Belagavi News In Kannada | News Belgaum

ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಳಗಾವಿಯ ಸುವರ್ಣ ಸೌಧದ ಬಳಿ ಅವರು ಮಾತನಾಡಿದರು. ಅಲ್ಪಸಂಖ್ಯಾತರಿಗೆ 4 ರಿಂದ 5 ಸಾವಿರ ಕೋಟಿ ರೂ.ಗಳನ್ನು ಬಜೆಟ್​ನಲ್ಲಿ ಮೀಸಲಿಡುವುದಾಗಿ ಸಿಎಂ ನೀಡಿದ್ದ ಹೇಳಿಕೆಯನ್ನು ಬಿಜೆಪಿ ಓಲೈಕೆ ರಾಜಕಾರಣ ಎಂದು ಕರೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅದರಲ್ಲಿ ತಪ್ಪೇನಿದೆ ಎಂದರು. ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ ಎಂದರು.
ಮೀಸಲು ನೀಡಿದ್ದರಲ್ಲಿ ಏನು ತಪ್ಪಿದೆ? ಮುಸ್ಲಿಮರೂ ಸೇರಿ ಎಲ್ಲರಿಗೂ ರಕ್ಷಣೆ ಕೊಡುತ್ತೇವೆ ಎಂದಿದ್ದೇನೆ. ಅದನ್ನು ಬಿಟ್ಟು ಬರೆದರೆ ಏನು ಮಾಡುವುದು?. ಅದು ತುಷ್ಟೀಕರಣನಾ?. ಅದಕ್ಕೆ ಉಪ್ಪು ಖಾರ ಹಾಕಿ ಹೇಳುತ್ತಿದ್ದಾರೆ ಅಷ್ಟೇ. ಮುಸ್ಲಿಮರೂ ಸೇರಿ ಎಲ್ಲರಿಗೂ ರಕ್ಷಣೆ ಕೊಡುತ್ತೇನೆ ಎಂದು ಹೇಳಿದ್ದೇನೆ ಅಷ್ಟೇ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು .//////