ಸಿಎಂ ಇಬ್ರಾಹಿಂ ಜೆಡಿಎಸ್‌ನಲ್ಲೇ ಇರ್ತಾರೆ ಎಂದ ಜಿ.ಟಿ. ದೇವೇಗೌಡ

ವಿಜಯಪುರ: ಸಿಎಂ ಇಬ್ರಾಹಿಂ ಜೆಡಿಎಸ್ ಬಿಡೋದಿಲ್ಲ. ಬಿಜೆಪಿ ಜೊತೆಗೆ ಹೋಗಲು ಇಬ್ರಾಹಿಂ ವಿರೋಧವಿಲ್ಲ. ಅವರೇ ಮುಂದೆ ನಿಂತು ನನ್ನ ಅಧ್ಯಕ್ಷ ಸ್ಥಾನ ಘೋಷಣೆ ಮಾಡಿದ್ದಾರೆ, ನೀವೆ ನೋಡಿದ್ದೀರಿ ಎಂದು ವಿಜಯಪುರದಲ್ಲಿ ಜೆಡಿಎಸ್ ಹಿರಿಯ ನಾಯಕ ಜಿ.ಟಿ. ದೇವೆಗೌಡ ಹೇಳಿಕೆ ನೀಡಿದ್ದಾರೆ.
ಸಿ.ಎಂ ಇಬ್ರಾಹಿಂ ಜೆಡಿಎಸ್ ಪಕ್ಷದಿಂದ ಒಂದು ಕಾಲು ಹೊರಗಿಟ್ಟ ವಿಚಾರದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಎಂ. ಇಬ್ರಾಹಿಂ ಅವರದ್ದು ಈಗ ಏನು ಚರ್ಚೆ ಇಲ್ಲ. ಮುಂದೆ ಒಟ್ಟಾಗಿ ಹೇಗೆ ಹೋಗಬೇಕು ಅನ್ನೋದು ಇಬ್ರಾಹಿಂ ಸಲಹೆ ಇದೆ. ದೊಡ್ಡ ಗೌಡರ ಜೊತೆಗೆ ಸಲಹೆ ಹಂಚಿಕೊಂಡಿದ್ದಾರೆ. ಬಿಜೆಪಿ ಜೊತೆಗೆ ಎಷ್ಟು ಸೀಟ್ ಹಂಚಿಕೆಯಾಗಬೇಕು, ಮುಂದೆ ಯಾವ ರೀತಿ ನಡೆದುಕೊಳ್ಳಬೇಕು ಎನ್ನುವ ಸಲಹೆ ಇಬ್ರಾಹಿಂ ಅವರದ್ದು. ಬಿಜೆಪಿ ಜೊತೆ ಹೋಗಲು ಯಾವುದೇ ವಿರೋಧವಿಲ್ಲ ಎಂಬ ನಿಲುವನ್ನು ಇಬ್ರಾಹಿಂ ವ್ಯಕ್ತಪಡಿಸಿದ್ದಾರೆ ಎಂದರು./////