ಅರ್ಜಿ ಅಹ್ವಾನ : E-KYC ಮಾಡಿಸಲು ಸೂಚನೆ
ವ್ಯಕ್ತಿ ನಾಪತ್ತೆ

ವ್ಯಕ್ತಿ ನಾಪತ್ತೆ
ಬೆಳಗಾವಿ, ಸೆ.22 : ಬೆಳಗಾವಿ ತಾಲೂಕಿನ ಜೋತಿ ನಗರ ನಿವಾಸಿಯಾದ ನಾಗಪ್ಪಾ ಬಸಪ್ಪಾ ನಂದಿ (54) ಇವರು ಜ.20 2023 ರಂದು ಯಾರಿಗು ಹೇಳದೆ ಮನೆಯಿಂದ ಹೋದವರು ಮರಳಿ ಮನೆಗೆ ಬಂದಿಲ್ಲ ಎಂದು ಇವರ ಪತ್ನಿಯಾದ ಮಂಜುಳಾ ನಾಗಪ್ಪಾ ನಂದಿ ಅವರು ಎ.ಪಿ.ಎಮ್.ಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ..
ಕಾಣೆಯಾದ ವ್ಯಕ್ತಿಯ ಚಹರೆ ಪಟ್ಟಿ:
ಎತ್ತರ 5 ಪುಟ ಉದ್ದ ಮುಖ, ಉದ್ದ ಮೂಗು, ಗೂದಿಗೆಂಪು ಮೈ ಬಣ್ಣ ಸಡಪಾತಳ ಮೈಕಟ್ಟು ಇದ್ದು, ಕಪ್ಪು ಬಣ್ಣದ ಫುಲ್ ಪ್ಯಾಂಟ್, ನೀಲಿ ಬಣ್ಣದ ಫುಲ್ ತೋಳಿನ ಶರ್ಟ, ಹಾಗೂ ಕನ್ನಡ, ಮರಾಠಿ ಭಾಷೆ ಬಲ್ಲವರಾಗಿರುತ್ತಾರೆ..
ಸದರಿ ವ್ಯಕಿಯ ಬಗ್ಗೆ ಮಾಹಿತಿ ದೊರೆತಲ್ಲಿ ಪೊಲೀಸ್ ಆಯುಕ್ತರು ಬೆಳಗಾವಿ ನಗರ, ಅಥವಾ ಪೊಲೀಸ್ ಇನ್ಸಪೆಕ್ಟರ್ ಎ.ಪಿ.ಎಮ್.ಸಿ ಪೊಲೀಸ ಠಾಣೆ ಬೆಳಗಾವಿ ದೂರವಾಣಿ ಸಂಖ್ಯೆ 0831-2405250 ಮೋಬೈಲ್ ನಂ 9480804083, 9480804115.,ಗೆ ಸಂಪರ್ಕಿಸಬಹುದು ಎಂದು ಎ.ಪಿ.ಎಮ್.ಸಿ ಪೊಲೀಸ ಠಾಣೆಯ ಆರಕ್ಷಕ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///
ವಿಕಲಚೇತನರ ವಿದ್ಯಾರ್ಥಿ ವೇತನಕ್ಕಾಗಿ: ಅರ್ಜಿ ಅಹ್ವಾನ
ಬೆಳಗಾವಿ, ಸೆ.22 : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ 2023-24 ನೇ ಸಾಲಿಗೆ ವಿಕಲಚೇತನ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ ಯೋಜನೆಯಡಿ ಮೆಟ್ರಿಕ್ ಪೂರ್ವ (ಪ್ರೀಮ್ಯಾಟ್ರಿಕ್) ವಿದ್ಯಾರ್ಥಿ ವೇತನಕ್ಕಾಗಿ ಎಸ್.ಎಸ್.ಪಿ. ತಂತ್ರಾಂಶದಡಿ ಆನ್‍ಲೈನ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಮೆಟ್ರಿಕ್ ಪೂರ್ವ ವಿಕಲಚೇತನ ವಿದ್ಯಾರ್ಥಿಗಳು, ಶಾಲೆಗಳು / ಶಿಕ್ಷಣ ಸಂಸ್ಥೆಗಳ ಮುಖಾಂತರ ಸದರಿ ಯೋಜನೆಯಡಿ ಹೊಸದಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ವೆಬ್ ಸೈಟ್ https://ssp.karnataka.gov.in/ssp2324/homenew.aspx ನಲ್ಲಿ ಹಾಗೂ ನವೀಕರಣ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ವೆಬ್ ಸೈಟ್ https://ssp.karnataka.gov.in/ssp2324/signin.aspx ನಲ್ಲಿ ಆನ್‍ಲೈನ್ ಮೂಲಕ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಜಿಲ್ಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿಕಲಚೇತನರು ಈ ಸೌಲಭ್ಯದೊಂದಿಗೆ ಉನ್ನತ ಶಿಕ್ಷಣವನ್ನು ಪಡೆದು ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳನ್ನು ಸಲ್ಲಿಸಿ ಯೋಜನೆಯ ಸದುಪಯೋಗಪಡೆದುಕೊಳ್ಳುಬೆಕೇಂದು ಬೆಳಗಾವಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.//
ವ್ಯಾಪಾರಸ್ತರು ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ ಅಡಿಯಲ್ಲಿ ನೊಂದಣಿ ಮಾಡಿಸಿಕೊಳ್ಳಿ: ಡಿ. ಜಿ. ನಾಗೇಶ
ಬೆಳಗಾವಿ, ಸೆ.22 : ವಿಕಲಚೇತನರ ನಗದ ಕಾರ್ಮಿಕ ಭವನ, ಕಛೇರಿ ಸಭಾಂಗಣದಲ್ಲಿ (ಸೆ.21) ರಂದು ಬೆಳಗಾವಿಯಲ್ಲಿರುವ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ ಅಡಿಯಲ್ಲಿ ನೊಂದಣಿ ಮಾಡಿಸುವ ಸಲುವಾಗಿ ಹಾಗೂ ಕಾಯ್ದೆಯ ಅನುಷ್ಠಾನದ ಬಗ್ಗೆ ಮಾಹಿತಿಯನ್ನು ನೀಡಲು ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.
ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆಯ ಬಗ್ಗೆ ಮತ್ತು ಕಾಯ್ದೆಯ ಅನುಷ್ಠಾನದ ಕುರಿತು ವಿವರಣೆ ನೀಡಿ, ಎಲ್ಲಾ ಸಂಘಟನೆಯವರಿಗೆ ತಮ್ಮ ತಮ್ಮ ಸಂಘದಲ್ಲಿ ಬರುವ ವ್ಯಾಪಾರಸ್ತರನ್ನು ಅಂಗಡಿಕಾರರನ್ನು ಸದರಿ ಕಾಯ್ದೆಯಡಿಯಲ್ಲಿ ನೊಂದಣಿ ಮಾಡಿಸಬೇಕೆಂದು ಬೆಳಗಾವಿ ಪ್ರಾದೇಶಿಕ ಉಪಕಾರ್ಮಿಕ ಆಯುಕ್ತರಾದ ಡಿ. ಜಿ. ನಾಗೇಶ ಅವರು ಹೇಳಿದರು.
ಉಪ ವಿಭಾಗ-1 ಕಾರ್ಮಿಕ ಅಧಿಕಾರಿಯದ ಮಲ್ಲಿಕಾರ್ಜುನ ಎಸ್ ಜೋಗುರ, ಉಪ ವಿಭಾಗ-2 ಕಾರ್ಮಿಕ ಅಧಿಕಾರಿಯದ ತರನ್ನುಮ ಎ ಬೆಂಗಾಲಿ, ಹಿರಿಯ ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ನಿರೀಕ್ಷಕರುಗಳು, ಹೊಟೇಲ ಮಾಲೀಕರ ಸಂಘ, ಬಟ್ಟೆ ವ್ಯಾಪಾರಿಗಳ ಸಂಘ, ಹೊಲಸೇಲ್ ಬಟ್ಟೆ ವ್ಯಾಪಾರಿಗಳ ಸಂಘ, ಕಿರಾಣಾ ವರ್ತಕರ ಸಂಘ, ಹೋಲಸೇಲ್, ಕಿರಾಣಾ ವರ್ತಕರ ಸಂಘ, ಔಷಧಿ ವ್ಯಾಪಾರಿಗಳ ಸಂಘ, ಕೃಷಿ ಮಾರುಕಟ್ಟೆ ವರ್ತಕರ ಸಂಘ, ಸಿಹಿ ತಿಂಡಿ ಮಾರಾಟಗಾರರ ಸಂಘ, ಮಂಡಕ್ಕಿ ಭಟ್ಟಿ ಮಾಲೀಕರ ಸಂಘ, ಹೂವು ಮಾರಾಟಗಾರರ ಸಂಘ, ತರಕಾರಿ ಮಾರಾಟಗಾರರ ಸಂಘ, ಹಣ್ಣು ಮಾರಾಟಗಾರರ ಸಂಘ ಹಾಗೂ ಇತರೆ ಎಲ್ಲಾ ಸಂಘಟನೆಯವರು ಉಪಸ್ಥಿತರಿದ್ದರು.///
ಸಲಹಾ ಸಮಿತಿಗೆ ನಾಮ ನಿರ್ದೇಶಿತ ಸದಸ್ಯರಾಗಿ ಅಮೃತ ರುದ್ರಪ್ಪ ದಪ್ಪಿನವರ ಆಯ್ಕೆ
ಬೆಳಗಾವಿ, ಸೆ.22 : ಬೆಳಗಾವಿ ಜಿಲ್ಲಾ ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರಿಗೆ ಸೌಲಭ್ಯ ಹಾಗೂ ಮೀಸಲಾತಿ ಕಲ್ಪಿಸುವಲ್ಲಿ ಜಿಲ್ಲಾ ಮಟ್ಟದ ಸಲಹಾ ಸಮಿತಿಗೆ ನಾಮ ನಿರ್ದೇಶಿತ ಸದಸ್ಯರನ್ನಾಗಿ ಮೂಡಲಗಿ ತಾಲೂಕಿನ ಜೋಕಾನಟ್ಟಿ ಗ್ರಾಮದ ಅಮೃತ ರುದ್ರಪ್ಪ ದಪ್ಪಿನವರ ಅವರನ್ನು ಆಯ್ಕೆ ಮಾಡಲಾಗಿದೆ.
ಸಮಿತಿಯ ಅಧ್ಯಕ್ಷರು ಹಾಗೂ ಬೆಳಗಾವಿಯ ಜಿಲ್ಲಾಧಿಕಾರಿಗಳಾದ ನಿತೇಶ ಕೆ. ಪಾಟೀಲ ಅವರು ಇತ್ತಿಚಿಗೆ ಇವರನ್ನು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಸನ್ಮಾನಿಸಿ, ಗೌರವಿಸಿದರು.///
E-KYC ಮಾಡಿಸಲು ಸೂಚನೆ
ಬೆಳಗಾವಿ, ಸೆ.22 : ಬೆಳಗಾವಿ ಜಿಲ್ಲೆಯಲ್ಲಿ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆಯಡಿ ಮಾಸಾಶನ ಪಡೆಯುತ್ತಿರುವ ಫಲಾನುಭವಿಗಳು ಇ-ಏಙಅ ಮಾಡಿಸುವುದು ಕಡ್ಡಾಯವಾಗಿದೆ, ಸಪ್ಟೆಂಬರ್ 30, 2023 ರೊಳಗೆ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ನೋಂದಣಿ ಮಾಡಿಸಿಕೊಳ್ಳದಿದ್ದರೆ ಮಾಸಾಶನ ಸ್ಥಗಿತಗೊಳ್ಳಲಿದೆ.
ಜಿಲ್ಲೆಯಲ್ಲಿ 54,103 ಜನರು ಇ-ಏಙಅ ಮಾಡಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ. ಈ ಹಿನ್ನಲೆಯಲ್ಲಿ ಮತ್ತೊಮ್ಮೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿದೆ. ನಿಗದಿತ ಅವಧಿಯೊಳಗೆ ನೋಂದಣಿ ಮಾಡಿಕೊಳ್ಳದಿದ್ದರೆ ಮಾಸಾಶನ ಸ್ಥಗಿತಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದೆ.
ವೇತನ, ವಿಧವಾ ವೇತನ, ಸಂಧ್ಯಾ ಸುರಕ್ಷಾ ಮನಸ್ವಿನಿ, ಮೈತ್ರಿ, ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಸಂಬಂಧಿಸಿದಂತೆ ಅವರ ಕುಟುಂಬದವರಿಗೆ ಪ್ರತಿ ತಿಂಗಳು ಮಾಸಾಶನ ನೀಡಲಾಗುತ್ತಿದೆ. ನ್ಯಾಷನ ಪೇಮೆಂಟ್ ಕಾಪೆರ್Çೀರೇಷನ್ ಇಂಡಿಯಾದಿಂದ ರಾಜ್ಯ ಖಜಾನೆಗೆ ಹಣ ಸಂದಾಯವಾಗಲಿದ್ದು, ಬಳಿಕ ಅಲ್ಲಿಂದ ಫಲಾನುಭವಿ ಖಾತೆ ಸೇರುತ್ತದೆ. ಈ ಪ್ರಕ್ರಿಯೆಯಿಂದ ಅನಗತ್ಯ ತೊಂದರೆಯಾಗುತಿದ್ದು, ಇ-ಏಙಅ ಮಾಡಿಸಿದ ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆಯಾಗಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.///
ಬೆಳಗಾವಿ ಸೆ. 26 ರಂದು “ಜನತಾ ದರ್ಶನ” ಕಾರ್ಯಕ್ರಮ
ಬೆಳಗಾವಿ, ಸೆ.22 : ಜಿಲ್ಲಾ ಮಟ್ಟದಲ್ಲಿ ಸಾರ್ವಜನಿಕ ಅಹವಾಲುಗಳಿಗೆ ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಪ್ರತಿ ತಿಂಗಳು “ಜನತಾ ದರ್ಶನ” ಕಾರ್ಯಕ್ರಮ ಹಮ್ಮಿಕೊಂಡು ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಂಬಂಧಿಸಿದ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡಂತೆ, ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲು ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳು ಸೂಚನೆ ನೀಡಿರುತ್ತಾರೆ.
ಅದರಂತೆ, ನಗರದ ಕೆಪಿಟಿಸಿಎಲ್ ಭವನದಲ್ಲಿ ಮಂಗಳವಾರ (ಸೆ.26) 2023 ರಂದು ಬೆಳಿಗ್ಗೆ 11 ಗಂಟೆಗೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜನತಾ ದರ್ಶನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಬೆಳಗಾವಿ ಜಿಲ್ಲಾಡಳಿತವು “ಜನತಾ ದರ್ಶನ” ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಆಯೋಜಿಸಿ ಸಾರ್ವಜನಿಕರಿಗೆ ಅದರ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಸದರಿ ದಿನದಂದು “ಕೆಪಿಟಿಸಿಎಲ್ ಭವನ” ನೆಹರು ನಗರ ಬೆಳಗಾವಿಯಲ್ಲಿ ಮನವಿ, ಅಹವಾಲುಗಳನ್ನು ಸಲ್ಲಿಸಲು ಅವಕಾಶ ಕಲ್ಪಸಲಾಗಿದೆ.
ಜಿಲ್ಲೆಯ ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಬೆಳಗಾವಿ ಜಿಲ್ಲಾಧಿಕಾರಿಗಳಾದ ನಿತೇಶ ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ
ಬೆಳಗಾವಿ, ಸೆ.22 : 2023-24ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಮುಸ್ಲಿಂ, ಜೈನ್, ಕ್ರಿಶ್ಚಿಯನ್. ಬೌದ್ಧ, ಸಿಖ್, ಪಾರ್ಸಿ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಡಿ.ಎಡ್ ಹಾಗೂ ಬಿ.ಎಡ್ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿssಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಕಡ್ಢಾಯವಾಗಿ ಸೇವಾಸಿಂಧು ಪೋರ್ಟಲ್‍ನಲ್ಲಿ (https://sevasindhu.karnataka.in) ಸಪ್ಟೆಂಬರ್ 30, 2023 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. .
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿಬೇಕು ಹಾಗೂ National Council for teacher Education ಹಾಗೂ Department of State Education Research and Training ಇದರಡಿ ಮಾನ್ಯತೆ ಪಡೆದ ಸರ್ಕಾರಿ/ಅರೆ ಸರ್ಕಾರಿ/ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರಬೇಕು.
ಅಭ್ಯರ್ಥಿಯ ಪೋಷಕರ ವಾರ್ಷಿಕ ಆದಾಯ ರೂ.6.00 ಲಕ್ಷಕ್ಕಿಂತ ಕಡಿಮೆ ಇರಬೇಕು. ವಿದ್ಯಾರ್ಥಿಗಳು ಡಿ.ಎಡ್ ಮತ್ತು ಬಿ,.ಎಡ್ ಕೋರ್ಸುಗಳಲ್ಲಿ ದಾಖಲಾಗಿರುವ ಹಾಗೂ ಶುಲ್ಕವನ್ನು ಭರಿಸಿರುವ ಬಗ್ಗೆ ಎಲಾ ್ಲಅಧಿಕೃತ ದಾಖಲಾತಿಗಳನ್ನು ಸಲ್ಲಿಸಬೇಕು.
ಈಗಾಗಲೇ ಸರ್ಕಾರಿ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವರು ಅರ್ಹರಿರುವುದಿಲ್ಲ. ಸದರಿ ಅಭ್ಯರ್ಥಿಗಳು ಹಿಂದಿನ ಸಾಲಿನಲ್ಲಿ ಕನಿಷ್ಠ ಶೇ.50 ರಷ್ಟು ಅಂಕ ಪಡೆದು ಉತ್ತೀರ್ಣರಾಗಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಗೆ ಆಧಾರ ಜೋಡನೆ (LINK) ಮಾಡಿಕೊಂಡಿರಬೇಕು.
ಹೆಚ್ಚಿನ ಮಾಹಿತಿಗಾಗಿ ಇಲಾಖೆ ಸಹಾಯವಾಣಿ ಸಂಖ್ಯೆ 8277799990 ಮತ್ತು ಸಂಬಂದಪಟ್ಟ ತಾಲೂಕಾ ಅಲ್ಪ ಸಂಖ್ಯಾತರ ಮಾಹಿತಿ ಕೇಂದ್ರಗಳ ದೂ.ಸಂ 08312950348/08312950349 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////
ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಪ್ರಯಾಣದ ವ್ಯವಸ್ಥೆ
ಬೆಳಗಾವಿ, ಸೆ.22: 2023-24 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಯಾಣದ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ.
ಯಾತ್ರಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ https://sw.kar.nic.in ಮೂಲಕ ಅರ್ಜಿಯನ್ನು ಸಪ್ಟೆಂಬರ್ 20, 2023 ರಿಂದ ಅಕ್ಟೋಬರ್ 10 ರ ವರೆಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಈ ಕಚೇರಿ ಹಾಗೂ ಇಲಾಖೆಯ ತಾಲ್ಲೂಕು ಮಟ್ಟದ ಕಛೇರಿಗಳಿಗೆ ಕಚೇರಿ ಸಮಯದಲ್ಲಿ ಸಂರ್ಪಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///