Belagavi News In Kannada | News Belgaum

ಈ ಬಾರಿ ಸರಳ ದಸರಾ: ಸಚಿವ ಎಚ್‌.ಸಿ. ಮಹದೇವಪ್ಪ

ಮೈಸೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಈ ಬಾರಿ ಸರಳ ದಸರಾವೋ ಅಥವಾ ಅದ್ದೂರಿ ದಸರಾವೋ ಎಂಬ ಜಿಜ್ಞಾಸೆಯಿದ್ದು, ಕೊನೆಗೂ ಸರ್ಕಾರ ಮೌನ ಮುರಿದಿದ್ದು, ಸರಳ ದಸರಾ ಆಚರಣೆಯ ಸೂಚನೆಯನ್ನು ಸಚಿವ ಎಚ್‌.ಸಿ. ಮಹದೇವಪ್ಪ ಅವರು ನೀಡಿದ್ದಾರೆ..

 

ರಾಜ್ಯದಲ್ಲಿ ಮಳೆ ಕೊರತೆಯಿಂದ ಬರ ಇರುವುದರಿಂದ ಕಾವೇರಿ ನೀರು ನಿರಂತವಾಗಿ ತಮಿಳುನಾಡಿಗೆ ಹೋಗುತ್ತಿದೆ. ಅಲ್ಲದೆ, ಸರ್ಕಾರ ಬರ ತಾಲೂಕು ಪಟ್ಟಿ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಬೇಕೋ ಅಥವಾ ಅದ್ಧೂರಿಯಾಗಿ ಆಚರಿಸಬೇಕೋ ಎಂಬ ಗೊಂದಲದಲ್ಲಿ ಸರಕಾರ ಸಿಲುಕಿತ್ತು. ಇದೀಗ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸಾಮಾಜಿಕ ಜಾಲತಾಣದಲ್ಲಿ ಸರಳ ದಸರಾ ಬಗ್ಗೆ ಮಾಹಿತಿ ನೀಡಿದ್ದಾರೆ..

ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ರೈತಾಪಿ ವರ್ಗವು ಸಂಕಷ್ಟದಲ್ಲಿದೆ. ಆದ್ದರಿಂದ ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾ ಆಚರಿಸಿಲು ಸರ್ಕಾರ ನಿರ್ಧರಿಸಿದೆ. ರೈತರ ಸಂಕಷ್ಟದ ಸಂದರ್ಭಕ್ಕೆ ಪೂರಕವಾಗಿ ಸರ್ಕಾರವು ಈ ಬಾರಿ ಸರಳ ದಸರಾ ಆಚರಿಸಲಿದೆ ಎಂದು ಟ್ವೀಟ್‌ನಲ್ಲಿ ಮಾಹಿತಿ ನೀಡಿದ್ದಾರೆ..