Belagavi News In Kannada | News Belgaum

ಭಾರತೀಯ ಸಂವಿಧಾನ ಜಗತ್ತಿನಲ್ಲೇ ಅತ್ಯಂತ ದೊಡ್ಡ ಸಂವಿಧಾನ

ಬೆಳಗಾವಿ : ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ಸಂವಿಧಾನ ದಿನಾಚರಣೆ ಆಚರಿಸಲಾಯಿತು.

ಬೆಳಗಾವಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಎಲ್.ವಿಜಯಲಕ್ಷ್ಮೀದೇವಿ ಸಭೆಯನ್ನುದ್ದೇಶಿಸಿ ಮಾತನಾಡಿ, ಸಂವಿಧಾನ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿದರು..

ಸಂವಿಧಾನ ದಿನವನ್ನು ಭಾರತದಲ್ಲಿ ಸಂವಿಧಾನ ದಿವಸ್ ಎಂದೂ ಕರೆಯಲಾಗುತ್ತದೆ, ನಮ್ಮ ಸಂವಿಧಾನವನ್ನು ನವೆಂಬರ್ 26, 1949 ರಂದು ಅಂಗೀಕರಿಸಲಾಯಿತು, ಇದು ನಮ್ಮ ದೇಶದ ವೈವಿಧ್ಯತೆಯನ್ನು ಪ್ರತಿಬಿಂಬಿಸುತ್ತದೆ, ವಿಶ್ವದ ಅತ್ಯಂತ ದೊಡ್ಡ ಸಂವಿಧಾನವಾಗಿದೆ, ಇದು ಪರಿವರ್ತಕ ಸಂವಿಧಾನವಾಗಿದೆ ಎಂದು ಅವರು ಹೇಳಿದರು..

 

ಸಮಾರಂಭದ ಅಧ್ಯಕ್ಷ ತೆ ವಹಿಸಿ ಮಾತನಾಡಿದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಎಂ.ಆರ್ ಕುಲಕರ್ಣಿ, ಸಂವಿಧಾನವು ವ್ಯಕ್ತಿಗೆ ಬದುಕಲು ಮೂಲಭೂತ ಅವಶ್ಯಕತೆಯಾಗಿದೆ ಎಂದು ವಿವರಿಸಿದರು..

ನ್ಯಾಯವಾದಿ ಹಾಗೂ ಕರ್ನಾಟಕ ಕಾನೂನು ಸಂಸ್ಥೆಯ ಕಾರ್ಯದರ್ಶಿ ವಿವೇಕ ಕುಲಕರ್ಣಿ, ಪ್ರಾಚಾರ್ಯ ಡಾ.ಎ.ಎಚ್.ಹವಾಲ್ದಾರ್, ಪ್ರೊ.ಚೇತನಕುಮಾರ್, ಐಕ್ಯೂಎಸಿ ಸಂಯೋಜಕಿ ಡಾ.ಸಮೀನಾ ನಹಿದ್ ಬೇಗ್ ಸೇರಿದಂತೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.