Belagavi News In Kannada | News Belgaum

ಪಬ್-ಹುಕ್ಕಾ ಬಾರ್​ಗಳ ಮೇಲೆ ಸಿಸಿಬಿ ಪೊಲೀಸರ ದಾಳಿ.

ಬೆಂಗಳೂರು: ಅಪ್ರಾಪ್ತ ಮಕ್ಕಳಿಗೆ ಮದ್ಯ ನೀಡುವುದು, ಡ್ರಗ್ಸ್ ಸರಬರಾಜು ಸೇರಿ ವಿವಿಧ ಕಾರಣಗಳಿಗೆ ಬೆಂಗಳೂರಿನಾದ್ಯಂತ ತಡರಾತ್ರಿ ಸಿಸಿಬಿ ಪೊಲೀಸರು ಪಬ್​ಗಳ ಮೇಲೆ ದಾಳಿ ನಡೆಸಿದ್ದಾರೆ..

 

ನಿನ್ನೆ ಸಂಜೆಯಿಂದ ತಡರಾತ್ರಿವರೆಗೆ ನಗರದ ಒಟ್ಟು ಐನೂರಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಸಿಸಿಬಿಯ ಎಲ್ಲಾ ಸಿಬ್ಬಂದಿ ಭಾಗಿಯಾಗಿದ್ದರು. ಪಬ್, ಹುಕ್ಕಾ ಬಾರ್​ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಹಲವಾರು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ..

ಅಪ್ರಾಪ್ತರು ನಕಲಿ ಆಧಾರ್ ಕಾರ್ಡ್ ಬಳಕೆ ಮಾಡಿಕೊಂಡು ಪಬ್ ಹೋಗಿರುವುದು ಪತ್ತೆಯಾಗಿದೆ. ಡಿಜಿಟಲ್ ನಕಲಿ ಆಧಾರ್ ಕಾರ್ಡ್​ಗಳನ್ನು ಸಿಸಿಬಿ ಪತ್ತೆ ಮಾಡಿದೆ. ಇನ್ನು ಅಪ್ರಾಪ್ತರು ಡ್ರಗ್ಸ್ ಸೇವನೆ ಮಾಡಿರುವುದು ಸಹ ಪತ್ತೆಯಾಗಿದೆ..