ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಮಾಡುತ್ತಿವೆ.ನೀರು ಹಂಚಿಕೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ: ಸಿಎಂ ಸಿದ್ದರಾಮಯ್ಯ
ನೀರು ಹಂಚಿಕೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ: ಸಿಎಂ ಸಿದ್ದರಾಮಯ್ಯ

ಚಾಮರಾಜನಗರ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ..
ಮಾದಪ್ಪನ ಸನ್ನಿಧಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಮಿಳುನಾಡಿಗೆ 18 ದಿನಗಳ 3 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ವಿಚಾರ ಸಂಬಂಧ ಪ್ರತಿಕ್ರಿಯಿಸಿದರು. ಸುಪ್ರೀಂ ಕೋರ್ಟ್ ನಲ್ಲಿ ಈ ವಿಚಾರದ ಕುರಿತು ಚಾಲೆಂಜ್ ಮಾಡುತ್ತೇವೆ. ಸದ್ಯ ನಮ್ಮ ಬಳಿ ನೀರು ಇಲ್ಲ ಎಂದರು..
ಈಗಾಗ್ಲೆ ಕಾನೂನು ತಜ್ಞರ ಸಲಹೆ ಪಡೆದಿದ್ದೇವೆ. ನೀರು ಹಂಚಿಕೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ. ಕಾವೇರಿ ವಿಚಾರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಮಾಡುತ್ತಿವೆ. ವಿಪಕ್ಷಗಳು ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡುತ್ತಲೇ ಇರುತ್ತೆ ಎಂದು ವಾಗ್ದಾಳಿ ನಡೆಸಿದರು..
ಚಾಮರಾಜನಗರಕ್ಕೆ ಅಂಟಿದ ಮೌಢ್ಯ ತೊಡೆದು ಹಾಕಿರುವೆ. ಕಳೆದ ಬಾರಿ 12 ಭೇಟಿ ನೀಡಿ 5 ವರ್ಷ ಗಟ್ಟಿಯಾಗಿ ಆಡಳಿತ ನಡೆಸಿದ್ದೆ ಎಂದು ಹೇಳಿದರು..