Belagavi News In Kannada | News Belgaum

ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯೆಲ್ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ ರಜನೀಶ್ ಗೋಯೆಲ್ ನೇಮಕಗೊಂಡಿದ್ದಾರೆ..

 

ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನವೆಂಬರ್‌ ತಿಂಗಳ ಅಂತ್ಯಕ್ಕೆ ಹಾಲಿ ಮುಖ್ಯ ಕಾರ್ಯದರ್ಶಿ ವಂದಿತ ಶರ್ಮಾ ಅವರ ಅಧಿಕಾರ ಅವಧಿ ಮುಕ್ತಾಯಗೊಳ್ಳಲಿದೆ. ನಂತರ ತೆರವಾಗುವ ಸ್ಥಾನಕ್ಕೆ ಮುಖ್ಯ ಕಾರ್ಯದರ್ಶಿ ಆಗಿ ರಜನೀಶ್ ಗೋಯೆಲ್ ಅವರನ್ನು ನೇಮಕ ಮಾಡಲಾಗಿದೆ..

 

ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದ 5-6 ಹೆಸರುಗಳ ಪಟ್ಟಿಯಲ್ಲಿ ಸೀನಿಯಾರಿಟಿ ಪ್ರಕಾರ ಹಿರಿಯ ಐಎಎಸ್ ಅಧಿಕಾರಿ ರಜನೀಶ್‌ ಗೋಯೆಲ್ ಅವರನ್ನು ಸಿಎಸ್‌ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಹಾಲಿ ಕಾರ್ಯರ್ಶಿಗಳು ತೆರವಾದ ನಂತರ ಅಧಿಕಾರ ಸ್ವೀಕರಿಸಲಿದ್ದಾರೆ..///