Belagavi News In Kannada | News Belgaum

ಸೇವಾಭದ್ರತೆ ಒದಗಿಸುವಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಹೊರಗುತ್ತಿಗೆ ಮತ್ತು ಸಿಡಿಸಿ ನೌಕರರ ಸಂಘ ಒತ್ತಾಯ

ಬೆಳಗಾವಿ: ತಾಲ್ಲೂಕಿನ ಹಲಗಾ ಗ್ರಾಮದ ಸುವರ್ಣ ವಿಧಾನಸೌಧ ಬಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಹೊರಗುತ್ತಿಗೆ ಮತ್ತು ಸಿಡಿಸಿ ನೌಕರರ ಸಂಘದವರು ಗುರುವಾರ ಪ್ರತಿಭಟನೆ ನಡೆಸಿದರು‌.
ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅನ್‌ಸ್ಕಿಲ್ಡ್‌ ನೌಕರರಾಗಿ ಮತ್ತು ಕಾಲೇಜು ಅಭಿವೃದ್ಧಿ ಸಮಿತಿ (ಸಿಡಿಸಿ) ಮೂಲಕ ನೇಮಕಗೊಂಡು ಸ್ವಚ್ಛತೆ ಮತ್ತು ಇತರೆ ಕೆಲಸಗಳನ್ನು ನಿರ್ವಹಿಸುತ್ತಿರುವ ನಮಗೆ ಸೇವಾಭದ್ರತೆ ಒದಗಿಸಬೇಕು’ ಎಂದು ಆಗ್ರಹಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಹೊರಗುತ್ತಿಗೆ ಮತ್ತು ಸಿಡಿಸಿ ನೌಕರರ ಸಂಘದವರು ಪ್ರತಿಭಟಿಸಿದರು.
ಹೊರಗುತ್ತಿಗೆ ಪದ್ಧತಿ ರದ್ದುಪಡಿಸಿ, ಉನ್ನತ ಶಿಕ್ಷಣ ಇಲಾಖೆಯಿಂದಲೇ ನಮ್ಮನ್ನು ನೇರವಾಗಿ ನೇಮಕ ಮಾಡಿಕೊಳ್ಳಬೇಕು. ಹಲವು ವರ್ಷಗಳಿಂದ ಕಾಲೇಜುಗಳಲ್ಲಿ ದುಡಿಯುತ್ತಿರುವವರಿಗೆ ನೇಮಕಾತಿಯಲ್ಲಿ ಆದ್ಯತೆ ನೀಡಬೇಕು. ಎಸ್ಸೆಸ್ಸೆಲ್ಸಿ ಉತ್ತೀರ್ಣವಾಗಿರಬೇಕೆಂಬ ಮಾನದಂಡ ಕೈಬಿಡಬೇಕು’ ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬಿ.ಜಿ.ಹನುಮಂತಪ್ಪ, ಶಿವಶಂಕರ ಅಂಗಡಿ, ಮಲ್ಲಿಕಾರ್ಜುನ ಮುಳವಾಡ, ಎಚ್‌.ಚನ್ನಮೂರ್ತಿ, ಚೇತನ ನುನ್ನಾ, ನೇತ್ರಾವತಿ, ರಂಗಮ್ಮ ಚೇತನ ಇತರರಿದ್ದರು.//////