Belagavi News In Kannada | News Belgaum

ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವಿಕೆ: ಸರಕಾರದ ಹಂತದಲ್ಲಿ ಪರಿಶೀಲನೆ

ಬೆಳಗಾವಿ ಸುವರ್ಣಸೌಧ,ಡಿ.07:ಕಾರವಾರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರರಣದಲ್ಲಿ ನಿರ್ಮಾಣವಾಗುತ್ತಿರುವ 450 ಹಾಸಿಗೆ ಸಾಮರ್ಥ್ಯವುಳ್ಳ ಆಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಮೇಲ್ದಜೇಗೇರಿಸುವ ಕುರಿತ ಬೇಡಿಕೆಗಳು ಸರಕಾರದಲ್ಲಿ ಸ್ವೀಕೃತವಾಗಿಸ್ಸು, ಪರಿಶೀಲನೆಯಲ್ಲಿವೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಶರಣಪ್ರಕಾಶ ಪಾಟೀಲ್ ಅವರು ಹೇಳಿದರು.
ವಿಧಾನಸಭೆಯಲ್ಲಿ ಸದಸ್ಯ ಸತೀಶ್‌ಕೃಷ್ಣ ಸೈಲ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು ಕಾರವಾರ ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆಯಲ್ಲಿ ಸೂಪರ್ ಸ್ಪೆಷಾಲಿಟಿ ಸೇವೆಗಳನ್ನು ಒದಗಿಸುವ ಸಲುವಾಗಿ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಸ್ಪತ್ರೆಗೆ ಮಂಜೂರಾಗಿದ್ದ 04 ತಜ್ಞ ವೈದ್ಯರು ಹಾಗೂ 03 ಉಪಮುಖ್ಯ ವೈದ್ಯಾಧಿಕಾರಿ ಹುದ್ದೆಗಳು ಸೇರಿದಂತೆ ಒಟ್ಟು 07 ಹುದ್ದೆಗಳನ್ನು ಪ್ರಾಧ್ಯಾಪಕರು/ಸೂಪರ್ ಸ್ಪೆಷಲಿಸ್ಟ್ ಹುದ್ದೆಗಳನ್ನಾಗಿ ಮರುಪದನಾಮೀಕರಿಸಿ ಆದೇಶಿಸಲಾಗಿದೆ ಎಂದರು.
ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಮಂಜೂರಾಗಿರುವ ಹುದ್ದೆಗಳಿಗೆ ಈಗಾಗಲೇ 2 ಬಾರಿ ನೇರ ಸಂದರ್ಶನ ಕರೆಯಲಾಗಿದ್ದು, ಆದರೇ ಯಾವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಿರುವುದಿಲ್ಲ. ಆದ್ದರಿಂದ ಸದರಿ ಹುದ್ದೆಗಳನ್ನು ಮತ್ತೊಮ್ಮೆ ನೇರ ಸಂದರ್ಶನದ ಮೂಲಕ ಭರ್ತಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಿ ಅನುಮತಿ ನೀಡಲಾಗಿದೆ ಎಂದು ಸಚಿವ ಪಾಟೀಲ್ ಅವರು ವಿವರಿಸಿದರು.