Belagavi News In Kannada | News Belgaum

“ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ”ಯಡಿ ಅರ್ಜಿ ಆಹ್ವಾನ

ಬೆಳಗಾವಿ, ನ.29 : 2023-24ನೇ ಸಾಲಿನ ಕೇಂದ್ರ ಪುರಸ್ಕøತ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ(PಒಏSಙ) ಪ್ರತಿ ಹನಿಗೆ ಅಧಿಕ ಬೆಳೆ (ಸೂಕ್ಷ್ಮ ನೀರಾವರಿ) ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸುವ ಎಲ್ಲಾ ವರ್ಗದ ರೈತರಿಗೆ ಗರಿಷ್ಠ 5 ಹೆಕ್ಟೇರ್ ಪ್ರದೇಶದವರೆಗೆ ಸಹಾಯಧನ ನೀಡಲಾಗುವುದು ಹಾಗೂ ತರಕಾರಿ ಮತ್ತು ಹೂ ಬೆಳೆಗಳಿಗೆ ಗರಿಷ್ಠ 2 ಹೆಕ್ಟೇರ್ ಪ್ರದೇಶಕ್ಕೆ ಸಹಾಯಧನ ನೀಡಲಾಗುವುದು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ಗರಿಷ್ಠ 2 ಹೆಕ್ಟೇರ್ ವರೆಗೆ ಶೇ. 90 ರಷ್ಟು ಸಹಾಯಧನ ನೀಡಲು ಅವಕಾಶವಿರುತ್ತದೆ ಹಾಗೂ ಇತರೆ ವರ್ಗದ ರೈತರಿಗೆ ಗರಿಷ್ಠ 2 ಹೆಕ್ಟೇರ್ ವರೆಗೆ ಶೇ. 75 ರಷ್ಟು ಸಹಾಯಧನ ನೀಡಲು ಅವಕಾಶವಿರುತ್ತದೆ.

2 ಹೆಕ್ಟೇರ್ ಮೇಲ್ಪಟ್ಟು 5 ಹೆಕ್ಟೇರ್ ವರೆಗೂ ಶೇ. 45 ರಷ್ಟು ಸಹಾಯಧನ ನೀಡಲು ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆದ್ದರಿಂದ ಅರ್ಹ ರೈತರು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ತೋಟಗಾರಿಕೆ ಕಛೇರಿಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಎಂದು ಖಾನಾಪೂರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿ.ಪಂ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.