Belagavi News In Kannada | News Belgaum

ಶೀಘ್ರವೇ ಕ್ರೀಡಾ ಶಾಲೆಗಳ 180 ದೈಹಿಕ ಶಿಕ್ಷಕರ ನೇಮಕಾತಿ: ಸಚಿವ ಬಿ. ನಾಗೇಂದ್ರ

ಬೆಳಗಾವಿ: ರಾಜ್ಯದಲ್ಲಿ ಕ್ರೀಡಾ ಶಾಲೆ ಹಾಗೂ ವಸತಿ ನಿಯಲಗಳ 180 ದೈಹಿಕ ಶಿಕ್ಷಕರ ತರಬೇತಿ ಪೂರ್ಣಗೊಂಡಿದ್ದು, ಶೀಘ್ರವೇ ಸ್ಥಳ ನಿಯೋಜಿಸಿ ನೇಮಕಾತಿ ಮಾಡುವುದಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡ ಸಚಿವ ಬಿ.ನಾಗೇಂದ್ರ ಹೇಳಿದರು.

ಬುಧವಾರ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಹಾಗೂ ಸಿ.ಎನ್.ಬಾಲಕೃಷ್ಣ ಅವರ ಚುಕ್ಕೇ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಕ್ರೀಡೆಗೆ ಹೆಚ್ಚಿನ ಮಹತ್ವ ನೀಡಿದೆ. ಅಮೃತ ದತ್ತು ಕ್ರೀಡಾ ಯೋಜನೆಯಡಿ ವಿವಿಧ ಕ್ರೀಡೆಗಳಲ್ಲಿ ಪದಕ ವಿಜೇರಾತ 75 ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ಅಗತ್ಯವಾದ ತರಬೇತಿ ಹಾಗೂ ಪ್ರೋತ್ಸಾಹ ನೀಡಲಾಗುತ್ತಿದೆ. ಇದರೊಂದಿಗೆ ಕ್ರೀಡಾಪುಟುಗಳಿಗೆ 2024ರ  ಒಲಂಪಿಕ್  ಕ್ರೀಡಗಳಿಲ್ಲಿ ಪಾಲ್ಗೊಳ್ಳಲು ರೂ.10 ಲಕ್ಷ ವೆಚ್ಚದಲ್ಲಿ ತರಬೇತಿ ನೀಡಲಾಗುತ್ತಿದೆ. ಕ್ರೀಡಾ ಇಲಾಖೆಯಿಂದ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡೆಗಳಲ್ಲಿ ವಿಜೇತರಾದ ಕ್ರೀಡಾಪುಟುಗಳಿಗೆ  ನಗದು ಪುರಸ್ಕಾರ, ಶೈಕ್ಷಣಿಕ ಶುಲ್ಕ ಮರುಪಾವತಿ, ಅಮೃತ ಕ್ರೀಡಾದತ್ತು ಯೋಜನೆ, ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ರಾಜ್ಯದಲ್ಲಿ 2 ಕ್ರೀಡಾ ಶಾಲೆ ಹಾಗೂ 32 ಕ್ರೀಡ ವಸತಿ ನಿಲಯಗಳು ಇದ್ದು ಒಟ್ಟು 2482 ಕ್ರೀಡಾಪಟುಗಳು ಪ್ರವೇಶ ಪಡೆದಿದ್ದಾರೆ. ಕರ್ನಾಟಕ ಕ್ರೀಡಾ ಪ್ರಾಧಿಕಾರದಿಂದ ಪ್ರತಿ ಜಿಲ್ಲೆಗಳಲ್ಲಿ ಕ್ರೀಡಾ ತರಬೇತುದಾರರನ್ನು ನೇಮಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ ಸಿ.ಎನ್. ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ 125 ತಾಲ್ಲೂಕು ಕ್ರೀಡಾಂಗಣಗಳು ಇವೆ. ಕ್ರೀಡಾ ಇಲಾಖೆ ಕಳೆದ ಎರೆಡು ವರ್ಷದಲ್ಲಿ ಒಟ್ಟು ರೂ.56 ಕೋಟಿಗಳನ್ನು ಕ್ರೀಡಾಂಗಣಗಳ ಅಭಿವೃದ್ಧಿಗಾಗಿ ಬಿಡುಗಡೆ ಮಾಡದೆ. ಶ್ರವಣಬೆಳಗೊಳ ವಿಧಾನ ಸಭಾ ಕ್ಷೇತ್ರದ ಚನ್ನರಾಯಪಟ್ಟಣದ ತಾಲ್ಲೂಕು ಕ್ರೀಡಾಂಗಣವನ್ನು ಒಟ್ಟು 7 ಎಕರೆಯಲ್ಲಿ ನಿರ್ಮಿಸಲಾಗಿದೆ. 400 ಮೀಟರ್ ಮಣ್ಣಿನ ಓಟದ ಅಂಕಣ, ಜಿಮ್ ಕೊಠಡಿ, ಹೈಮಾಸ್ಟ್ ದೀಪ್ ಪೆವಿಲಿಯನ್ನ ಹಾಗೂ ಶೌಚಾಲಯ ಕಟ್ಟಗಳನ್ನು ನಿರ್ಮಿಸಲಾಗಿದ್ದು, ವಿದ್ಯುತ್ ಸರಬರಾಜು ಸೌಲಭ್ಯ ಕಲ್ಪಿಸಲಾಗಿದೆ ಎಂದರು.

ಶಾಸಕ ಬಾಲಕೃಷ್ಣ.ಸಿ.ಎನ್.ಮಾತನಾಡಿ, ಚನ್ನರಾಯಪಟ್ಟಣದಲಿ 1 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆಯಿದೆ. ಹೆಚ್ಚಿನ ಶಾಲಾ ಕಾಲೇಜುಗಳು ಇದ್ದು, ಸುಸಜ್ಜಿತ ಕ್ರೀಡಾಂಗಣ, ಸಿಂಥಟಿಕ್ ಟ್ರಾಕ್ ಅವಶ್ಯಕತೆ ಇದೆ. ಸರ್ಕಾರ ಈ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಕೋರಿದರು.///////