Belagavi News In Kannada | News Belgaum

ಮಹಿಳೆಯರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ.35 ಮೀಸಲಾತಿ ಘೋಷಣೆ

ಮಧ್ಯಪ್ರದೇಶ:  ವಿಧಾನಸಭೆ ಚುನಾವಣೆಗೂ ಮುನ್ನವೇ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಸರ್ಕಾರ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ.

ಉದ್ಯೋಗದಲ್ಲಿ ಮಹಿಳೆಯರಿಗೆ ಶೇಕಡಾ 35 ರಷ್ಟು ಮೀಸಲಾತಿ ಹೆಚ್ಚಿಸಿ ಆದೇಶ ಹೊರಡಿಸಿದೆ.
ನಾಗರಿಕ ಸೇವೆಗಳ ನಿಯಮಗಳ ಅಡಿಯಲ್ಲಿ (ಮಹಿಳೆಯರ ನೇಮಕಾತಿಗಾಗಿ ವಿಶೇಷ ನಿಬಂಧನೆ) 1997 ರ ಕಾಯ್ದೆಗೆ ತಿದ್ದುಪಡಿ ತಂದಿದ್ದು, ಇನ್ಮುಂದೆ ಆ ರಾಜ್ಯದ ಮಹಿಳೆಯರಿಗೆ ಉದ್ಯೋಗದಲ್ಲಿ ಶೇಕಡಾ 35 ರಷ್ಟು ಮೀಸಲಾತಿ ಸಿಗಲಿದೆ.

ಈ ಮೀಸಲಾತಿಯು ಅರಣ್ಯ ಇಲಾಖೆಗೆ ಅನ್ವಯ ಆಗುವುದಿಲ್ಲ. ಲೋಕಸಭೆ ಚುನಾವಣೆ, ವಿಧಾನಸಭೆ ಹೊತ್ತಿನಲ್ಲಿ ಶಿವರಾಜ್ ಸಿಂಗ್ ಚೌಹಾಣ್ ವಿಪಕ್ಷಗಳಿಗೆ ಶಾಕ್ ಕೊಟ್ಟಿದ್ದಾರೆ. ಮತ್ತೊಂದು ಕಡೆ ಲೋಕಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ ಶೇಕಡಾ 33 ರಷ್ಟು ಮೀಸಲಾತಿಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಈ ಬೆನ್ನಲ್ಲೇ ಮಧ್ಯಪ್ರದೇಶ ಸರ್ಕಾರ ತನ್ನ ರಾಜ್ಯದ ಮಹಿಳೆಯರಿಗೆ ಉದ್ಯೋಗದಲ್ಲಿ ಮೀಸಲಾತಿಯನ್ನು ಪ್ರಕಟಿಸಿದೆ.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಶಿವರಾಜ್ ಸಿಂಗ್ ಮೀಸಲಾತಿ ನೀಡುವ ಬಗ್ಗೆ ಘೋಷಣೆ ಮಾಡಿದ್ದರು. ಅಂತೆಯೇ ಇಲ್ಲಿಯವರೆಗೆ ಶೇಕಡಾ 33 ರಷ್ಟಿದ್ದ ಮೀಸಲಾತಿಯನ್ನು 35ಕ್ಕೆ ಹೆಚ್ಚಿಸಿ ಸಿಹಿ ಸುದ್ದಿ ನೀಡಿದ್ದಾರೆ.

ಮುಂದಿನ ನವೆಂಬರ್​ನಲ್ಲಿ ಮಧ್ಯಪ್ರದೇಶ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಟಿಕೆಟ್ ಹಂಚಿಕೆ ನಿರ್ಧಾರಗಳ ಜೊತೆ ಜೊತೆಗೆ ಮಹಿಳೆಯರನ್ನೂ ಖುಷಿ ಪಡಿಸಲು ಸಿಎಂ ಮುಂದಾಗಿದ್ದಾರೆ. ಅಂದ್ಹಾಗೆ ಮಧ್ಯಪ್ರದೇಶದಲ್ಲಿ 2.62 ಕೋಟಿ ಮಹಿಳಾ ಮತದಾರರಿದ್ದಾರೆ.