ್ , ಕೆ ಎಲ್. ಇ ಪದವಿ ಪೂರ್ವ ಮಹಾವಿದ್ಯಾಲಯ ಪ್ರಾಚಾರ್ಯರಾದ ಗಿರಿಜಾ ಹಿರೇಮಠ, ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ. ಶಿವಾನಂದ ಮಾಸ್ತಿಹೊಳಿ, ಜಾನಕಿ ಸೇವಾ ಸಂಘದ ಸಂಸ್ಥಾಪಕರಾದ ಉಮೇಶ ಆಚಾರ್ಯ, ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಮನೋವೈದ್ಯಕೀಯ ಸಮಾಜ ಕಾರ್ಯಕರ್ತರಾದ ಸವಿತಾ ತಿಗಡಿ ಅವರು ಪ್ರತಿಜ್ಞಾನ ವಿಧಿ ನೀಡಲಿದ್ದಾರೆ.
ಚಿಕ್ಕೋಡಿ ತಾಲೂಕ್ ಮಾನಸಿಕ ಆರೋಗ್ಯ ಮನೋವೈದ್ಯರಾದ ಡಾ. ಉತ್ತಮ ಶೇಲಾರ,, ಬೆಳಗಾವಿ ಬಿಮ್ಸ್ ಆಸ್ಪತ್ರೆ ಮನೋವೈದ್ಯರಾದ ಡಾ.ಸುಶಾನ, ಬೆಳಗಾವಿ ಜಿಲ್ಲಾ ಮಾನಸಿಕ ಆರೋಗ್ಯ ಕ್ಲಿನಿಕಲ್ ಸೈಕಾಲೋಜಿಸ್ಟರಾದ ಸುನಿಲ ಜಾಬಗೌಡರ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///

ಮ್ಯಾನ್ಯುಯೆಲ್ ಸ್ಕ್ಯಾವೆಂಜರ್: ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆ

 ನಿವೇಶನ ಹಕ್ಕುಪತ್ರ ನೀಡಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ

ಬೆಳಗಾವಿ, ಸೆ.08 (ಕರ್ನಾಟಕ ವಾರ್ತೆ): ವಸತಿಗೃಹಗಳಲ್ಲಿ ವಾಸಿಸುತ್ತಿರುವ ಪೌರಕಾರ್ಮಿಕರು ಬೇರೆ ಯೋಜನೆಗಳಲ್ಲಿ ಪಡೆದುಕೊಂಡಿರುವ ನಿವೇಶನವನ್ನು ಬಿಟ್ಟುಕೊಟ್ಟರೆ ನಿಯಮಾವಳಿಯಂತೆ ಅವರಿಗೆ ವಸತಿಗೃಹದ ಹಕ್ಕುಪತ್ರವನ್ನು ನೀಡಲಾಗುವುದು. ಸಮೀಕ್ಷೆ ಪ್ರಕಾರ ಮ್ಯಾನ್ಯುವಲ್ ಸ್ಕ್ಯಾವೆಂಜರ್ ಇಲ್ಲದಿರುವುದರಿಂದ ಗುರುತಿನ ಚೀಟಿ ನೀಡಲು ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ಸೆ.08) ನಡೆದ ಮ್ಯಾನ್ಯುವಲ್ ಸ್ಕ್ಯಾವೆಂಜರ್ಸ್ ನಿಷೇಧ ಮತ್ತು ಪುನರ್ವಸತಿ ಕಾಯ್ದೆ 2013ರ ಅನುಷ್ಠಾನ ಕುರಿತು ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಈಗಾಗಲೇ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸಿದ ಪೌರಕರ್ಮಿಕರನ್ನು ಖಾಯಂಗೊಳಿಸಿ, ಜಿಲ್ಲಾಡಳಿತದಿಂದ ಆದೇಶ ಪತ್ರಗಳನ್ನು ನೀಡಿದೆ.
ಪ್ರತಿ 3 ತಿಂಗಳಿಗೊಮ್ಮೆ ಸಂಬಂಧಿತ ಇಲಾಖೆಯಿಂದ ಸಭೆ ಕರೆದು ಚರ್ಚಿಸಲಾಗುವುದು.
ನಗರಾಭಿವೃದ್ದಿ ಕೋಶದಿಂದ 12 ಹಕ್ಕು ಪತ್ರ ನೀಡಿ, ವಾಪಸ್ ಪಡೆಯಲಾಗಿದೆ. ಮರಳಿ ಹಕ್ಕು ಪತ್ರ ವಿತರಣೆ ಸೂಚಿಸಬೇಕು ಎಂದು ಜಿಲ್ಲಾಧಿಕಾರಿಗೆ ಮನವಿ ಮಾಡಿಕೊಳ್ಳಲಾಯಿತು.
ಮುಂದಿನ ದಿನಗಳಲ್ಲಿ ಸಮಿತಿ ಸಭೆಯಲ್ಲಿ ನಿರ್ಧರಿಸಿ, ಹಕ್ಕು ಪತ್ರ ವಿತರಣೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಹರ್ಷಲ್ ಭೋಯರ್, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಲಕ್ಷ್ಮಣ ಬಬಲಿ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.///