ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

ಬೆಳಗಾವಿ, ಸೆ.15: 2023-24ಸಾಲಿನ ಅಲ್ಪಸಂಖ್ಯಾತರ ಕೌಶಲ್ಯ ಅಭಿವೃದ್ದಿ ಯೋಜನೆಯಡಿ ಬೆಳಗಾವಿ ಜಿಲ್ಲೆಯಲ್ಲಿ ವಾಸಿಸುತ್ತಿರುವ ಅಲ್ಪಸಂಖ್ಯಾತರ ಸಮುದಾಯಕ್ಕೆ ಒಳಪಡುವ ವಿದ್ಯಾವಂತ ನಿರುದ್ಯೋಗಿ ಯುವಕ/ಯುವತಿಯರಿಗೆ ಬೆಂಗಳೂರಿನಲ್ಲಿ ಸ್ಟೈಪಂಡ್ ಮೂಲಕ ಊಟ-ವಸತಿ ಸೌಲಭ್ಯದೊಂದಿಗೆ ವಿವಿಧ ಕ್ಷೇತ್ರಗಳ (Soಜಿಣ Sಞiಟಟ) ಕೌಶಲ್ಯ ತರಬೇತಿಯನ್ನು ನೀಡಿ, ಅವರ ಸ್ವಾವಲಂಬನೆ ಜೀವನ ರೂಪಿಸಿಕೊಳ್ಳಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ವೆಬ್‍ಸೈಟ್: www.dom.karnataka.gov.in ಮೂಲಕ ಸಪ್ಟೆಂಬರ್ 25, 2023 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು, ಅಭ್ಯರ್ಥಿಯ ವಯೋಮಿತಿ 16 ರಿಂದ 35 ವರ್ಷಗಳಿರಬೇಕು, ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದವರಾಗಿರಬೇಕು ಹಾಗೂ ಎಲ್ಲಾ ಮೂಲಗಳಿಂದ ಕುಟುಂಬದ ಆದಾಯ ರೂ.8 ಲಕ್ಷಗಳಿಗಿಂತ ಮೀರಿರಬಾರದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.