Belagavi News In Kannada | News Belgaum

ರಾಜ್ಯದ 25 ಸಾವಿರ ಸ್ಮಾರಕಗಳ ರಕ್ಷಣೆ ಕ್ರಮ ಖಾಸಗಿ ಸಹಭಾಗಿತ್ವದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ – ಸಚಿವ ಹೆಚ್.ಕೆ.ಪಾಟೀಲ್

ಸುವರ್ಣಸೌಧ ಬೆಳಗಾವಿ

ರಾಜ್ಯದ 25 ಸಾವಿರ ಸ್ಮಾರಕಗಳ ರಕ್ಷಣೆ ಕ್ರಮ

ಖಾಸಗಿ ಸಹಭಾಗಿತ್ವದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ
– ಸಚಿವ ಹೆಚ್.ಕೆ.ಪಾಟೀಲ್

ಸುವರ್ಣಸೌಧ ಬೆಳಗಾವಿ.ಡಿ.5: ರಾಜ್ಯದಲ್ಲಿ 25 ಸಾವಿರಕ್ಕೂ ಹೆಚ್ಚಿನ ಸ್ಮಾರಕಗಳ ರಕ್ಷಣೆಗೆ ಸರ್ಕಾರ ಕ್ರಮ ವಹಿಸಿದೆ. ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯದಲ್ಲಿನ ಪ್ರವಾಸೋದ್ಯಮವನ್ನು ಅಭಿವೃದ್ಧಿ ಮಾಡಲು ಯೋಜನೆ ರೂಪಿಸುವುದಾಗಿ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಹೇಳಿದರು.
ಬೆಳಗಾವಿಯ ಸುವರ್ಣ ಸೌಧದಲ್ಲಿ ಮಂಗಳವಾರದ ವಿಧಾನ ಸಭಾ ಅಧಿವೇಶನದ ಪ್ರಶ್ನೋತ್ತರ  ವೇಳೆಯಲ್ಲಿ ಶಾಸಕರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು.
ಸ್ಮಾರಕಗಳ ದತ್ತು ತೆಗೆದುಕೊಳ್ಳವ ಯೋಜನೆ ಜಾರಿಯಲ್ಲಿದೆ. ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಲಾಗುವುದು. ಕರ್ನಾಟಕ ಪ್ರವಾಸೋದ್ಯಮ ನೀತಿ 2020-26 ಅಡಿ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಸಾಹಸ, ಕೃಷಿ, ಮನರಂಜನಾ, ಕ್ಯಾರವಾನ್, ಸಾಂಸ್ಕೃತಿಕ ಪ್ರವಾಸೋದ್ಯಮ, ಸಾಂಸ್ಕೃತಿಕ ಗ್ರಾಮ, ಪರಿಸರ, ಪಾರಂಪರಿಕ, ಹೋಂಸ್ಟೇ, ಹೋಟೆಲ್, ಹೌಸ್ ಬೋಟ್, ವಸ್ತು ಸಂಗ್ರಹಾಲಯ, ಗ್ಯಾಲರಿ, ರೋಪ್ ವೇ, ಧ್ವನಿ ಮತ್ತು ಬೆಳಕು, ಥೀಪ್ ಪಾರ್ಕ್ ಸೇರಿದಂತೆ 26 ರೀತಿಯ ಪ್ರವಾಸಿ ಉತ್ಪನ್ನಗಳನ್ನು ಅಭಿವೃದ್ಧಿ ಪಡಿಸಲು ಮುಂದೆ ಬರುವ ಖಾಸಗೀ ಬಂಡವಾಳ ಹೂಡಿಕೆದಾರರನ್ನು ಸೆಳೆಯಲು ಸಹಾಯಧನ ಪ್ರೋತ್ಸಾಹಕಗಳು ಮತ್ತು ರಿಯಾಯಿತಿಗಳನ್ನು ನೀಡಲಾಗಿದೆ ಎಂದರು.

ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, 2012-13 ರಲ್ಲಿ ಮೂಡುಬಿದರೆ ಕ್ಷೇತ್ರದ ಸಸಿಹಿತ್ಲು ಕಡಲ ತೀರದಲ್ಲಿ ಅಂತರಾಷ್ಟಿçÃಯ ಸರ್ಫಿಂಗ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಇದಕ್ಕೆ ಉತ್ತಮ ಪ್ರತಿಕ್ರಿಯೆ ಕಂಡುಬAದಿದೆ. ಸರ್ಫಿಂಗ್ ನಂತಹ ಸಾಹಸ ಕ್ರೀಡೆಯ ಉತ್ತೇಜನಕ್ಕೆ ಸರ್ಕಾರ ಮುಂದಾಗಬೇಕು. ಸಸಿಹಿತ್ಲು ಪ್ರದೇಶದಲ್ಲಿನ ಕುಡಿಯುವ ನೀರು ಹಾಗೂ ಬೀದಿ ದೀಪ ಅಳವಡಿಸುವ ಕಾಮಗಾರಿಯನ್ನು ಕೂಡಲೇ ಪ್ರಾರಂಭಿಸುವAತೆ ಒತ್ತಾಯಿಸಿದರು.
ಜೈನ ಕಾಶಿ ಮೂಡಬಿದರೆಯ ಯಾತ್ರಿ ನಿವಾಸಕ್ಕೆ 15 ಹೆಚ್ಚುವರಿ ಕೊಠಿಗಳ ನಿರ್ಮಾಣ ಕಾಮಗಾರಿಗೆ ರೂ.70 ಲಕ್ಷ ಮಂಜೂರಾಗಿದ್ದು, ಸರ್ಕಾರದಿಂದ ರೂ.52.50 ಲಕ್ಷ ಬಿಡುಗಡೆ ಮಾಡಲಾಗಿದೆ. ಕಾಮಗಾರಿಯ ಪೂರ್ಣಗೊಂಡಿದೆ. ಸಸಿಹಿತ್ಲು ಅಭಿವೃದ್ದಿ ಕಾಮಗಾರಿಗೆ ರೂ.25 ಲಕ್ಷ ಮೀಸಲಿರಿಸಿದ್ದು, ಆದ್ಯತೆಯ ಮೇರಗೆ ಶೀಘ್ರವೇ ಕೈಗೆತ್ತಿಕೊಂಡು ಕಾಮಗಾರಿ ಆರಂಭಿಸಲಾಗುವುದು ಎಂದು ಸಚಿವ ಹೆಚ್.ಕೆ.ಪಾಟೀಲ್ ಉತ್ತರಿಸಿದರು.
ಮೂಡಬಿದರೆ ಕ್ಷೇತ್ರದ ಕಲಕಕೆರೆ ನಿಸರ್ಗಧಾಮ ಮತ್ತು ರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮಕ್ಕೆ ರೂ. 1 ಕೋಟಿ, ಶಿರ್ತಾಡಿ ಗ್ರಾಮದ ಪ್ರವಾಸಿ ತಾಣ ಕೊಣಜಿಕಲ್ಲು ಗುಡ್ಡವನ್ನು ಅಭಿವೃದ್ಧಿ ರೂ.50 ಲಕ್ಷ ಹಾಗೂ ಮೂಡಬಿದರೆಯ ಸಾವಿರ ಕಂಬದ ಬಸದಿ ಹಾಗೂ ಇತರೆ ಜೈನ ಮಂದಿರಗಳ ಅಭಿವೃದ್ದಿಗೆ ರೂ.50 ಲಕ್ಷ ಬಿಡುಗಡೆ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆಗಳು ಸಲ್ಲಿಕೆಯಾಗಿವೆ ಎಂದು ತಿಳಿಸಿದರು.
ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸಕಲೇಶಪುರ ತಾಲ್ಲೂಕಿನ ಮರಗುಂದ, ಮಂಜರಾಬಾದ್ ಕೋಟೆ, ಮೂಕನಮನೆ ಜಲಪಾತ, ಅಬ್ಬಿ ಜಲಪಾತ, ಬಿಸಿಲೆ ಘಾಟ್, ಪಾಂಡವರ ಬೆಟ್ಟ, ಮೂರ್ಕಣ್ ಬೆಟ್ಟ, ಜೇನುಕಲ್ಲು ಬೆಟ್ಟ, ಗುಡ್ಡ ಬಸವಣ್ಣ, ಪಾಟ್ಲೆಬೆಟ್ಟ ಪ್ರದೇಶಗಳನ್ನು ಪ್ರವಾಸಿ ತಾಣಗಳಾಗಿ ಅಭಿವೃದ್ಧಿ ಗುರಿತಿಸಲಾಗಿದೆ ಎಂದು ತಿಳಿಸಿದರು.
ಕೇಬಲ್ ಕಾರ್ ಪ್ರಾರಂಭಕ್ಕೆ ಯೋಜನೆ
ಮಳವಳ್ಳಿ ಶಾಸಕ ಪಿ.ಎಂ.ನರೇದ್ರಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಸಚಿವ ಹೆಚ್.ಕೆ.ಪಾಟೀಲ್ ಯಲ್ಲಮ್ಮನಗುಡ್ಡ, ಮಧುಗಿರಿ, ಅಂಜನಾದ್ರಿ, ನಂದಿಬೆಟ್ಟ ಹಾಗೂ ಗಗನ ಚುಕ್ಕಿಯಲ್ಲಿ ಕೇಬಲ್ ಕಾರ್ ಪ್ರಾರಂಭಿಸುವುದಕ್ಕೆ ಪರಿಶೀಲನೆ ಕಾರ್ಯ ನಡೆಸಲಾಗುತ್ತಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಸ್ಪಷ್ಟ ಪಡಿಸಿದರು.
2023-24ನೇ ಸಾಲಿನ ಆಯವ್ಯಯದಲ್ಲಿ ಪ್ರವಾಸೋದ್ಯಮ ಇಲಾಖೆಗೆ ಸರ್ಕಾರದಿಂದ ರೂ.339.54 ಕೋಟಿ ಮೀಸಲಿರಿಸಲಾಗಿದೆ. ಈ ಪೈಕಿ ರೂ.90 ಕೋಟಿಯನ್ನು ಬಂಡವಾಳ ವೆಚ್ಚಗಳ ಲೆಕ್ಕಶೀರ್ಷಿಕೆಗಳಡಿ ಈಗಾಗಲೇ ಒದಗಿಸಲಾಗಿದೆ ಎಂದರು.
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಜಲ ಸಾಹಸ ಕ್ರೀಡಗಳನ್ನು ಕಲಿಯಲು ರಾಜ್ಯದಿಂದ ಹೊರ ರಾಷ್ಟçಗಳಿಗೆ ಅನೇಕರು ತೆರಳುತ್ತಾರೆ. ರಾಜ್ಯದಲ್ಲಿ ಸುಮಾರು 300 ಕಿ.ಮೀ ಉದ್ದದ ಕರವಾಳಿ ತೀರವಿದೆ. ಇಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಜಲ ಸಾಹಸ ಕ್ರೀಡೆಗಳ ಪ್ರವಾಸೋದ್ಯಮಕ್ಕೆ ಸರ್ಕಾರ ಮುಂದಾಗಬೇಕು ಎಂದು ಕೋರಿದರು.
ರಾಜ್ಯದ ಕರಾವಳಿ ಜಿಲ್ಲೆಗಳು ಕಡಲು ಕಿನಾರೆ, ಧಾರ್ಮಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ನಾಡಿಗೆ ಹೆಸರಾಗಿವೆ. ಈ ಮೂರು ಅಂಶಗಳ ಮುಂದೆ ಇಟ್ಟುಕೊಂಡು, ಕರಾವಳಿ ಅಭಿವೃದ್ದಿ ಮಂಡಳಿಯಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿ ಯೋಜನೆ ರೂಪಿಸುವಂತೆ ಸಭಾಧ್ಯಕ್ಷ ಯು.ಟಿ.ಖಾದರ್ ಸರ್ಕಾರಕ್ಕೆ ಸೂಚನೆ ನೀಡಿದರು.////

ನೇಕಾರರು ಹಾಗೂ ಟೈಲರಿಂಗ್ ವೃತ್ತಿಯಲ್ಲಿ ತೊಡಗಿದವರಿಗೆ ವಿಶೇಷ ಸಾಮಾಜಿಕ ಭದ್ರತಾ ಯೋಜನೆ ಜಾರಿ
– ಸಚಿವ ಸಂತೋಷ್ ಎಸ್ ಲಾಡ್


ಸುವರ್ಣಸೌಧ ಬೆಳಗಾವಿ ರಾಜ್ಯದಲ್ಲಿನ ನೇಕಾರರು ಹಾಗೂ ಟೈಲರಿಂಗ್ ಸೇರಿದಂತೆ ಅಸಂಘಟಿತ ವಲಯದ ಹಲವು ಕಾರ್ಮಿಕರಿಗೆ ವಿಶೇಷ ಸಾಮಾಜಿಕ ಭದ್ರತಾ ಯೋಜನೆಗಳನ್ನು ಜಾರಿ ಮಾಡುವುದಾಗಿ ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಭರವಸೆ ನೀಡಿದರು.
ಬೆಳಗಾವಿಯ ಸುವರ್ಣ ಸೌಧದಲ್ಲಿ ಮಂಗಳವಾರದ ವಿಧಾನ ಸಭಾ ಅಧಿವೇಶನದ ಪ್ರಶ್ನೋತ್ತರ  ವೇಳೆಯಲ್ಲಿ ತೆರದಾಳ ಶಾಸಕ ಸಿದ್ದು ಸವದಿ ಹಾಗೂ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಪ್ರತಿ ನಿರ್ಮಾಣ ಕಾಮಗಾರಿಗೆ ಶೇ.1 ರಷ್ಟು ಸೆಸ್ ವಿಧಿಸಲಾಗುತ್ತಿದೆ. ಇದರ ಅಡಿ ಸಂಗ್ರಹವಾದ ಹಣದಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು, ಹಲವು ಸಾಮಾಜಿಕ ಭದ್ರತಾ ಯೋಜನೆಗಳನ್ನು ಕಟ್ಟಡ ಕಾರ್ಮಿಕರಿಗೆ ಜಾರಿ ಮಾಡಿದೆ. ಈ ಯೋಜನೆಗಳನ್ನು ನೇಕಾರರು ಹಾಗೂ ಟೈಲರಿಂಗ್ ಸೇರಿದಂತೆ ಇತರೆ ಯಾವುದೇ ಅಸಂಘಟಿತ ಕಾರ್ಮಿಕರಿಗೆ ವಿಸ್ತರಿಸಲು ಬರುವುದಿಲ್ಲ. ರಾಜ್ಯದಲ್ಲಿ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಇದ್ದು, ಮಂಡಳಿಯು ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ್ಸ್, ಮೆಕ್ಯಾನಿಕ್, ಅಗಸರು, ಅಕ್ಕಸಾಲಿಗರು, ಕಮ್ಮಾರು, ಕಂಬಾರರು, ಕ್ಷೌರಿಕರು ಹಾಗೂ ಭಟ್ಟಿ ಕಾರ್ಮಿಕರು ಸೇರಿದ 11 ಅಸಂಘಟಿತ ಕಾರ್ಮಿಕರಿಗೆ ಉಚಿತವಾಗಿ ನೊಂದಣಿ ಮಾಡಿಕೊಂಡು, ಗುರುತಿನ ಚೀಟಿ ನೀಡುತ್ತಿದೆ. ಇ-ಶ್ರಮ್ ಪೋರ್ಟ್ಲ್ ನಲ್ಲಿಯೂ 379 ವಿಧದ ಅಸಂಘಟಿತ ಕಾರ್ಮಿಕರನ್ನು ಉಚಿತವಾಗಿ ನೊಂದಣಿ ಮಾಡಲಾಗುತ್ತಿದೆ.
ರಾಜ್ಯದ ಗಾರ್ಮೆಂಟ್ ಸಂಸ್ಥೆಗಳಲ್ಲಿ ಟೈಲರಿಂಗ್ ವೃತ್ತಿ ಮಾಡುತ್ತಿರುವವರಿಗೆ ಉದ್ಯೋಗಿಯ ಸಂಬಳದ ನಿರ್ದಿಷ್ಟ ಶೇಕಡವಾರು ಮೊತ್ತ ಹಾಗೂ ಸಂಸ್ಥೆಯ ಅಷ್ಟೇ ಮೊತ್ತವನ್ನು ಒಟ್ಟು ಮಾಡಿ ಭವಿಷ್ಯ ನಿಧಿಗೆ ಕೊಡುಗೆ ನೀಡುತ್ತಿದ್ದಾರೆ. ಈ ಭವಿಷ್ಯ ನಿಧಿಯನ್ನು ಉದ್ಯೋಗಿಯ ರಾಜೀನಾಮೆ, ನಿವೃತ್ತಿ, ಅನಾರೋಗ್ಯ, ಮದುವೆ, ಶಿಕ್ಷಣ, ನಿವೇಶನ ಖರೀದಿ ಮತ್ತು ಮನೆ ನಿರ್ಮಾಣ ಮುಂತಾದ ಉದ್ದೇಶಗಳಿಗೆ ಹಿಂಪಡೆಯಲು ಅವಕಾಶ ನೀಡಲಾಗಿದೆ. ಆದರೆ ಮನೆಯಲ್ಲಿ ಅಥವಾ ಸಣ್ಣ ಪುಟ್ಟ ಅಂಗಡಿಗಳಲ್ಲಿ ಟೈಲರಿಂಗ್ ವೃತ್ತಿ ಮಾಡುತ್ತಿರುವವರಿಗೆ ಭವಿಷ್ಯ ನಿಧಿಯ ಸೌಲಭ್ಯ ಇಲ್ಲ.  ರಾಜ್ಯಾದ್ಯತಂತ ಅಸಂಘಟಿತ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ 7,280,44 ಟೈಲರಿಂಗ್ ವೃತ್ತಿ ನಿರತ ಕಾರ್ಮಿಕರು ಇದ್ದಾರೆ. ಇವರಿಗೆ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ಇದೆ. ಇದು ಅಪಘಾತ ವಿಮೆಯಾಗಿದ್ದು, ಕಾರ್ಮಿಕರಿಗೆ ಸಂಕಷ್ಟದಲ್ಲಿ ನೆರವಾಗಲಿದೆ. ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯಡಿ 60 ವರ್ಷ ಪೂರೈಸಿದ ಅಸಂಘಟಿತ ಕಾರ್ಮಿಕರು ಮಾಸಿಕ ರೂ.3000ಗಳ ನಿಶ್ಚಿತ ಪಿಂಚಣಿ ಪಡೆಯಬಹುದಾಗಿದೆ. ಮುಂದಿನ ವರ್ಷದಲ್ಲಿ ರಾಜ್ಯ ಸರ್ಕಾರದಿಂದ ನೇಕಾರರು ಹಾಗೂ ಟೈಲರಿಂಗ್ ವೃತ್ತಿ ತೊಡಗಿದವರಿಗೆ ವಿಶೇಷ ಸಾಮಾಜಿಕ ಭದ್ರತಾ ಯೋಜನೆಗಳನ್ನು ಜಾರಿ ಮಾಡಲಾವುದು ಎಂದು ಪುನರುಚ್ಛರಿಸಿದರು.
ವಿವಿಧ ಕ್ಷೇತ್ರಗಳಲ್ಲಿ ಸೆಸ್ ಸಂಗ್ರಹಕ್ಕೆ ಚಿಂತನೆ
ನಿರ್ಮಾಣ ಕ್ಷೇತ್ರದ ಸೆಸ್ ಮಾದರಿಯಂತೆ ಗಾರ್ಮೆಂಟ್, ವಾಹನ ತಯಾರಿಕೆ, ಸಾರಿಗೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಶೇ.1 ರಷ್ಟು ಸೆಸ್ ಸಂಗ್ರಹಿಸಲು ಚಿಂತನೆ ನಡೆಸಲಾಗುತ್ತಿದೆ. ಈ ಸೆಸ್‌ನಿಂದ ಸಂಗ್ರಹವಾದ ಹಣದಲ್ಲಿ ಆಯಾ ಕ್ಷೇತ್ರಗಳಲ್ಲಿ ತೊಡಗಿರುವ ಕಾರ್ಮಿಕರಿಗೆ ಯೋಜನೆಗಳನ್ನು ರೂಪಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಈ ಸಂದರ್ಭದಲ್ಲಿ ತಿಳಿಸಿದರು.///

100 ಕೋಟಿ ರೂ.ವೆಚ್ಚದಲ್ಲಿ ಹೊಸ ವಾಹನಗಳ ಖರೀದಿ

ಪೊಲೀಸ್ ಇಲಾಖೆಯಲ್ಲಿ 1700ಕ್ಕೂ ಹೆಚ್ಚು ವಾಹನಗಳು ಸ್ಕಾö್ಯçಪ್‌ಗೆ ತೀರ್ಮಾನ: ಗೃಹ ಸಚಿವ ಪರಮೇಶ್ವರ


ಬೆಳಗಾವಿ ಸುವರ್ಣಸೌಧ,: ಪೊಲೀಸ್ ಇಲಾಖೆಯಲ್ಲಿ 1700ಕ್ಕೂ ಹೆಚ್ಚು ವಾಹನಗಳನ್ನು ಸ್ಕಾö್ಯçಪ್(ನಿರುಪಯುಕ್ತ)ಗೊಳಿಸಲು ತೀರ್ಮಾನಿಸಲಾಗಿದ್ದು,ಹಂತಹAತವಾಗಿ ಅವುಗಳನ್ನು ನಿರುಪಯುಕ್ತಗೊಳಿಸಲಾಗುವುದು. 100ಕೋಟಿ ರೂ.ವೆಚ್ಚದಲ್ಲಿ ಹೊಸದಾಗಿ ವಾಹನಗಳನ್ನು ಖರೀದಿಸಲು ಉದ್ದೇಶಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ತಿಳಿಸಿದರು.
ವಿಧಾನಸಭೆಯಲ್ಲಿ ಸದಸ್ಯ ಶ್ರೀನಿವಾಸ ಜಿ.ಎಚ್ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ಅಗ್ನಿಶಾಮಕ ಠಾಣೆ ಮತ್ತು ತುರ್ತು ಸೇವಾ ಇಲಾಖೆಯಲ್ಲಿ 15 ವರ್ಷಗಳ ಹಳೆಯ ವಾಹನಗಳನ್ನು ಅನುಪಯುಕ್ತಗೊಳಿಸುವ ಹಾಗೂ ಬದಲಿಗೆ ಹೊಸ ವಾಹನಗಳನ್ನು ಖರೀದಿಸಲು ಅನುಮತಿ ನೀಡುವ ಸಂಬAಧ ಸರಕಾರದ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಭೆ ಜರುಗಿದ್ದು, ಸದರಿ ಸಭೆಯಲ್ಲಿ ಅವಧಿ ಮೀರಿದ ಮತ್ತು ಸುಸ್ಥಿತಿಯಲ್ಲಿರುವ ವಾಹನಗಳನ್ನು ನಿರುಪಯುಕ್ತಗೊಳಿಸಿದಲ್ಲಿ ಇಲಾಖೆಯ ಮೂಲ ಚಟುವಟಿಕೆಗಳಿಗೆ ತೊಂದರೆಯಾಗುವುದರಿAದ ವಾಹನಗಳ ನೋಂದಣಿ ಪತ್ರವನ್ನು ನವೀಕರಿಸಲು ಕೇಂದ್ರ ಸರಕಾರದ ಅನುಮತಿ ಪಡೆಯಲು ನಿರ್ಣಯ ಕೈಗೊಳ್ಳಲಾಗಿದ್ದು,ಅನುಮತಿ ಕೋರಿ ಕೇಂದ್ರ ಸರಕಾರಕ್ಕೆ ಪತ್ರ ಬರೆಯಲಾಗಿದೆ.ಅನುಮತಿ ನಿರೀಕ್ಷಣೆಯಲ್ಲಿದ್ದೇವೆ ಎಂದರು.
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ಅಗ್ನಿಶಾಮಕ ಠಾಣಾ ಕಟ್ಟಡ ನಿರ್ಮಾಣಕ್ಕಾಗಿ ರೂ.3ಕೋಟಿ ಅನುದಾನ ನಿಗದಿಪಡಿಸಿದ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದರು.
ಮಸ್ಕಿಯಲ್ಲಿ ಅಗ್ನಿಶಾಮಕಠಾಣೆ:ಅಗ್ನಿಕರೆಗಳ ಆಧರಿಸಿ ತೀರ್ಮಾನ: ಪ್ರಸ್ತುತ ಮಸ್ಕಿ ತಾಲೂಕಿನಲ್ಲಿ ನೂತನ ಅಗ್ನಿಶಾಮಕ ಠಾಣೆಯ ಸ್ಥಾಪನೆಗೆ ಸಹಮತಿ ನೀಡುವ ಅವಶ್ಯಕತೆ ಇರುವುದಿಲ್ಲ. ಮುಂದಿನ ದಿನಗಳಲ್ಲಿ ಸಂಭವಿಸುವ ಅಗ್ನಿ ಕರೆಗಳನ್ನು ಆಧರಿಸಿ ನೂತನ ಅಗ್ನಿಶಾಮಕ ಠಾಣೆಯ ಸೃಜನೆ ಬಗ್ಗೆ ಪರಿಶೀಲಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
ವಿಧಾನಸಭೆಯಲ್ಲಿ ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ್(ಮಸ್ಕಿ) ಅವರ ಚುಕ್ಕೆಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು.
ಮಸ್ಕಿ ತಾಲೂಕಿನಲ್ಲಿ ನೂತನವಾಗಿ ಅಗ್ನಿಶಾಮಕ ಠಾಣೆ ಸ್ಥಾಪಿಸುವುದಕ್ಕೆ ಸಂಬAಧಿಸಿದ ಪ್ರಸ್ತಾವನೆಗೆ ಸಂಬAಧಿಸಿದAತೆ 2017ರಿಂದ 2022ರವರೆಗೆ ಒಟ್ಟಾರೆ 05 ವರ್ಷದ ಅವಧಿಯಲ್ಲಿ 243 ಅಗ್ನಿ ಕರೆಗಳು ಹಾಗೂ 13 ರಕ್ಷಣಾ ಕರೆಗಳಿದ್ದು, ಮಸ್ಕಿ ತಾಲೂಕಿನಲ್ಲಿ ಅಗ್ನಿ ಅವಘಡಗಳು ಸಂಭವಿಸಿದ್ದಲ್ಲಿ ಹತ್ತಿರವಿರುವ ಲಿಂಗಸೂಗುರು 30 ಕಿ.ಮೀ ಮತ್ತು ಸಿಂಧನೂರು 30 ಕಿ.ಮೀ ಅಂತರದಲ್ಲಿರುವ  ಅಗ್ನಿಶಾಮಕ ಠಾಣೆಯಿಂದ ಬೆಂಕಿ ನಂದಿಸಲಾಗುತ್ತಿದೆ ಎಂದರು.///

ನಾಡಪ್ರಭು ಕೆಂಪೇಗೌಡ ಬಡಾವಣೆಗೆ ವರ್ಷದೊಳಗೆ ಮೂಲಸೌಕರ್ಯ:ಸಚಿವ ರಾಮಲಿಂಗಾರೆಡ್ಡಿ


ಬೆಳಗಾವಿ ಸುವರ್ಣಸೌಧ,: ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಒಂದು ವರ್ಷದೊಳಗೆ ಅಗತ್ಯ ಮೂಲಸೌಕರ್ಯಗಳನ್ನು ಸರಕಾರ ಕಲ್ಪಿಸಿಕೊಡಲಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದರು.
ವಿಧಾನಸಭೆಯಲ್ಲಿ ಸದಸ್ಯ ಸುರೇಶಕುಮಾರ್ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉಪಮುಖ್ಯಮಂತ್ರಿಗಳ ಪರವಾಗಿ ಉತ್ತರ ನೀಡಿದ ಅವರು ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೂಲಸೌಕರ್ಯಗಳ ಕೊರತೆ ಇರುವುದರಿಂದ ಜನರು ಸಮಸ್ಯೆ ಅನುಭವಿಸುತ್ತಿರುವುದು ಗಮನದಲ್ಲಿದ್ದು,ಅದನ್ನು ವರ್ಷದೊಳಗೆ ಪರಿಹರಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಕಂದಾಯ ನ್ಯಾಯಾಲಯಗಳಲ್ಲಿ ಪ್ರಕರಣಗಳು ಬಾಕಿ, ರೆವಿನ್ಯೂ ನಿವೇಶನಗಳನ್ನು ರಚಿಸಿ ಮಾರಾಟ ಮಾಡಿರುವುದು, ಹೈಕೋರ್ಟ್ನಲ್ಲಿ ಪ್ರಕರಣಗಳು ದಾಖಲಾಗಿರುವುದರಿಂದ ಬಡಾವಣೆ ನಿರ್ಮಾಣಕ್ಕಾಗಿ 1400 ಎಕರೆ ಭೂಸ್ವಾಧೀನ ಮಾಡುವುದಕ್ಕೆ ಸರಕಾರಕ್ಕೆ ಸಮಸ್ಯೆಯಾಗಿದೆ ಎಂದು ವಿವರಿಸಿದ ಅವರು ನ್ಯಾಯಾಲಯಗಳಲ್ಲಿ ಬಾಕಿಇರುವ ರಿಟ್ ಅರ್ಜಿಗಳನ್ನು ಆದ್ಯತೆ ಮೇರೆಗೆ ಇತ್ಯರ್ಥಪಡಿಸಲು ಕ್ರಮವಹಿಸಲಾಗುತ್ತಿದ್ದು,ಇತ್ಯರ್ಥಪಡಿಸಿದ ನಂತರ ಭೂಸ್ವಾಧೀನತೆಯನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಹAಚಿಕೆದಾರರು ತಮ್ಮ ನಿವೇಶನದಲ್ಲಿ ಮನೆ ಕಟ್ಟಿಕೊಳ್ಳಲು ಆನ್‌ಲೈನ್ ಅನುಮೋದನೆ ಪಡೆಯಲು ಸೆಂಟರ್ ಫಾರ್ ಇ-ಗವರ್ನನ್ಸ್ ರವರು ಅಗತ್ಯ ತಾಂತ್ರಿಕ ಸೌಕರ್ಯಗಳನ್ನು ಅಭಿವೃದ್ಧಿಪಡಿಸುತ್ತಿದ್ದು, ಆರು ತಿಂಗಳ ಕಾಲಾವಧಿಯಲ್ಲಿ ಈ ವ್ಯವಸ್ಥೆಯನ್ನು ಜಾರಿಗೊಳಿಸಲು ಯೋಜಿಸಲಾಗಿದೆ ಎಂದರು.

ಬೆಳಗಾವಿ ಸದನದಲ್ಲಿ ಬಾರ್‌ಲೈಸನ್ಸ್ ಕುರಿತು ಕಾವೇರಿದ ಚರ್ಚೆ ಸಿಎಲ್-7 ಸನ್ನದು ನೀಡಿಕೆ;ಲಾಡ್ಜಿಂಗ್ ವಿನ್ಯಾಸ,ಪಾರ್ಕಿಂಗ್ ಅಂಶ ಸೇರ್ಪಡೆಗೆ ಕ್ರಮ: ಸಚಿವ ತಿಮ್ಮಾಪುರ

ಬೆಳಗಾವಿ ಸುವರ್ಣಸೌಧ, : ಸದದಲ್ಲಿ ಬಾರ್‌ಲೈಸೆನ್ಸ್ ನೀಡಿಕೆ ಸಂಬಧಿಸಿದತೆ ಕಾವೇರಿದ ಚರ್ಚೆ ಮಂಗಳವಾರ ವಿಧಾನನಸಭೆಯಲ್ಲಿ ನಡೆಯಿತು. ಸಿಎಲ್-7 ಸನ್ನದುಗಳ ನೀಡಿಕೆಯಲ್ಲಿ ನಿಯಮಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ;ಮನಸ್ಸಿಗೆ ಬಂದAತೆ ನೀಡಲಾಗುತ್ತಿದೆ ಎಂಬ ಸದಸ್ಯರ ಆರೋಪಗಳಿಗೆ ಉತ್ತರಿಸಿದ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರು ನಿಯಮಗಳ ಅನುಸಾರವೇ ಸಿಎಲ್-7 ಬಾರ್ ಲೈಸೆನ್ಸ್ಗಳ ನೀಡಲಾಗಿದೆ. ಸಿಎಲ್-7 ಸನ್ನದುಗಳ ನೀಡಿಕೆಯ ಈಗಿರುವ ನಿಯಮಗಳಲ್ಲಿ ಲಾಡ್ಜಿಂಗ್ ವಿನ್ಯಾಸ ಎಷ್ಟಿರಬೇಕು ಮತ್ತು ಪಾರ್ಕಿಂಗ್ ಹೇಗಿರಬೇಕು ಎಂಬುದರ ಬಗ್ಗೆ ಯಾವುದೇ ಅಂಶಗಳಿಲ್ಲ.ಅದನ್ನು ಮುಂದಿನ ದಿನಗಳಲ್ಲಿ ಸೇರ್ಪಡೆಗೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಬಾರ್‌ಲೈಸೆನ್ಸ್ಗಳ ನೀಡಿಕೆಯಲ್ಲಿ ಮೀಸಲಾತಿ ಅನುಷ್ಠಾನ ವಿಚಾರ ಸರಕಾರದ ಗಮನದಲ್ಲಿದ್ದು,ಕಾನೂನು ತಂದು ಅನುಷ್ಠಾನಗೊಳಿಸುವುದಕ್ಕೆ ಕ್ರಮವಹಿಸಲಾಗುವುದು ಎಂದರು.
ಕೋಲಾರ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ 56 ಸಿಎಲ್-7 ಸನ್ನದುಗಳನ್ನು ಮಂಜೂರು ಮಾಡಲಾಗಿದೆ. ಕೋಲಾರ ಜಿಲ್ಲೆಯ ಅಬಕಾರಿ ಅಧೀಕ್ಷಕ ರಂಗಪ್ಪ ಅವರ ಮೇಲಿನ ಆರೋಪಗಳ ಕುರಿತು ಇಲಾಖೆಯ ಹಿರಿಯ ಅಧಿಕಾರಿಗಳಿಂದ ವಿಚಾರಣೆ ನಡೆಸಿ ವರದಿ ತರಿಸಿಕೊಳ್ಳಲಾಗುವುದು;ವರದಿ ಆಧರಿಸಿ ಕ್ರಮಕೈಗೊಳ್ಳಲಾಗುವುದು ಎಂದರು.