Belagavi News In Kannada | News Belgaum

ಬಾಲಾಪರಾಧ ಕಾಯ್ದೆಯಡಿ 5 ವರ್ಷಗಳಲ್ಲಿ 381 ಪ್ರಕರಣ ದಾಖಲು-ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ ಸುವರ್ಣ ಸೌಧ,ಡಿ.08: ರಾಜ್ಯದಲ್ಲಿ ಕಳೆದ 5 ವರ್ಷಗಳಲ್ಲಿ ಬಾಲಾಪರಾಧ ಕಾಯ್ದೆ ಅಡಿಯಲ್ಲಿ ಗೃಹ ಇಲಾಖೆಯಲ್ಲಿ 381 ಪ್ರಕರಣಗಳು ದಾಖಲಾಗಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷಿö್ಮ ಹೆಬ್ಬಾಳ್ಕರ್ ತಿಳಿಸಿದರು.
ಶುಕ್ರವಾರ ಬೆಳಗಾವಿ ಅಧಿವೇಶನದಲ್ಲಿ ವಿಧಾನಪರಿಷತ್‌ನ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನÀ ಪ್ರಶ್ನೆಗೆ ಉತ್ತರಿಸಿದರು.
ಮಕ್ಕಳ ರಕ್ಷಣಾ ನಿರ್ದೇಶನಾಲಯದಿಂದ ಬಾಲ ನ್ಯಾಯ ( ಮಕ್ಕಳ ಪಾಲನೆ ಮತ್ತು ರಕ್ಷಣೆ)ಕಾಯ್ದೆ 2015, ಮಾದರಿ ನಿಯಮಗಳು 2016 ರಡಿ ರಾಜ್ಯಾದ್ಯಂತ ರಚಿಸಲಾಗಿರುವ 33 ಬಾಲ ನ್ಯಾಯ ಮಂಡಳಿಗಳಲ್ಲಿ ಕಳೆದ 5 ವರ್ಷಗಳಲ್ಲಿ 9430 ಪ್ರಕರಣಗಳು ದಾಖಲಾಗಿವೆ.
ರಾಜ್ಯದಲ್ಲಿ 18 ವರ್ಷದೊಳಗಿನ ಯುವಕ ಯುವತಿಯರು ಮಾದಕ ವಸ್ತು ವ್ಯಸನಿಗಳಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಇದಕ್ಕಾಗಿ ಮಕ್ಕಳ ರಕ್ಷಣಾ ನಿರ್ದೇಶನಾಲಯದಿಂದ ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಮೂಲಕ ಜಿಲ್ಲೆ, ತಾಲೂಕು ಹಾಗೂ ಪಂಚಾಯತ್ ವ್ಯಾಪ್ತಿಯಲ್ಲಿ ಪಾಲನೆ ಮತ್ತು ರಕ್ಷಣೆಗೆ ಅಗತ್ಯವಿರುವ ಮಕ್ಕಳಿಗೆ ಸರ್ಕಾರದಿಂದ ಜಾರಿಯಲ್ಲಿರುವ ಯೋಜನೆ/ಕಾರ್ಯಕ್ರಮಗಳು ಮತ್ತು ಮಕ್ಕಳ ರಕ್ಷಣೆಗಾಗಿ ಇರುವ ಕಾಯದೆ ಕಾನೂನುಗಳ ಬಗ್ಗೆ ಅರಿವು ಮೂಡಿಸುವುದರೊಂದಿಗೆ ಶಾಲಾ ಕಾಲೇಜು ಮಕ್ಕಳಿಗೆ ಮಾದಕ ವಸ್ತುಗಳ ಸೇವೆನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಕೇಂದ್ರ ಸರ್ಕಾರದ ಅನುದಾನದಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಒಟ್ಟು 32 ಮಾದಕ ವಸ್ತು ವ್ಯಸನಿಗಳ ಸಮಗ್ರ ಪುನರ್ವಸತಿ ಕೇಂದ್ರಗಳನ್ನು ನಡೆಸಲಾಗುತ್ತಿದೆ. ಸದರಿ ಕೇಂದ್ರಗಳಲ್ಲಿ ಇಂತಹ ಯುವಕ ಯುವತಿಯರಿಗೆ ಸೂಕ್ತ ಸಮಾಲೋಚನೆ ಮತ್ತು ಔಷದೋಪಚಾರ ನೀಡುವ ಮೂಲಕ ದುಷ್ಟಟಗಳಿಂದ ಹೊರಬರಲು ಪ್ರೇರೇಪಿಸಲಾಗುತ್ತಿದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರದ ನಶಾ ಮುಕ್ತ ಭಾರತ ಅಭಿಯಾನ ಯೋಜನೆಯಡಿ ಮೊದಲ ಹಂತದಲ್ಲಿ 6 ಜಿಲ್ಲೆಗಳನ್ನು ಮತ್ತು 2 ನೇ ಹಂತದಲ್ಲಿ 21 ಜಿಲ್ಲೆಗಳನ್ನು 2023-24 ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲು ಕೇಂದ್ರ ಸರ್ಕರವು ಗುರುತಿಸಿದೆ. ಸದರಿ ಯೋಜನೆಯಡಿ ಶಾಲಾ ಕಾಲೇಜುಗಳಲ್ಲಿ ಸಮುದಯದಲ್ಲಿ ಮಾದಕ ವಸ್ತು ಸೇವೆನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಕೇಂದ್ರ ಸರ್ಕಾರದ ನ್ಯಾಷನಲ್ ಆಕ್ಷನ್ ಪ್ಲಾನ್ ಫಾರ್ ಡ್ರಗ್ ಡಿಮಾಂಡ್ ರಿಡಕ್ಷನ್ ಯೋಜನೆಯಡಿ ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಜಾಗೃತಿಗಾಗಿ ಕ್ರಿಯಾ ಯೋಜನೆಯನ್ನು ತಯಾರಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು, ಕೇಂದ್ರ ಸರ್ಕಾರದ ಅನುಮೋದನೆಯನ್ನು ನಿರೀಕ್ಷಿಸಲಾಗಿದೆ ಎಂದು ತಿಳಿಸಿದರು.