ಕಾಂಗ್ರೆಸ್ ವಿರುದ್ಧ ಪೋಸ್ಟರ್ ಅಂಟಿಸಿದ್ದ ಐವರು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲು

ಚಿಕ್ಕಮಗಳೂರು: ಕಾಂಗ್ರೆಸ್ ವಿರುದ್ಧ ಪೋಸ್ಟರ್ ಅಂಟಿಸಿದ್ದ 5 ಜನ ಬಿಜೆಪಿ ಕಾರ್ಯಕರ್ತರ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಾಂಗ್ರೆಸ್ ಗ್ಯಾರಂಟಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಯತೀಂದ್ರ ಮತ್ತು ಕೆಜೆ ಜಾರ್ಜ್ ವಿರುದ್ಧ ವ್ಯಂಗ್ಯ ಪೋಸ್ಟರ್ ಅಂಟಿಸಿದ್ದ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ, ಶಶಿ ಅಲ್ದೂರು, ಸೇರಿದಂತೆ ಐವರ ವಿರುದ್ಧ ಎಫ್ಐಆರ್ ಹಾಕಲಾಗಿದೆ. ತಾಲೂಕು ಕಚೇರಿ, KEB ಕಚೇರಿ ಸೇರಿದಂತೆ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಪೋಸ್ಟರ್ ಅಂಟಿಸಿದ್ದರು.//////