Belagavi News In Kannada | News Belgaum

ಅವೈಜ್ಞಾನಿಕ ರಸ್ತೆ ವಿಭಜಕ ಕುರಿತು ಸದನದಲ್ಲಿ ಚರ್ಚೆ : ತೆರವಿಗೆ ಶಾಸಕ ವೀರೇಂದ್ರ ಪಪ್ಪಿ ಒತ್ತಾಯ

ಬೆಳಗಾವಿ ಸುವರ್ಣಸೌಧ,ಡಿ.12: ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಚಿತ್ರದುರ್ಗ ನಗರದ ಪ್ರಮುಖ ರಸ್ತೆಗಳಲ್ಲಿ ನಿರ್ಮಿಸಲಾಗಿರುವ ಅವೈಜ್ಞಾನಿಕ ರಸ್ತೆ ವಿಭಜಕಗಳ ಕುರಿತು ಚರ್ಚೆ ನಡೆಯಿತು.
ಮಂಗಳವಾರದ ವಿಧಾನ ಸಭಾ ಕಲಾಪದಲ್ಲಿ ಶಾಸಕ ವೀರೇಂದ್ರ ಪಪ್ಪಿ ಈ ಕುರಿತು ಪ್ರಶ್ನಿಸಿ, ಸರ್ಕಾರದ ಗಮನ ಸೆಳೆದರು. ಐತಿಹಾಸಿಕವಾಗಿರುವ ಚಿತ್ರದುರ್ಗ ನಗರದಲ್ಲಿ ಮೊದಲಿನಿಂದಲೂ ಚಿಕ್ಕ ರಸ್ತೆಗಳು ಇವೆ. ನಗರದ ಮುಖ್ಯ ರಸ್ತೆ ಕೇವಲ 40 ಅಡಿ ಅಗಲವಿದೆ. ಇದರ ಮಧ್ಯ 5 ಎತ್ತರ ಹಾಗೂ 4 ಅಡಿ ಅಗಲದ ರಸ್ತೆ ವಿಭಜಕಗಳನ್ನು ನಿರ್ಮಿಸಲಾಗಿದೆ. ಇದರಿಂದಾಗಿ ಸಾರ್ವಜನಿಕರು, ಪಾದಚಾರಿಗಳು, ವ್ಯಾಪಾರಿಗಳು ಬವಣೆ ಪಡುವಂತೆಯಾಗಿದೆ. ರಸ್ತೆ ಅಪಘಾತಗಳು ಹೆಚ್ಚಾಗುತ್ತಿವೆ ಎಂದರು.
ಕೆ.ಎಸ್.ಆರ್.ಟಿ. ಬಸ್ ನಿಲ್ದಾಣದಿಂದ ಗಾಂಧಿ ವೃತ್ತ ಸಂಪರ್ಕಿಸುವ ರಸ್ತೆ ಕಳೆದ 35 ವರ್ಷಗಳಿಂದ ಏಕಮುಖ ಸಂಚಾರದ ರಸ್ತೆಯಾಗಿದೆ. ಕಿರಿದಾದ ಏಕಮುಖ ರಸ್ತೆಯಲ್ಲೂ ದೊಡ್ಡ ರಸ್ತೆ ವಿಭಜಕಗಳನ್ನು ನಿರ್ಮಿಸಿರುವುದರಿಂದ ಕೇವಲ 10 ರಿಂದ 12 ಅಡಿ ರಸ್ತೆಗಳು ನಿರ್ಮಾಣವಾಗಿ, ಬಸ್ ಸೇರಿದಂತೆ ಇತರೆ ಭಾರಿ ವಾಹನಗಳು ಸಂಚಾರಕ್ಕೆ ತೊಂದರೆಯಾಗಿದೆ. ಇಲ್ಲಿ ಸಂಚರಿಸುವ ಪಾದಚಾರಿಗಳಿಗೆ ಕಷ್ಟವಾಗಿದೆ. ನಗರವಾಸಿಗಳು ಹಾಗೂ ನಗರಕ್ಕೆ ಆಗಮಿಸುವ ಜನರು ಸಹ ರಸ್ತೆ ವಿಭಜಕಗಳ ತೆರವಿಗೆ ಆಗ್ರಹಿಸುತ್ತಿದ್ದಾರೆ. ವೈಯಕ್ತಿಕವಾಗಿ ಸ್ವತಃ ರಸ್ತೆ ವಿಭಜಕಗಳ ಪರೀಶಲನೆ ನೆಡೆಸಿದ್ದೇನೆ. ತುರ್ತಾಗಿ ರಸ್ತೆ ವಿಭಜಕಗಳನ್ನು ತೆರವು ಆಗಬೇಕಿದೆ ಎಂದು ಸರ್ಕಾರವನ್ನು ಒತ್ತಾಯಿಸಿದರು.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪರವಾಗಿ ಸದನದಲ್ಲಿ ಉತ್ತರಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ, ಅವೈಜ್ಞಾನಿಕ ರಸೆ ವಿಭಜಕ ನಿರ್ಮಿಸಿದ ಗುತ್ತಿದಾರ ಬಿಲ್‌ಗಳನ್ನು ಸರ್ಕಾರ ಈಗಾಗಲೇ ತಡೆಹಿಡಿದೆ. ವಿಭಜಕಗಳ ತೆರವಿನ ಕುರಿತು ಮುಖ್ಯಮಂತ್ರಿ ಹಾಗೂ ಸಂಬAಧಪಟ್ಟ ಸಚಿವರ ಗಮನಕ್ಕೆ ತರುವುದಾಗಿ ಹೇಳಿದರು.

ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ಶೀಘ್ರದಲ್ಲಿ ಕ್ರಮ:

 ನಗರಾಭಿವೃದ್ಧಿ ಸಚಿವ ಸುರೇಶ ಬಿ.ಎಸ್.

ಬೆಳಗಾವಿ: ಸುವರ್ಣ ಸೌಧ, ಡಿ.12: ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಮತಕ್ಷೇತ್ರದ ಶಾಸಕರಾದ ಅರವಿಂದ ಬೆಲ್ಲದ ಅವರು, ಇಂದು ಸಂಜೆ ವಿಧಾನಸಭೆಯಲ್ಲಿ ಗಮನ ಸೆಳೆಯುವ ಪ್ರಶ್ನೆ ಕೇಳಿ, ಧಾರವಾಡ ಮಹಾನಗರ ಪಾಲಿಕೆ ರಚನೆಗಾಗಿ ಅಗತ್ಯವಿರುವ ಎಲ್ಲಾ ಮಾನದಂಡಗಳು ಪೂರ್ಣವಾಗಿದ್ದು, ಮಹಾನಗರ ಪಾಲಿಕೆ ರಚನೆಗೆ ಕ್ರಮವಹಿಸಿ ಆದೇಶ ಹೊರಡಿಸಬೇಕೆಂದು ನಗರಾಭಿವೃದ್ಧಿ ಸಚಿವರಲ್ಲಿ ಗಮನ ಸೆಳೆದರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯು ನಮ್ಮ ರಾಜ್ಯದ ಎರಡನೇ ಅತೀ ದೊಡ್ಡ ಮಹಾನಗರಪಾಲಿಕೆಯಾಗಿದೆ. ಹುಬ್ಬಳ್ಳಿ-ಧಾರವಾಡವು ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿರುವ ಪ್ರದೇಶವಾಗಿದೆ. ಸಮೀಪದ ಅನೇಕ ಹಳ್ಳಿಗಳು ಪಾಲಿಕೆಗೆ ಹತ್ತಿರದಲ್ಲಿವೆ. ಜನಸಂಖ್ಯೆಯು ಹೆಚ್ಚಿನ ಪ್ರಮಾಣದಲ್ಲಿದ್ದು, ಈ ಪ್ರದೇಶದಲ್ಲಿ ಕೈಗಾರಿಕೆ, ವಸತಿ ಹಾಗೂ ಶೈಕ್ಷಣಿಕ ಕ್ಷೇತ್ರದ ಎಲ್ಲಾ ಕ್ಷೇತ್ರಗಳು ಬೃದಾಕಾರವಾಗಿ ಬೆಳೆದಿವೆ ಎಂದು ಶಾಸಕ ಬೆಲ್ಲದ ತಿಳಿಸಿದರು.
ಸಾರ್ವಜನಿಕರ ಸಮಸ್ಯೆಗಳು ಶೀಘ್ರವಾಗಿ ಇತ್ಯರ್ಥವಾಗುತ್ತಿಲ್ಲ ಹಾಗೂ ಹಲವಾರು ಸಂಘಟನೆಗಳು ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಸ್ಥಾಪಿಸಬೇಕೆಂದು ಅಭಿಪ್ರಾಯಿಸಿವೆ. ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಧಾರವಾಡದ ಜನರ ಸರ್ವತೋಮುಖ ಅಭಿವೃದ್ಧಿ ಹಿತದೃಷ್ಟಿಯಿಂದ ಧಾರವಾಡ ಪ್ರತ್ಯೇಕ ಮಹಾನಗರಪಾಲಿಕೆಯನ್ನು ಸ್ಥಾಪಿಸುವಂತೆ ಶಾಸಕ ಅರವಿಂದ ಬೆಲ್ಲದ ಅವರು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರ ಗಮನ ಸೆಳೆದರು.
ಈ ಸಂದರ್ಭದಲ್ಲಿ ಉತ್ತರಿಸಿದ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಸುರೇಶ ಬಿ.ಎಸ್. ಅವರು ಮಾತನಾಡಿ, ಹುಬ್ಬಳ್ಳಿ-ಧಾರವಾಡ ನಗರಗಳು ಅವಳಿ ನಗರವಾಗಿ ಗುರಿತಿಸಲ್ಪಟ್ಟಿದ್ದು, ಜಂಟಿಯಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರಪಾಲಿಕೆಯಾಗಿ ಈಗಾಗಲೇ ಗುರುತಿಸಲ್ಪಟ್ಟಿವೆ. ಈ ಮಹಾನಗರ ಪಾಲಿಕೆಯು 202.3 ಚದರ ಕಿ.ಮೀ. ವಿಸ್ತೀರ್ಣವನ್ನು ಹೊಂದಿದ್ದು, 2011ರ ಜನಗಣತಿಯನ್ವಯ 9,43,788 ಜನಸಂಖ್ಯೆ ಹೊಂದಿದೆ ಹಾಗೂ ಇಲ್ಲಿನ ಜನಸಾಂದ್ರತೆಯನ್ನು ಪ್ರತಿ ಚದರ ಕಿ.ಮೀ.ಗೆ 4,665 ಆಗಿದೆ.
ಒಂದು ನಗರ ಸ್ಥಳೀಯ ಸಂಸ್ಥೆಯನ್ನು ಮಹಾನಗರಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಲು 2011ರ ಜನಸಂಖ್ಯೆಯು ಮಾನದಂಡವಾಗಿದ್ದು, ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ರಲ್ಲಿರುವ ಮಾನದಂಡಗಳನ್ನು ಪೂರೈಸುತ್ತಿರುವ ಬಗ್ಗೆ ಪರಿಶೀಲಿಸಿ, ಧಾರವಾಡ ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಲು ಕ್ರಮವಹಿಸಲಾಗುತ್ತಿದೆ ಎಂದು ಹೇಳಿದರು.
ಮಹಾನಗರ ಪಾಲಿಕೆ ರಚನೆಗೆ ಅರ್ಹತೆ: ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976ರ ನಿಯಮ-3ರಲ್ಲಿ ತಿಳಿಸಿರುವಂತೆ ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಲಾಗುವ ಪ್ರದೇಶದ ಜನಸಂಖ್ಯೆ 3 ಲಕ್ಷಕ್ಕಿಂತ ಕಡಿಮೆ ಇರಬಾರದು. ಅಂತಹ ಪ್ರದೇಶದ ಜನಸಂಖ್ಯೆಯ ಜನಸಾಂದ್ರತೆಯು ಆ ಪ್ರದೇಶದ ಒಂದು ಚದರ ಕಿ.ಮೀ. ವಿಸ್ತೀðಣಕ್ಕೆ 3,000 ಕ್ಕಿಂತ ಕಡಿಮೆ ಇರಬಾರದು. ಹಿಂದಿನ ನಿಕಟಪೂರ್ವ ಜನಗಣತಿಯಲ್ಲಿ ಅಂತಹ ಪ್ರದೇಶದಿಂದ ಸ್ಥಳೀಯ ಆಡಳಿತಕ್ಕಾಗಿ ತೆರಿಗೆ ಮತ್ತು ತೆರಿಗೆಯಲ್ಲದ ಇತರ ಸಂಪನ್ಮೂಲಗಳಿAದ ಉತ್ಪಾದಿತವಾದ ರಾಜಸ್ವ ವಾರ್ಷಿಕ ರೂ. 6.00 ಕೋಟಿ ಅಥವಾ ವಾರ್ಷಿಕ ತಲಾ ಒಬ್ಬರಿಗೆ ರೂ. 200 ಗಳ ದರದಂತೆ ಲೆಕ್ಕಹಾಕಲಾದ ಮೊತ್ತ ಇವೆರಡರಲ್ಲಿ ಯಾವುದು ಹೆಚ್ಚೋ ಆ ಮೊತ್ತಕ್ಕಿಂತ ಕಡಿಮೆ ಇರಬಾರದು ಮತ್ತು ಅಂತಹ ಪ್ರದೇಶದಲ್ಲಿನ ಕೃಷಿಯೇತರ ಚಟುವಟಿಕೆಗಳಲ್ಲಿನ ಉದ್ಯೋಗಾವಕಾಶಗಳ ಶೇಕಡಾವಾರು ಪ್ರಮಾಣವು ಒಟ್ಟು ಉದ್ಯೋಗದ ಪ್ರಮಾಣದಲ್ಲಿ ಶೇ. 50 ಕ್ಕಿಂತ ಕಡಿಮೆಯಿಲ್ಲದಿರುವುದನ್ನು ಪರಿಗಣಿಸಲಾಗುತ್ತದೆ.
ಈ ಎಲ್ಲಾ ಮಾನದಂಡಗಳನ್ನು ಪೂರೈಸುತ್ತಿರುವ ಧಾರವಾಡ ನಗರಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆಯನ್ನು ರಚಿಸಲು ಕ್ರಮಕೈಗೊಳ್ಳಲಾಗುವುದೆಂದು ನಗರಾಭಿವೃದ್ಧಿ ಸಚಿವ ಸುರೇಶ ಬಿ.ಎಸ್. ಅವರು ತಿಳಿಸಿದರು.
ಧಾರವಾಡ ಜಿಲ್ಲಾಧಿಕಾರಿಗಳು ಧಾರವಾಡ ನಗರವನ್ನು ಮಾತ್ರ ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವುದು ಸೂಕ್ತವೆಂದು ಗುರುತಿಸಿ, ಈ ಕುರಿತಂತೆ ಅಗತ್ಯ ದಾಖಲೆಗಳೊಂದಿಗೆ ಪ್ರಸ್ತಾವನೆಯನ್ನು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಿಗೆ ಸಲ್ಲಿಸಿದ್ದಲ್ಲಿ ಮತ್ತು ಪೌರಾಡಳಿತ ನಿರ್ದೇಶಕರಿಂದ ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ರನ್ವಯ ಸೂಕ್ತ ಶಿಫಾರಸ್ಸಿನೊಂದಿಗೆ ಪ್ರಸ್ತಾವನೆಯು ಸರ್ಕಾರದಲ್ಲಿ ಸ್ವೀಕೃತವಾದಲ್ಲಿ ನಿಯಮಾನುಸಾರ ಅರ್ಹತೆಯನ್ನು ಪರಿಶೀಲಿಸಿ ಕ್ರಮವಹಿಸಲಾಗುತ್ತದೆ ಎಂದು ನಗರಾಭಿವೃದ್ಧಿ ಸಚಿವರು ಸದನದಲ್ಲಿ ತಿಳಿಸಿದರು.