ರಾಜ್ಯಾದ್ಯಂತ 4 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆ

ಬೆಂಗಳೂರು: ರಾಜ್ಯಾದ್ಯಂತ 4 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಬೆಂಗಳೂರಿನಲ್ಲಿ ಇಂದು ಕೂಡ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ ಸೇರಿ ರಾಜ್ಯದ 6 ಜಿಲ್ಲೆಗಳಿಗೆ ಎರಡು ದಿನ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಹಲವೆಡೆ ವರುಣರಾಯನ ದರ್ಶನವಾಗಿದೆ. ಕೆಲವೆಡೆ ಅವಘಡಗಳು ಕೂಡ ಸಂಭವಿಸಿವೆ.//////