ಲೋಕಾಯುಕ್ತ ಬಲೆಗೆ ಬಿದ್ದ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ

ಬೆಳಗಾವಿ: ವಾಣಿಜ್ಯ ತೆರಿಗೆ ಇಲಾಖೆ ಬೆಳಗಾವಿ ವಿಭಾಗದ ಜಂಟಿ ಆಯುಕ್ತೆ ದ್ರಾಕ್ಷಾಯಿಣಿ ಚೌಶೆಟ್ಟಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದು, ಕಚೇರಿಯಲ್ಲೇ ಇಪ್ಪತ್ತೈದು ಸಾವಿರ ಹಣ ಪಡೆಯುವಾಗ ವಾಣಿಜ್ಯ ತೆರಿಗೆ ಇಲಾಖೆ ಬೆಳಗಾವಿ ವಿಭಾಗದ ಜಂಟಿ ಆಯುಕ್ತೆ ದ್ರಾಕ್ಷಾಯಿಣಿ ಚೌಶೆಟ್ಟಿ ಅವರನ್ನು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ.
ಜಿಎಸ್‌ಟಿ ವಿಚಾರವಾಗಿ ವ್ಯಾಜ್ಯ ಬಗೆ ಹರಿಸಿಕೊಡಲು ವಿಕಾಸ್ ಕೋಕಣೆ ಎಂಬುವವರಿಂದ 25 ಸಾವಿರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಕುರಿತು ಲೋಕಾಯುಕ್ತ ಠಾಣೆಯಲ್ಲಿ ವಿಕಾಸ್ ಕೋಕಣೆ ದೂರು ನೀಡಿದ್ದರು. ಲೋಕಾಯುಕ್ತ ಅಧಿಕಾರಿಗಳಿಂದ ವಿಚಾರಣೆ ಮುಂದುವರೆದಿದ್ದು, ಇನ್ನಷ್ಟು ಮಾಹಿತಿ ನೀರಿಕ್ಷಿಸಲಾಗಿದೆ./////