Belagavi News In Kannada | News Belgaum

ವಕ್ಪ್ ಆಸ್ತಿ ಅನಧೀಕೃತ ತೆರವಿಗೆ ಪ್ರತ್ಯೇಕ ಕೋಶ ರಚನೆ : ಸಚಿವ ಕೃಷ್ಣ ಭೈರೇಗೌಡ

ಬೆಳಗಾವಿ  : ರಾಜ್ಯದಲ್ಲಿ ಒತ್ತುವರಿಯಾಗಿರುವ ವಕ್ಫ್ ಆಸ್ತಿಗಳ ಅನಧಿಕೃತ ತೆರವಿಗೆ ಪ್ರತ್ಯೇಕ ಕೋಶ ತೆರೆಯುವ ಚಿಂತನೆ ಇದ್ದು, ವಕ್ಫ್ ಆಸ್ತಿ ತೆರವು ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.
ವಿಧಾನ ಪರಿಷತ್‌ನಲ್ಲಿ ಡಿಸೆಂಬರ್ 6ರಂದು ಸದಸ್ಯ ಎಸ್.ಕೆ.ಅಬ್ದಲ್ ಜಬ್ಬಾರ್ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ ವಸತಿ, ವಕ್ಫ್ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಸಚಿವರÀ ಪರವಾಗಿ ಉತ್ತರಿಸಿದರು.
ರಾಜ್ಯದಲ್ಲಿ ಕಳೆದ 4 ವರ್ಷಗಳಲ್ಲಿ ಅನಧಿಕೃತವಾಗಿ 1,669 ವಕ್ಫ್ ಆಸ್ತಿಗಳನ್ನು ಒತ್ತುವರಿ ಮಾಡಿಕೊಂಡಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಅನಧೀಕೃತ ಒತ್ತುವರಿಯನ್ನು ತೆರವುಗೊಳಿಸಲು ವಕ್ಫ್ ಕಾಯ್ದೆಯ ಕಲಂ-54ರ ಪ್ರಕಾರ ಇಲ್ಲಿಯವರೆಗೆ 3,720 ಪ್ರಕರಣಗಳನ್ನು ದಾಖಲೆ ಮಾಡಿಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದರು.
ಕರ್ನಾಟಕ ವಕ್ಫ್ ನ್ಯಾಯಾಧೀಕರಣಕ್ಕೆ ಒತ್ತುವರಿ ತೆರವು ಆದೇಶಕ್ಕಾಗಿ 1458 ಅರ್ಜಿಗಳನ್ನು ಸಲ್ಲಿಸಲಾಗಿದ್ದು, ಇದುವರೆಗೆ ಒಟ್ಟು 319 ಎಕ್ರೆ 9.5 ಗುಂಟೆ ಹಾಗೂ 128453.9 ಚದುರ ಅಡಿ ವಕ್ಫ್ ಆಸ್ತಿಯನ್ನು ಒತ್ತುವರಿದಾರರಿಂದ ತೆರವುಗೊಳಿಸಿ ಸಂಬAದಪಟ್ಟ ವಕ್ಫ್ ಸಂಸ್ಥೆಯ ಸ್ವಾಧೀನಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.
ರಾಜ್ಯದ ಮದರಸಾಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಕನ್ನಡ, ಗಣಿತ, ವಿಜ್ಞಾನ, ಸಮಾಜ ಶಾಸ್ತçದ ವಿಷಯಗಳನ್ನು ಬೋಧಿಸಲು ಉದ್ದೇಶಿಸಲಾಗಿದ್ದು, ಪ್ರಾಯೋಗಿಕ ಆಧಾರದ ಮೇಲೆ
2 ವರ್ಷಗಳು ವಿವಿಧ ವಿಷಯಗಳನ್ನು ಬೋಧಿಸಿ ಎಸ್.ಎಸ್.ಎಲ್.ಸಿ, ಪಿಯುಸಿ ಮತ್ತು ಪದವಿಯನ್ನು ರಾಜ್ಯ /ರಾಷ್ಟಿಯ ಮುಕ್ತ ಶಾಲೆಗಳ ಮೂಲಕ /ಎನ್.ಐ.ಓ.ಎಸ್/ದೂರ ಶಿಕ್ಷಣದ ಮೂಲಕ ಕೈಗೊಳ್ಳಲು ಸರ್ಕಾರವು ಆದೇಶ ಹೊರಡಿಸಲಾಗಿದ್ದು, ಈ ಕುರಿತು ಕ್ರಿಯಾ ಯೋಜನೆ ತಯಾರಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.//////