Belagavi News In Kannada | News Belgaum

ಬೆಳಗಾವಿಯಲ್ಲಿ ನಾಳೆ ರಾಜ್ಯಮಟ್ಟದ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ

ಬೆಳಗಾವಿ: ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಇವರ ಸಹಯೋಗದೊಂದಿಗೆ ಬೆಳಗಾವಿಯಲ್ಲಿ ಚಳಿಗಾಲದ ಉಭಯ ಸದನಗಳ ಅಧಿವೇಶನದ ನಿಮಿತ್ತವಾಗಿ ಡಿ.7 ರಿಂದ ಡಿ.13 ರವರೆಗೆ ನಗರದ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಮಹಿಳಾ ಸ್ವಸಹಾಯ ಗುಂಪುಗಳ ಉತ್ಪನ್ನಗಳ ಬೃಹತ್ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ.
ರಾಜ್ಯಮಟ್ಟದ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಡಿ.7 ರಂದು ಮಧ್ಯಾಹ್ನ 3.30 ಗಂಟೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.
ಉಪಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮಿ ಆರ್. ಹೆಬ್ಬಾಳಕರ್, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಶರಣಪ್ರಕಾಶ್ ರು. ಪಾಟೀಲ ಇವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಶಾಸಕರಾದ ಆಸೀಫ್ ಸೇಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಸರ್ಕಾರಿ ಮುಖ್ಯ ಸಚೇತಕರಾದ ಅಶೋಕ್ ಮ. ಪಟ್ಟಣ, ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-2 ನವದೆಹಲಿ ಪ್ರಕಾಶ್ ಹುಕ್ಕೇರಿ ವಿಶೇಷ ಆಮಂತ್ರಿತರಿದ್ದಾರೆ.
ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ರಜನಿಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಉಮ ಮಹಾದೇವನ್, ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಅಂಜುಂ ಪರ್ವೇಜ್, ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತರು ಆದ ಸಂಜಯ್ ಬಿ. ಶಟ್ಟೆಣ್ಣವರ, ಪೋಲಿಸ್ ಮಹಾನಿರೀಕ್ಷಕರಾದ ವಿಕಾಶ್ ಕುಮಾರ್ ವಿಕಾಶ್, ರಾಷ್ಟ್ರೀಯ ಜೀವನೋಪಾಯ ಅಭಿಯಾನ ನಿರ್ದೇಶಕರಾದ ಪಿ. ಐ. ಶ್ರೀವಿದ್ಯಾ, ಜಿಲ್ಲಾಧಿಕಾರಿಗಳಾದ ನಿತೇಶ್ ಕೆ. ಪಾಟೀಲ್, ಪೊಲೀಸ್ ಆಯುಕ್ತರಾದ ಎಸ್. ಏನ್. ಸಿದ್ದರಾಮಪ್ಪ, ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿಗಳಾದ ಭೀಮಾಶಂಕರ್ ಎಸ್. ಗುಳೇದ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಹರ್ಷಲ್ ಬೋಯರ್, ಮಹಾನಗರ ಪಾಲಿಕೆ ಆಯುಕ್ತನದ ಅಶೋಕ್ ದುಡುಗುಂಟಿ ಹಾಗೂ ಮತ್ತಿತರರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.///////