ಭಾರತ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ನಾಳೆ ವಿಶ್ವಕಪ್ ಹಣಾಹಣಿ ನಡೆಯಲಿದೆ. ಅಹ್ಮದಾಬಾದ್ನ ಮೊಟೆರಾ ಸ್ಟೇಡಿಯಂನಲ್ಲಿ ಭಾನುವಾರ ಜರುಗಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಜಯ ಗಳಿಸುವ ಮೂಲಕ ಮತ್ತೊಮ್ಮೆ ಟೀಂ ಇಂಡಿಯಾ ವಿಶ್ವಕಪ್ ಗೆಲ್ಲಲಿ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಶುಭ ಹಾರೈಸಿದ್ದಾರೆ.
ಈ ಭಾರಿ ನಡೆಯುವ ವಿಶ್ವಕಪ್ 2023 ಫೈನಲ್ ಕುರಿತು ಮಾತನಾಡಿದ ಅವರು, ಭಾರತ ತಂಡವು ವಿಶ್ವ ಕಪ್ ಕ್ರಿಕೆಟ್ನ ಸೆಮಿ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ಸೋಲಿಸಿ ಫೈನಲ್ ತಲುಪಿದೆ. ಇದಕ್ಕಾಗಿ ತಂಡದ ಎಲ್ಲ ಸದಸ್ಯರಿಗೆ ಅಬಿನಂದನೆ. ಮುಖ್ಯವಾಗಿ ಭಾರತ ತಂಡವು ವಿಶ್ವಕಪ್ ಗೆಲ್ಲಲಿ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಶುಭ ಹಾರೈಸಿದ್ದಾರೆ.//////c