ಟ್ರಾಕ್ಟರ್ ಚಾಲಕನ ಮೇಲೆ ಹಲ್ಲೆ; ಪಿಎಸ್ಐ ವಿರುದ್ಧ FIR.

ರಾಯಚೂರು: ಟ್ರಾಕ್ಟರ್ ಚಾಲಕನ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಮಣಿಕಂಠ ವಿರುದ್ಧ ಮಸ್ಕಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹಲ್ಲೆ, ಬೆದರಿಕೆ, ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಾಗಿದೆ..
ಸೆಪ್ಟೆಂಬರ್ 20 ರಂದು ಮಸ್ಕಿ ಪಟ್ಟಣದಲ್ಲಿ ನಿರುಪಾದಿ ಎಂಬುವರು ಟ್ರ್ಯಾಕ್ಟರ್ನಲ್ಲಿ ಮಣ್ಣು ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ಪಿಎಸ್ಐ ಮಣಿಕಂಠ ಟ್ರ್ಯಾಕ್ಟರ್ ತಡೆದು ಮಣ್ಣು ತೆಗೆದುಕೊಂಡು ಹೋಗಲು 20 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದರು..
ಅಲ್ಲದೇ ತನ್ನ ಜೀಪ್ನಲ್ಲಿದ್ದ ಪೈಪ್ ತೆಗೆದುಕೊಂಡು ನಿರುಪಾದಿ ಅವರಿಗೆ ಮನಬಂದಂತೆ ಥಳಿಸಿದ್ದಾರೆ. ಹಾಗೇ ಪಿಎಸ್ಐ ಮಣಿಕಂಠ ಜಾತಿ ನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ..
ಘಟನೆ ಬಳಿಕ ಜನರು ಕಳೆದ ಎರಡು ದಿನಗಳಿಂದ ಸರಣಿ ಪ್ರತಿಭಟನೆ ಮಾಡುತ್ತಿದ್ದಾರೆ. ಸಾರ್ವಜನಿಕರ ಒತ್ತಡಕ್ಕೆ ಮಣಿದ ಇಲಾಖೆ ಪಿಎಸ್ಐ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದೆ. ಸದ್ಯ ನಿರುಪಾದಿ ರಾಯಚೂರು ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ..