Belagavi News In Kannada | News Belgaum

ವಿದೇಶಿ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

 

ಬೆಳಗಾವಿ: ಡಿಸೆಂಬರ್ 01 :: 2023-24ನೇ ಸಾಲಿಗೆ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿದೇಶಿ ವಿದ್ಯಾರ್ಥಿ ವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ ಅರ್ಹ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ವಿದ್ಯಾರ್ಥಿಗಳು ಡಿಸೆಂಬರ್ 15, 2023 ರೊಳಗಾಗಿ https://sevasindhu.karanataka.gov.in/Sevasindhu/DepartmentServices   ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.