Belagavi News In Kannada | News Belgaum

ಕಾಲುಬಾಯಿ ರೋಗ ಲಸಿಕಾ ಅಭಿಯಾನದ ಪ್ರಚಾರ

ಬೆಳಗಾವಿ ಜಿಲ್ಲೆಯಾದ್ಯಂತ ಸೆಪ್ಟೆಂಬರ್ 25 ರಿಂದ ಆರಂಭಗೊಳ್ಳಲಿರುವ ನಾಲ್ಕನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನದ ಪ್ರಚಾರ ಸಾಮಗ್ರಿಗಳನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಬುಧವಾರ(ಸೆ.25) ಬಿಡುಗಡೆಗೊಳಿಸಿದರು. ಜಿಪಂ ಸಿಇಓ ಹರ್ಷಲ್ ಭೋಯರ್, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ರಾಜೀವ್ ಕೂಲೇರ್ ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.