ಇಸ್ಪೀಟ್ ಅಡ್ಡೆಯ ಮೇಲೆ ದಾಳಿ; 18 ಜನ ಬಂಧನ, 1.78 ಲಕ್ಷ ರೂ. ಜಪ್ತಿ

ಬೀದರ್: ಇಸ್ಪೀಟ್ ಜೂಜು ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ 1.78 ಲಕ್ಷ ರೂ. ನಗದು ಜಪ್ತಿ ಮಾಡಿದ ಪ್ರಕರಣ ಹುಮ್ನಾಬಾದ್ ಹೊರ ವಲಯದಲ್ಲಿ ನಡೆದಿದೆ. ಅಲ್ಲದೇ ಸ್ಥಳದಲ್ಲಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ 18 ಜನ ಆರೋಪಿಗಳನ್ನು ಬಂಧಿಸಿದ್ದಾರೆ..
ಖಚಿತ ಮಾಹಿತಿ ಮೇಲೆ ಪೊಲೀಸರು ಈ ದಾಳಿ ನಡೆಸಿದ್ದಾರೆ. ಆರೋಪಿಗಳು ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಡುತ್ತಿದ್ದರು. ಈ ಬಗ್ಗೆ ಮಾಹಿತಿ ಬಂದ ತಕ್ಷಣ ಪೊಲೀಸರು ದಾಳಿ ಮಾಡಿದ್ದಾರೆ. ಇದರಿಂದಾಗಿ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಅಲ್ಲದೇ ಅಪಾರ ಪ್ರಮಾಣದ ಹಣ ಕೂಡ ಜಪ್ತಿ ಮಾಡಲಾಗಿದೆ.,
ಎಸ್ಪಿ ಚೆನ್ನಬಸವಣ್ಣ ಲಂಗೋಟಿ ಮಾರ್ಗದರ್ಶನದಲ್ಲಿ ಈ ದಾಳಿ ಮಾಡಲಾಗಿದೆ. ಈ ಸಂಬಂಧ ಹುಮ್ನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.