Belagavi News In Kannada | News Belgaum

ಮುರುಘಾ ಶರಣರಿಗೆ ಜಾಮೀನು; ಹೈಕೋರ್ಟ್ ಆದೇಶ

ಬೆಂಗಳೂರು: ಪೋಕ್ಸೋ ಕಾಯ್ದೆಯಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಜಾಮೀನು ನೀಡಿ ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ.

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಚಿತ್ರದುರ್ಗದ ಮುರುಘಾ ಶರಣರ ವಿರುದ್ಧದ ಪೋಕ್ಸೋ‌ ಪ್ರಕರಣ ದಾಖಲಾಗಿತ್ತು. ಒಡನಾಡಿ ಸಂಸ್ಥೆ ಇಬ್ಬರು ಅಪ್ರಾಪ್ತ ಬಾಲಕಿಯರ ಪರ ಪ್ರಕರಣ ದಾಖಲಿಸಿತ್ತು. ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಮೈಸೂರಿನಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯದ ಪ್ರಕರಣವನ್ನ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಪ್ರತ್ಯೇಕ ಎರಡು ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದರು. ಇದಾದ ಮತ್ತೆ ನಾಲ್ಕು ಅಪ್ರಾಪ್ತ ಬಾಲಕಿಯರು ಮುರುಘಾ ಶರಣರ ವಿರುದ್ಧ ಎರಡನೇ ಕೇಸ್ ದಾಖಲು ಮಾಡಿದ್ದರು. ಅಪ್ರಾಪ್ತ ಬಾಲಕಿಯರ ಪರ ಅವರ ಪಾಲಕರು ಪ್ರಕರಣ ದಾಖಲಿಸಿದ್ದಾರೆ.

ಈ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರು ಜಾಮೀನಿಗಾಗಿ ಮೊದಲು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಮೆಟ್ಟಿಲೇರಿದ್ದರು. ಆದರೆ ಜಿಲ್ಲಾ ಕೋರ್ಟ್ ಜಾಮೀನು ನೀಡಲು ನಿರಾಕರಿಸಿತ್ತು. ಇದೀಗ ಹೈಕೋರ್ಟ್‌ನಲ್ಲಿ ಮುರುಘಾ ಶ್ರೀ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಪರ, ವಿರೋಧ ವಕೀಲರಿಂದ ವಾದ ಪ್ರತಿವಾದ ಆಲಿಸಿರುವ ಹೈಕೋರ್ಟ್ ಜಾಮೀನಿನ ಆದೇಶವನ್ನು ಕಾಯ್ದಿರಿಸಿತ್ತು.//////