ಹಿರಣ್ಯಕೇಶಿ ಕಾರ್ಖಾನೆಯಿಂದ 10 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ: ಮಾಜಿ ಸಂಸದ ಕತ್ತಿ..

ಹುಕ್ಕೇರಿ: ಪ್ರಸಕ್ತ ಹಂಗಾಮಿನಲ್ಲಿ ಸಂಕೇಶ್ವರ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯಿಂದ 10 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ ಹೊಂದಲಾಗಿದೆ ಎಂದು ಮಾಜಿ ಸಂಸದರೂ ಆದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಹೇಳಿದರು..
ತಾಲೂಕಿನ ಸಂಕೇಶ್ವರದಲ್ಲಿ ಬುಧವಾರ ನಡೆದ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯ ೬೭ನೇ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಮಾತನಾಡಿದ ಅವರು, ಮಳೆ ಕೊರತೆಯಿಂದ ನಿರೀಕ್ಷಿತ ಪ್ರಮಾಣದಲ್ಲಿ ಕಬ್ಬು ಬೆಳೆ ಬೆಳೆದಿಲ್ಲ. ಆದರೂ ಕೂಡ ಈ ವರ್ಷ ಸುಮಾರು 10 ಲಕ್ಷ ಮೆ.ಟನ್ ಕಬ್ಬು ನುರಿಸಲು ಆಡಳಿತ ಮಂಡಳಿ ನಿರ್ಧರಿಸಿದೆ ಎಂದರು..
ಸಹಕಾರಿ ತತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ಈ ಭಾಗದ ರೈತರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದೆ. ಕಬ್ಬು ಬೆಳೆಗಾರರು, ಸಿಬ್ಬಂದಿಗಳು ಮತ್ತು ರೈತರ ಹಿತರಕ್ಷಣೆ ಕಾಯುವಲ್ಲಿ ಆಡಳಿತ ಮಂಡಳಿ ಸದಾ ಬದ್ಧವಿದೆ. ಈ ಸಂಸ್ಥೆಯನ್ನು ಉಳಿಸಿ ಬೆಳೆಸುವಲ್ಲಿ ಎಲ್ಲರ ಸಹಕಾರ ಅಗತ್ಯವಿದೆ ಎಂದು ಅವರು ಹೇಳಿದರು..
ಕಾರ್ಖಾನೆ ಉಪಾಧ್ಯಕ್ಷ ಶ್ರೀಶೈಲಪ್ಪ ಮಗದುಮ್ಮ, ನಿರ್ದೇಶಕರಾದ ಶಿವನಾಯಿಕ ನಾಯಿಕ, ಶಿವಪುತ್ರಪ್ಪಾ ಶಿರಕೋಳಿ, ಪ್ರಭುದೇವ ಪಾಟೀಲ, ಸುರೇಶ ಬೆಲ್ಲದ, ಅಶೋಕ ಪಟ್ಟಣಶೆಟ್ಟಿ, ಬಸವರಾಜ ಮರಡಿ, ಬಾಬಾಸಾಹೇಬ ಅರಬೋಳೆ, ಬಸವರಾಜ ಕಲ್ಲಟ್ಟಿ, ಸುರೇಂದ್ರ ದೊಡ್ಡಲಿಂಗನವರ, ಸಂಗಮ ಸಕ್ಕರೆ ಕಾರ್ಖಾನೆ ಅಧ್ಯಕ್ಷ ರಾಜೇಂದ್ರ ಪಾಟೀಲ, ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಅಧ್ಯಕ್ಷ ಕಲಗೌಡ ಪಾಟೀಲ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದುರದುಂಡಿ ಪಾಟೀಲ, ಟಿಎಪಿಸಿಎಂಎಸ್ ಅಧ್ಯಕ್ಷ ಕಲ್ಲಪ್ಪಣ್ಣಾ
ಚೌಗಲಾ, ಮುಖಂಡರಾದ ಮಹಾವೀರ ನಿಲಜಗಿ, ಸತ್ಯಪ್ಪಾ ನಾಯಿಕ, ಗುರು ಕುಲಕರ್ಣಿ, ರಾಚಯ್ಯಾ ಹಿರೇಮಠ, ಅಶೋಕ ಚಂದಪ್ಪಗೋಳ, ಜಯಗೌಡ ಪಾಟೀಲ, ವಿಜಯ ಶೇರೆಕರ, ಶಂಕರರಾವ ಬಾಂದುರ್ಗೆ, ಸುಹಾಸ ಜೋಶಿ, ಅಮರ ನಲವಡೆ, ಕಾರ್ಖಾನೆ ಮಾಜಿ ಸಮನ್ವಯ ಅಧಿಕಾರಿ ಜಯಸಿಂಗ ಸನದಿ, ಲೇಖಾಧಿಕಾರಿ ಕೆ.ಆರ್.ಬೆಟಗೇರಿ ಮತ್ತಿತರರು ಉಪಸ್ಥಿತರಿದ್ದರು..
ವ್ಯವಸ್ಥಾಪಕ ನಿರ್ದೇಶಕ ಸಾತಪ್ಪ ಕರ್ಕಿನಾಯಿಕ ವರದಿ ವಾಚನ ಮಂಡಿಸಿ ವಿಷಯ ಪಟ್ಟಿಗೆ ಮಂಜೂರಿ ಪಡೆದರು. ನಿರ್ದೇಶಕ ಅಶೋಕ ಪಟ್ಟಣಶೆಟ್ಟಿ ಸ್ವಾಗತಿಸಿದರು. ಕಾರ್ಯಾಲಯ ಅಧೀಕ್ಷಕ ಸುರೇಶ ನಾಶಿಪುಡಿ ನಿರೂಪಿಸಿದರು. ನಿರ್ದೇಶಕ ಬಾಬಾಸಾಹೇಬ ಅರಬೋಳೆ ವಂದಿಸಿದರು.