Belagavi News In Kannada | News Belgaum

ಏಷ್ಯನ್ ಗೇಮ್ಸ್​ ಕ್ರೀಡಾ ವಿಜೇತರಿಗೆ ಸಿಎಂ ಸಿದ್ದರಾಮಯ್ಯ ಸನ್ಮಾನ

ಬೆಂಗಳೂರು:  ಚೀನಾದಲ್ಲಿ ಇತ್ತೀಚೆಗೆ ನಡೆದ ಏಷ್ಯನ್ ಗೇಮ್ಸ್​ನಲ್ಲಿ ಪದಕ ಗೆದ್ದ ರಾಜ್ಯದ ಕ್ರೀಡಾಪಟುಗಳಿಗೆ ಹಾಗೂ ತರಬೇತುದಾರರಿಗೆ ಇಂದು ಸಿಎಂ ಸಿದ್ದರಾಮಯ್ಯ ಸನ್ಮಾನಿಸಿ, ನಗದು ಪುರಸ್ಕಾರ ಪ್ರದಾನ ಮಾಡಿದ್ದಾರೆ.

ಏಷ್ಯನ್ ಗೇಮ್ಸ್ ನಲ್ಲಿ ರಾಜ್ಯದ ಒಟ್ಟು 8 ಕ್ರೀಡಾಪಟುಗಳು ಪದಕ ಗೆದ್ದಿದ್ದರು. ಅವರಿಗೆ ಇಂದು ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸನ್ಮಾನಿಸಿದರು.

ಇದೇ ವೇಳೆ ಮಾತನಾಡಿದ ಅವರು ಕ್ರೀಡಾಪಟುಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲದೆ ಕ್ರೀಡಾಪಟುಗಳಿಗೆ ಪೊಲೀಸ್‌ ಮತ್ತು ಅರಣ್ಯ ಇಲಾಖೆಯ ಹೊರತಾಗಿ ಇತರ ಇಲಾಖೆಗಳಲ್ಲೂ ಶೇ.2ರಷ್ಟು ಮೀಸಲಾತಿ ನೀಡುವ ಕುರಿತು ಪರಿಶೀಲನೆ ನಡೆಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.//////