Belagavi News In Kannada | News Belgaum

ಬೆಳಗಾವಿಯ ಸುವರ್ಣ ಸೌಧದಲ್ಲಿ ಕಲಾಪಗಳ ಸುದ್ದಿ : ವಿವಿಧ ಮಸೂದೆಗಳ ಅಂಗೀಕಾರ

ಬೆಳಗಾವಿಯಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಸರ್ಕಾರ ಸಿದ್ದ -ಸಚಿವ ಬಿ.ನಾಗೇಂದ್ರ

ಬೆಳಗಾವಿಯಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಸರ್ಕಾರ ಸಿದ್ದ
-ಸಚಿವ ಬಿ.ನಾಗೇಂದ್ರ

 

 

ಸುವರ್ಣಸೌಧ ಬೆಳಗಾವಿ  ಡಿ.13: ಬೆಳಗಾವಿ ತಾಲ್ಲೂಕಿನ ಯಳ್ಳೂರು ಗ್ರಾಮದ ಬಳಿಯ ಸರ್ಕಾರಿ ಜಾಗದಲ್ಲಿ, ಸುಸಜ್ಜಿತ ಅಂತರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಸರ್ಕಾರ ಸಿದ್ದವಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ.ನಾಗೇಂದ್ರ ಹೇಳಿದರು.
ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಬುಧುವಾರ ವಿಧಾನಸಭೆ ಕಲಾಪದ ಪ್ರಶ್ನೋತ್ತರ ವೇಳೆ ಶಾಸಕ ಅಭಯ ಪಾಟೀಲ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು.
ಕೇಂದ್ರ ಸರ್ಕಾರ ಒದಗಿಸುವ ಅನುದಾನದ ಜೊತೆ ರಾಜ್ಯ ಸರ್ಕಾರವು ಅನುದಾನ ನೀಡಿ ಕ್ರೀಡಾಂಗಣ ನಿರ್ಮಿಸಲು ಯಾವುದೆ ಅಡ್ಡಿಯಿಲ್ಲ. ಯಳ್ಳೂರು ಗ್ರಾಮದ ರಿ.ಸ.ನಂ 1142ರ 66 ಎಕರೆ ಪೈಕಿ 40 ಎಕರೆ ಜಮೀನು ಕ್ರೀಡಾ ಇಲಾಖೆ ಹಸ್ತಾಂತರವಾಗಿದೆ. ಪಾರ್ಕಿಂಗ್ ಒಳಗೊಂಡಂತೆ ಸುಸಜ್ಜಿತ ಕ್ರೀಡಾಂಗಣ ನಿರ್ಮಿಸಲು ಕನಿಷ್ಠ 55 ಎಕರೆ ಜಮೀನಿ ಅವಶ್ಯಕತೆಯಿದೆ. ಈಗಾಗಲೇ ಜಮೀನು ಹಸ್ತಾಂತರ ಪ್ರಕ್ರಿಯೆ ಸಲುವಾಗಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ 11 ಅಧಿಕಾರಿಗಳ ಸಮಿತಿ ರಚನೆ ಮಾಡಲಾಗಿದೆ. ಸ್ಥಳೀಯ ಶಾಸಕರು ಅವಶ್ಯ ಇರುವ 15 ಎಕರೆ ಜಮೀನು ಒದಗಿಸಿದರೆ ಶೀಘ್ರವಾಗಿ ಕ್ರೀಡಾಂಗಣ ನಿರ್ಮಾಣದ ಯೋಜನೆ ರೂಪಿಸಲಾಗುವುದು ಎಂದು ಸಚಿವ ಬಿ.ನಾಗೇಂದ್ರ ಹೇಳಿದರು.
ಸದ್ಯ ಸರ್ಕಾರಿ ಜಮೀನನಲ್ಲಿ ನಿರ್ಮಾಣವಾಗಿರುವ ಶಾಲೆ ಹಾಗೂ ಸರ್ಕಾರದ ಯೋಜನೆಗಳಲ್ಲಿ ಬಡವರಿಗೆ ವಿತರಿಸಲಾಗಿರುವ ಮನೆಗಳನ್ನು ಹೊರತು ಪಡಿಸಿ ಉಳಿದ ಖಾಲಿ ಜಾಗವನ್ನು ಕ್ರೀಡಾ ಇಲಾಖೆ ಹಸ್ತಾಂತರಿಸಲಾಗುವುದು. ಇದಕ್ಕೆ ಜನರ ವಿರೋಧವಿಲ್ಲ ಎಂದು ಶಾಸಕ ಅಭಯ ಪಾಟೀಲ್ ಹೇಳಿದರು.

ತಿಂಗಳ ಒಳಗಾಗಿ ವಿದ್ಯಾರ್ಥಿ ನಿಲಯ ಮಂಜೂರಾತಿ: ಹೊಸಕೋಟೆಯಲ್ಲಿ ಮೆಟ್ರಿಕ್ ನಂತರ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ ಅಗತ್ಯ ಇರುವ 10000 ಚದುರ ಅಡಿ ಜಾಗವನ್ನು ಒದಗಿಸಿದರೆ, ತಿಂಗಳ ಒಳಗಾಗಿ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ ಮಂಜೂರಾತಿ ನೀಡುವುದಾಗಿ ಸಚಿವ ಬಿ.ನಾಗೇಂದ್ರ ಶಾಸಕ ಶರತ್ ಬಚ್ಚೇಗೌಡ ಅವರ ಪ್ರಶ್ನೆಗೆ ಉತ್ತರಿಸಿದರು.////

 

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಶೀಘ್ರ ಕ್ರಮ: ಸುಧಾಕರ

ಬೆಳಗಾವಿ, ಸುವರ್ಣಸೌಧ, ಡಿ.15 :
ಕಳೆದ 15 ದಿನಗಳಿಂದ ರಾಜ್ಯಾದ್ಯಂತ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿರುವುದು ಸರಕಾರದ ಗಮನಕ್ಕಿದೆ. ಶೀಘ್ರವೇ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಭರವಸೆ ನೀಡಿದರು.

ಬೆಳಗಾವಿಯಲ್ಲಿ ಬುಧವಾರ ನಡೆದ ವಿಧಾನ ಪರಿಷತ್ ಕಲಾಪದ ಶೂನ್ಯವೇಳೆಯಲ್ಲಿ ವಿಪಕ್ಷ ಸದಸ್ಯ ಚಿದಾನಂದ ಅವರು ಅತಿಥಿ ಉಪನ್ಯಾಸಕರ ಹೋರಾಟ ಮತ್ತು ವಿದ್ಯಾರ್ಥಿಗಳ ಸಮಸ್ಯೆ ಕುರಿತು ಸಚಿವರ ಗಮನಕ್ಕೆ ತಂದರು.

ಬೇರೆ ಬೇರೆ ರಾಜ್ಯಗಳಲ್ಲಿ ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡಿಕೊಂಡಿರುವ ಮಾದರಿಯನ್ನು ಅನುಸರಿಸಬೇಕು. ಈ ವಿಷಯದಲ್ಲಿ ಪ್ರತಿ ಸಲವೂ ಉಮಾದೇವಿ ಪ್ರಕರಣವನ್ನು ಮುಂದಿಟ್ಟುಕೊಂಡು ಅತಿಥಿ ಉಪನ್ಯಾಸಕರಿಗೆ ಆಗುವ ಅನ್ಯಾಯ ನಿಲ್ಲಬೇಕಾದರೆ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಬೇಕು. ಯುಜಿಸಿ ನಿಗದಿಯಂತೆ ವೇತನ ಪರಿಷ್ಕರಣೆ ಮಾಡಿ, ಅತಿಥಿ ಉಪನ್ಯಾಸಕರಿಗೆ ಸೇವಾಭದ್ರತೆ ಒದಗಿಸಬೇಕು ಎಂದು ಚಿದಾನಂದ ಅವರು ಸಲಹೆ ನೀಡಿದರು.

ಅತಿಥಿ ಉಪನ್ಯಾಸಕರ ಸಮಸ್ಯೆ ನಮ್ಮ ಸರಕಾರ ಅಸ್ತಿತ್ವಕ್ಕೆ ಬಂದಾಗ ಉದ್ಭವಿಸಿದ್ದಲ್ಲ. ಸುಮಾರು 20 ವರ್ಷಗಳಿಂದ ಜೀವಂತವಾಗಿರುವ ಬೇಡಿಕೆ. ಈಗಾಗಲೇ ಪ್ರತಿಭಟನಾನಿರತ ಅತಿಥಿ ಉಪನ್ಯಾಸಕರೊಂದಿಗೆ ಮಾತನಾಡಿ, ಹೋರಾಟ ಕೈ ಬಿಡುವಂತೆ ಮನವೊಲಿಸುವ ಪ್ರಯತ್ನ ವಿಫಲವಾಗಿದೆ. ಈ ಬಗ್ಗೆ ಸಿಎಂ ಜೊತೆ ಮಾತನಾಡಿದ್ದು, ಪರಿಹಾರ ಕಂಡುಕೊಂಡಿದ್ದೇವೆ. ಅದಕ್ಕೆ ಕೊಂಚ ಕಾಲಾವಕಾಶದ ಅಗತ್ಯವಿದೆ. ಶೀಘ್ರವೇ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದು ಸಚಿವರು ಸದನದಲ್ಲಿ ತಿಳಿಸಿದರು.////

 

 

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚನ್ನಮ್ಮ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು: ಸಚಿವ ಎಂ.ಬಿ. ಪಾಟೀಲ 

ಬೆಳಗಾವಿ: ಸುವರ್ಣ ಸೌಧ, ಡಿ.13 : ಶಾಸಕರಾದ ಎನ್.ಹೆಚ್. ಕೊನರೆಡ್ಡಿ ಅವರು ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ವಿಷಯ ಹಾಗೂ ಶ್ರೀನಿವಾಸ ಮಾನೆ ಹಾಗೂ ಎನ್.ಹೆಚ್. ಕೊನರೆಡ್ಡಿ ನೀಡಿದ ಪತ್ರದನ್ವಯ ರಾಜ್ಯದ ಬೃಹತ್ ಕೈಗಾರಿಕಾ ಸಚಿವರಾದ ಎಂ.ಬಿ. ಪಾಟೀಲ ಅವರು ಮಾತನಾಡಿ, ವಿಮಾನ ನಿಲ್ದಾಣಗಳಿಗೆ ನಾಮಕರಣಗೊಳಿಸುವುದು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಒಳಪಡುತ್ತದೆ. ಆದರೂ ಶಾಸಕರ ಬೇಡಿಕೆಯನ್ವಯ ಎರಡೂ ಸದನಗಳಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಬೆಳಗಾವಿಯ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚನ್ಮಮ್ಮ ನಾಮಕರಣಗೊಳಿಸಲು ಗೊತ್ತುವಳಿ ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗುವುದೆಂದು ಸದನದಲ್ಲಿ ಹೇಳಿದರು.
ಶಾಸಕ ಅರವಿಂದ ಬೆಲ್ಲದ ಹಾಗೂ ಬಸನಗೌಡ ಪಾಟೀಲ ಯತ್ನಾಳ ಅವರು ಈ ಸಂದರ್ಭದಲ್ಲಿ ಮಾತನಾಡಿ, ಎರಡೂ ಸದನಗಳ ಸರ್ವ ಸದಸ್ಯರ ಒಪ್ಪಿಗೆ ಇದ್ದು, ತಕ್ಷಣ ಸರ್ಕಾರವು ಈ ಕುರಿತು ಕ್ರಮವಹಿಸಬೇಕೆಂದು ಒತ್ತಾಯಿಸಿದರು.////

ಹಳದಿ ಎಲೆ ಹಾಗೂ ಎಲೆ ಚುಕ್ಕೆ ರೋಗ ನಿವಾರಣೆಗೆ ಸೂಕ್ತ ಕ್ರಮ: ಕೃಷಿ ಸಚಿವ ಚಲುವರಾಯಸ್ವಾಮಿ

ಬೆಳಗಾವಿ: ಸುವರ್ಣ ಸೌಧ, ಡಿ.13:ಶಾಸಕ ಅರಗ ಜ್ಞಾನೇಂದ್ರ ಅವರು ವಿಧಾನಸಭೆಯಲ್ಲಿಂದು ಶೂನ್ಯ ವೇಳೆಯಲ್ಲಿ ಮಾತನಾಡಿ, ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿನ ಪ್ರಮುಖ ಬೆಳೆಯಾಗಿರುವ ಅಡಿಕೆ ಬೆಳೆಗೆ ಕೆಲವು ತಿಂಗಳುಗಳಿAದ ಹಳದಿ ಎಲೆ ರೋಗ ಮತ್ತು ಎಲೆ ಚುಕ್ಕೆ ರೋಗ ತಗಲುತ್ತಿದೆ. ಈ ಕುರಿತು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಸಂಶೋಧನೆಗಾಗಿ ಸರ್ಕಾರ ನೀಡಿರುವ ಅನುದಾನ ಕಡಿಮೆ ಇದ್ದು, ಇನ್ನೂ ಹೆಚ್ಚಿನ ಅನುದಾನ ನೀಡಿ ರೋಗ ನಿವಾರಣೆಗೆ ಕ್ರಮವಹಿಸಬೇಕೆಂದು ಹೇಳಿದರು.
ಇದಕ್ಕೆ ಸದನದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಉತ್ತರಿಸಿ, ಅಡಿಕೆ ಬೆಳೆಗೆ ತಗಲುತ್ತಿರುವ ಎಲೆ ಚುಕ್ಕೆ ಹಾಗೂ ಹಳದಿ ಎಲೆ ರೋಗ ನಿವಾರಣೆಗಾಗಿ ವಿಶ್ವವಿದ್ಯಾಲಯದ ವಿಜ್ಞಾನಿಗಳು ಸಂಶೋಧನೆ ಕೈಗೊಂಡಿದ್ದಾರೆ. ಈಗಾಗಲೇ ಈ ಸಂಶೋಧನಾ ಕಾರ್ಯಕ್ಕಾಗಿ 52 ಲಕ್ಷ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ. ಸಂಶೋಧನೆಗೆ ಹೆಚ್ಚಿನ ಅನುದಾನದ ಅಗತ್ಯವಿದ್ದಲ್ಲಿ ಸರ್ಕಾರ ಬಿಡುಗಡೆ ಮಾಡಲು ಸಿದ್ಧವಿದೆ. ಈ ರೋಗಗಳ ನಿವಾರಣೆಗೆ ಸರ್ಕಾರ ಸೂಕ್ತ ಕ್ರಮವಹಿಸಿದೆ ಎಂದು ಅವರು ತಿಳಿಸಿದರು././//

ಸಾರ್ವಜನಿಕ ಉದ್ಯಮಗಳ ಸಮಿತಿ ವರದಿ ಮಂಡನೆ

ಬೆಳಗಾವಿ: ಸುವರ್ಣ ಸೌಧ, ಡಿ.13:(ಕರ್ನಾಟಕ ವಾರ್ತೆ): ಶಾಸಕ ಯು.ಬಿ.ಬಣಕಾರ್ ಅವರು ಬುಧವಾರ ವಿಧಾನಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಂಬAಧಿಸಿದAತೆ ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ “ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತಕ್ಕೆ ಸಂಬAಧಿಸಿದ ಕಾರ್ಯನಿರ್ವಹಣಾ ಲೆಕ್ಕಪರಿಶೋಧನೆಯ ಮೇಲಿನ ಸಮಿತಿಯ ಶಿಫಾರಸ್ಸುಗಳನ್ನೊಳಗೊಂಡ ಸಾರ್ವಜನಿಕ ಉದ್ಯಮಗಳ ಸಮಿತಿಯ 136ನೇ ವರದಿಯನ್ನು ಸದನದ ಮುಂದೆ ಮಂಡಿಸಿದರು.////

 

ಬಾಲ್ಯವಿವಾಹ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕಾನೂನು ಕ್ರಮ: ಲಕ್ಷ್ಮಿ ಹೆಬ್ಬಾಳಕರ

 

ಬೆಳಗಾವಿ ಸುವರ್ಣವಿಧಾನಸೌಧ ಡಿ.13: ಯಾದಗಿರಿ ಸೇರಿದಂತೆ ರಾಜ್ಯದ ಯಾವುದೇ ಕಡೆಗಳಲ್ಲಿ ಬಾಲ್ಯವಿವಾಹಗಳು ಜರುಗದಂತೆ ಕಾನೂನು ಕ್ರಮ ಬಿಗಿಗೊಳಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಆರ್ ಹೆಬ್ಬಾಳಕರ ಅವರು ಹೇಳಿದರು.
ವಿಧಾನಸಭೆಯಲ್ಲಿ
ಶಾಸಕರಾದ ಶರಣಗೌಡ ಕಂದಕೂರ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಿಷೇಧಿತ ಬಾಲ್ಯವಿವಾಹ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರು ಸಹ ಅವರನ್ನು ರಕ್ಷಿಸುವ ಪ್ರಮೆಯೇ ಇಲ್ಲ. ತಪ್ಪಿತಸ್ಥರನ್ನು ಯಾವುದೇ ಮುಲಾಜಿಲ್ಲದೇ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ತಿಳಿಸಿದರು.
ಯಾದಗಿರಿ ಜಿಲ್ಲೆಯಲ್ಲಿ 2020-2021ರಲ್ಲಿ 1, 2021-22ರಲ್ಲಿ 9 ಹಾಗೂ 2022-23ರಲ್ಲಿ 2 ಪ್ರಕರಣಗಳು ದಾಖಲಾಗಿವೆ. ಈ ಬಗ್ಗೆ ಎಫ್‌ಐಆರ್ ದಾಖಲಾಗಿದ್ದು ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಯುತ್ತಿದೆ. ಬಾಲ್ಯವಿವಾಹ ಸಮಾಜಕ್ಕೆ ಮಾರಕವಾಗಿ ಪರಿಣಮಿಸಿದೆ. ಬಾಲ್ಯವಿವಾಹದಿಂದ ಮುಂದೆ ಆಗುವ ದುಷ್ಪರಿಣಾಮಗಳೇನು ಎಂಬುದರ ಬಗ್ಗೆ ಸಾರ್ವಜನಿಕರು ಅರಿಯಬೇಕು. ಕಾನೂನು ಕ್ರಮಗಳನ್ನು ಪಾಲನೆ ಮಾಡಬೇಕು ಎಂದು ಸಲಹೆ ಮಾಡಿದರು.
ರಾಜ್ಯದಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆಗಾಗಿ ವಿವಿಧ ಇಲಾಖೆಗಳು ಕಾರ್ಯನಿರ್ವಹಿಸುತ್ತಿವೆ. ಮಕ್ಕಳ ಹಕ್ಕುಗಳನ್ನು ಸಂರಕ್ಷಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ ಮತ್ತಿತರ ಸಂಬಂಧಿಸಿದ ಇಲಾಖೆಗಳಲ್ಲದೇ ಸ್ಟೇಟ್ ಕ್ರೈಮ್ ರೆಕಾರ್ಡ್ ಬ್ಯೂರೋ, ಬಾಲ್ಯ ವಿವಾಹ ನಿಷೇಧ ಕೋಶ ಇತ್ಯಾದಿ ಪ್ರಾಧಿಕಾರಗಳು ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗವು ಇವುಗಳ ಮೇಲುಸ್ತುವಾರಿ ಹಾಗೂ ದಾಖಲಾಗುವ ನಿರ್ದಿಷ್ಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಕ್ರಮಕೈಗೊಳ್ಳುತ್ತಿದೆ ಎಂದು ತಿಳಿಸಿದರು.////

 

ವಿದ್ಯಾರ್ಥಿ ವೇತನ ಪಾವತಿಗೆ ಆಯವ್ಯಯದಲ್ಲಿ 105 ಕೋಟಿ ಅನುದಾನ ನಿಗದಿ: ಶಿವರಾಜ ತಂಗಡಗಿ

 

ಬೆಳಗಾವಿ ಸುವರ್ಣವಿಧಾನಸೌಧ ಡಿ.13: 2023-24ನೇ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಕಾರ್ಯಕ್ರಮಕ್ಕೆ ಕೇಂದ್ರದ ಪಾಲು 40 ಕೋಟಿ ರೂ ಮತ್ತು ರಾಜ್ಯದ ಪಾಲು 65 ಕೋಟಿ ರೂ. ಸೇರಿ 105 ಕೋಟಿ ರೂ. ಅನುದಾನವನ್ನು ಆಯವ್ಯಯದಲ್ಲಿ ನಿಗದಿಪಡಿಸಲಾಗಿದೆ. ಮಾರ್ಗಸೂಚಿಯನುಸಾರ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಾವತಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಅವರು ಹೇಳಿದರು.
2023-24ನೇ ಸಾಲಿನಲ್ಲಿ ಲಭ್ಯವಿರುವ ಅನುದಾನಕ್ಕೆ ಅನುಗುಣವಾಗಿ ಅರ್ಹ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಾವತಿಸಲಾಗುತ್ತಿದೆ ಎಂದು ಸಚಿವರು ಶಾಸಕರಾದ ತಮ್ಮಯ್ಯ ಹೆಚ್ ಡಿ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
*ಅನುದಾನ ಬಿಡುಗಡೆಗೆ ಕ್ರಮ:* ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ನಡೆಯುತ್ತಿರುವ ವಸತಿ ನಿಲಯಗಳ ಕಟ್ಟಡ ನಿರ್ವಹಣೆಗೆ ಅಗತ್ಯಕ್ಕೆ ತಕ್ಕಂತೆ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಬೇರೆ ಬೇರೆ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡುವ ಪ್ರಸ್ತಾವನೆಗಳ ಬಗ್ಗೆ ಪರಿಶೀಲಿಸಿ ಅನುದಾನ ಲಭ್ಯತೆಯ ಆಧಾರದ ಮೇಲೆ ಹಣ ಬಿಡುಗಡೆ ಕ್ರಮ ವಹಿಸಲಾಗುವುದು ಎಂದು ಸಚಿವರು ತಿಳಿಸಿದರು.
2023-24ನೇ ಸಾಲಿನಲ್ಲಿ ಇಲಾಖೆಯ ಒಟ್ಟು 1203 ವಿದ್ಯಾರ್ಥಿನಿಲಯಗಳ ಕಟ್ಟಡ ದುರಸ್ತಿ ಕಾಮಗಾರಿಗಳನ್ನು 150 ಕೋಟಿಗಳ ವೆಚ್ಚದಲ್ಲಿ ಕೈಗೊಳ್ಳಲು ಮಂಜೂರಾತಿ ನೀಡಿದ್ದು ಇವುಗಳಲ್ಲಿ ಬಂಗಾರಪೇಟೆಯ 03 ವಿದ್ಯಾರ್ಥಿ ನಿಲಯ ಕಟ್ಟಡಗಳ ದುರಸ್ತಿ ಕಾಮಗಾರಿಗಳು ಒಳಗೊಂಡಿರುತ್ತವೆ ಎಂದು ಸಚಿವರು, ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದರು.
175 ಕೋಟಿ ಅನುದಾನ: ಸ್ವಂತ ಕಟ್ಟಡಗಳ ನಿರ್ಮಾಣವನ್ನು ಆಯವ್ಯಯದಲ್ಲಿ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣ ಕಾರ್ಯಕ್ರಮದಡಿ ಒದಗಿಸಲಾಗುತ್ತಿರುವ ಅನುದಾನದಲ್ಲಿ ಕೈಗೊಳ್ಳಲಾಗುತ್ತಿದ್ದು, 2023-24ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯ ವಿದ್ಯಾರ್ಥಿ ನಿಲಯಗಳ ಕಟ್ಡಡ ನಿರ್ಮಾಣ ಕಾರ್ಯಕ್ರಮದಡಿ 175 ಕೋಟಿ ರೂ. ಅನುದಾನ ಒದಗಿಸಲಾಗಿದೆ ಎಂದು ಸಚಿವರು, ಶಾಸಕರಾದ ಚಿಮ್ಮನಕಟ್ಟಿ ಬಿಬಿ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ್ದಾರೆ.///.

 

ರೈತರಿಗೆ ಶೀಘ್ರ ಬೆಳೆವಿಮೆ ಪರಿಹಾರ: ಚಲುವರಾಯಸ್ವಾಮಿ

 

ಬೆಳಗಾವಿ ಸುವರ್ಣವಿಧಾನಸೌಧ ಡಿ.13 : ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ 2023ರ ಮುಂಗಾರು ಹಂಗಾಮಿನ ಬೆಳೆ ಕಟಾವು ಪ್ರಯೋಗಗಳು ಅಂತಿಮ ಹಂತದಲ್ಲಿದ್ದು ಬೆಳೆ ಕಟಾವು ಪ್ರಯೋಗಗಳ ಅಂತಿಮ ಇಳುವರಿ ಆಧಾರದ ಮೇಲೆ ಇಳುವರಿ ಕೊರತೆಗಣುಗುಣವಾಗಿ ಬೆಳೆ ವಿಮೆ ಪರಿಹಾರ ಲೆಕ್ಕಚಾರ ಮಾಡಿ ವಿಮಾ ಸಂಸ್ಥೆಯವರಿಂದ ಕಾಲಮಿತಿಯಲ್ಲಿ ಇತ್ಯರ್ಥಪಡಿಸಲು ಕ್ರಮ ಜರುಗಿಸಲಾಗುತ್ತಿದೆ ಎಂದು ಕೃಷಿ ಸಚಿವರಾದ ಚೆಲುವರಾಯಸ್ವಾಮಿ ತಿಳಿಸಿದರು.
ಶಾಸಕರಾದ ಶರಣು ಸಲಗರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ 2023ರ ಮುಂಗಾರು ಹಂಗಾಮಿನಲ್ಲಿ ವಿವಿಧ ಬೆಳೆಗಳಿಗೆ ರೈತರು ನೋಂದಣಿ ಮಾಡಿಕೊಂಡಿರುತ್ತಾರೆ. ನಿರ್ಧಿಷ್ಟ ಪ್ರಕೃತಿ ವಿಕೋಪದಡಿ ಬೆಳೆ ನಷ್ಟ ಉಂಟಾದ ಕುರಿತು ಅನುಷ್ಠಾನ ವಿಮಾ ಸಂಸ್ಥೆಗೆ ಮಾಹಿತಿ ನೀಡಲಾಗಿದೆ. ಈ ಮಾಹಿತಿ ಕುರಿತು ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ಪರಿಷ್ಕೃತ ಮಾರ್ಗಸೂಚಿಯನ್ವಯ ಜಿಲ್ಲಾಮಟ್ಟದ ಜಂಟಿ ಸಮಿತಿಯು ಜಂಟಿ ಸಮೀಕ್ಷೆಯನ್ನು ಕೈಗೊಂಡು ಸಮೀಕ್ಷೆಯ ವರದಿಯನ್ವಯ ಬೆಳೆ ವಿಮೆ ಪರಿಹಾರ ಮೊತ್ತವನ್ನು ಇತ್ಯರ್ಥಪಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿರುತ್ತದೆ.
ಬಸವಕಲ್ಯಾಣ ಮತಕ್ಷೇತ್ರದಲ್ಲಿ ಸೋಯಾ ಅವರೇ ಮಳೆಯಾಶ್ರೀತ ಬೆಳೆಗಳನ್ನು ಅಧೀಸೂಚಿಸಲಾಗಿದೆ. ಸೋಯಾ ಅವರೆ ಬೆಳೆಗೆ 24,240 ರೈತರು ಮತ್ತು ತೊಗರಿ ಬೆಳೆಗೆ 23,386 ರೈತರು ನೋಂದಾಣಿ ಮಾಡಿರುತ್ತಾರೆ. ಸೆಪ್ಟೆಂಬರ್ ಮತ್ತಿ ಅಕ್ಟೋಬರ್ 2023ರ ಮಾಹೆಯಲ್ಲಿ ಬಿದ್ದಂತಹ ಹೆಚ್ಚಿನ ಮಳೆಯಿಂದ ಬಸವಕಲ್ಯಾಣ ಮತಕ್ಷೇತ್ರದಲ್ಲಿ ಸೋಯಾ ಅವರೇ ಬೆಳೆಗೆ ಒಟ್ಟು 1556 ರೈತರಿಂದ ಮತ್ತು ತೊಗರಿ ಬೆಳೆಗೆ 1249 ರೈತರಿಂದ ಸ್ಥಳ ನಿರ್ಧಿಷ್ಟ ಪ್ರಕೃತಿ ವಿಕೋಪದಡಿ ಬೆಳೆನಷ್ಟ ಉಂಟಾದ ಕುರಿತು ಅನುಷ್ಠಾನ ವಿಮಾ ಸಂಸ್ಥೆಗೆ ಮಾಹಿತಿ ನೀಡಲಾಗಿದೆ ಎಂದು ಸಚಿವರು ಶಾಸಕರ ಪ್ರಶ್ನೆಗೆ ಉತ್ತರಿಸಿದರು.
ಬಸವಕಲ್ಯಾಣ ಮತಕ್ಷೇತ್ರದಲ್ಲಿ ಮಳೆ ಕೊರತೆಯಿಂದ ಸೋಯಾ ಅವರೆ ತೊಗರಿ ಬೆಳೆ ಹಾಳಾಗಿದ್ದು ರೈತರ ವಿಮಾ ಖಾತೆಗೆ ಬೆಳೆ ವಿಮೆ ಹಣ ಜಮೆಯಾಗುವಲ್ಲಿ ವಿಳಂಬವಾಗುತ್ತಿದ್ದು ವಿವರ ನೀಡುವಂತೆ ಶಾಸಕರ ಕೇಳಿದ ಪ್ರಶ್ನೆಗೆ ಸಚಿವರು ಪ್ರತಿಕ್ರಿಯಿಸಿದ್ದಾರೆ.////

 

 

ಬೆಳಗಾವಿಯಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಸರ್ಕಾರ ಸಿದ್ದ
ಸಚಿವ ಬಿ.ನಾಗೇಂದ್ರ

 

ಸುವರ್ಣಸೌಧ ಬೆಳಗಾವಿ ಡಿ.13: ಬೆಳಗಾವಿ ತಾಲ್ಲೂಕಿನ ಯಳ್ಳೂರು ಗ್ರಾಮದ ಬಳಿಯ ಸರ್ಕಾರಿ ಜಾಗದಲ್ಲಿ, ಸುಸಜ್ಜಿತ ಅಂತರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಸರ್ಕಾರ ಸಿದ್ದವಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ.ನಾಗೇಂದ್ರ ಹೇಳಿದರು.
ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಬುಧುವಾರ ವಿಧಾನಸಭೆ ಕಲಾಪದ ಪ್ರಶ್ನೋತ್ತರ ವೇಳೆ ಶಾಸಕ ಅಭಯ ಪಾಟೀಲ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು.
ಕೇಂದ್ರ ಸರ್ಕಾರ ಒದಗಿಸುವ ಅನುದಾನದ ಜೊತೆ ರಾಜ್ಯ ಸರ್ಕಾರವು ಅನುದಾನ ನೀಡಿ ಕ್ರೀಡಾಂಗಣ ನಿರ್ಮಿಸಲು ಯಾವುದೆ ಅಡ್ಡಿಯಿಲ್ಲ. ಯಳ್ಳೂರು ಗ್ರಾಮದ ರಿ.ಸ.ನಂ 1142ರ 66 ಎಕರೆ ಪೈಕಿ 40 ಎಕರೆ ಜಮೀನು ಕ್ರೀಡಾ ಇಲಾಖೆ ಹಸ್ತಾಂತರವಾಗಿದೆ. ಪಾರ್ಕಿಂಗ್ ಒಳಗೊಂಡಂತೆ ಸುಸಜ್ಜಿತ ಕ್ರೀಡಾಂಗಣ ನಿರ್ಮಿಸಲು ಕನಿಷ್ಠ 55 ಎಕರೆ ಜಮೀನಿ ಅವಶ್ಯಕತೆಯಿದೆ. ಈಗಾಗಲೇ ಜಮೀನು ಹಸ್ತಾಂತರ ಪ್ರಕ್ರಿಯೆ ಸಲುವಾಗಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ 11 ಅಧಿಕಾರಿಗಳ ಸಮಿತಿ ರಚನೆ ಮಾಡಲಾಗಿದೆ. ಸ್ಥಳೀಯ ಶಾಸಕರು ಅವಶ್ಯ ಇರುವ 15 ಎಕರೆ ಜಮೀನು ಒದಗಿಸಿದರೆ ಶೀಘ್ರವಾಗಿ ಕ್ರೀಡಾಂಗಣ ನಿರ್ಮಾಣದ ಯೋಜನೆ ರೂಪಿಸಲಾಗುವುದು ಎಂದು ಸಚಿವ ಬಿ.ನಾಗೇಂದ್ರ ಹೇಳಿದರು.
ಸದ್ಯ ಸರ್ಕಾರಿ ಜಮೀನನಲ್ಲಿ ನಿರ್ಮಾಣವಾಗಿರುವ ಶಾಲೆ ಹಾಗೂ ಸರ್ಕಾರದ ಯೋಜನೆಗಳಲ್ಲಿ ಬಡವರಿಗೆ ವಿತರಿಸಲಾಗಿರುವ ಮನೆಗಳನ್ನು ಹೊರತು ಪಡಿಸಿ ಉಳಿದ ಖಾಲಿ ಜಾಗವನ್ನು ಕ್ರೀಡಾ ಇಲಾಖೆ ಹಸ್ತಾಂತರಿಸಲಾಗುವುದು. ಇದಕ್ಕೆ ಜನರ ವಿರೋಧವಿಲ್ಲ ಎಂದು ಶಾಸಕ ಅಭಯ ಪಾಟೀಲ್ ಹೇಳಿದರು.

*ತಿಂಗಳ ಒಳಗಾಗಿ ವಿದ್ಯಾರ್ಥಿ ನಿಲಯ ಮಂಜೂರಾತಿ*: ಹೊಸಕೋಟೆಯಲ್ಲಿ ಮೆಟ್ರಿಕ್ ನಂತರ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ ಅಗತ್ಯ ಇರುವ 10000 ಚದುರ ಅಡಿ ಜಾಗವನ್ನು ಒದಗಿಸಿದರೆ, ತಿಂಗಳ ಒಳಗಾಗಿ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ ಮಂಜೂರಾತಿ ನೀಡುವುದಾಗಿ ಸಚಿವ ಬಿ.ನಾಗೇಂದ್ರ ಶಾಸಕ ಶರತ್ ಬಚ್ಚೇಗೌಡ ಅವರ ಪ್ರಶ್ನೆಗೆ ಉತ್ತರಿಸಿದರು.////

 

ಕರ್ನಾಟಕ ವೈದ್ಯಕೀಯ ಕೋರ್ಸಗಳ ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ ತಿದ್ದುಪಡಿ ವಿಧೇಯಕಕ್ಕೆ ಪರಿಷತನಲ್ಲಿ ಅಂಗೀಕಾರ

ಬೆಳಗಾವಿ ಸುವರ್ಣಸೌಧ ಡಿಸೆಂಬರ್ 13: ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ 2023ನೇ ಸಾಲಿನ ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ವಿಧೇಯಕಕ್ಕೆ ವಿಧಾನ ಪರಿಷತ್‌ನಲ್ಲಿ ಡಿಸೇಂಬರ್ 13ರಂದು ಅಂಗೀಕಾರ ದೊರೆಯಿತು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ವಿಧೇಯಕವನ್ನು ಪರ್ಯಾಲೋಸಬೇಕೆಂದು ಕೋರಿದರು. ಅದರಂತೆ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ವಿಧೇಯಕದ ಮೇಲೆ ಚರ್ಚೆಗೆ ಅವಕಾಶ ಕಲ್ಪಿಸಿದರು. ಚರ್ಚೆಯ ಬಳಿಕ ಸಭಾಪತಿಗಳು ವಿಧೇಯಕವನ್ನು ಮತಕ್ಕೆ ಹಾಕಿದರು. ಸದನ ಸದಸ್ಯರು ವಿಧೇಯಕಕ್ಕೆ ಒಪ್ಪಿಗೆ ಸೂಚಿಸಿದರು. ಆರೋಗ್ಯ ಸಚಿವರು ವಿಧೇಯಕವನ್ನು ಅಂಗೀಕರಿಸಲು ಕೋರಿದ ಬಳಿಕ ಸಭಾಪತಿಗಳು ವಿಧೇಯಕವು ಅಂಗೀಕಾರವಾಗಿದೆ ಎಂದು ಘೋಷಿಸಿದರು./////

 

ರಾಜ್ಯದಲ್ಲಿ 187 ಕಪ್ಪು ಸ್ಥಳಗಳು ಅಪಘಾತ ಮುಕ್ತ ಸ್ಥಳಗಳಾಗಿ ಅಭಿವೃದ್ದಿ

 

ಬೆಳಗಾವಿ ಸುವರ್ಣ ಸೌಧ,ಡಿ.13: ಲೋಕೋಪಯೋಗಿ ಇಲಾಖೆ ಸಂಪರ್ಕ ಮತ್ತು ಕಟ್ಟಡಗಳ ವಲಯಗಳಲ್ಲಿನ ಅಡಿಯಲ್ಲಿ ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳಲ್ಲಿನ 187 ಕಪ್ಪು ಸ್ಥಳಗಳನ್ನು ರೂ.23204.42 ಲಕ್ಷ ಅಂದಾಜು ಮೊತ್ತದಲ್ಲಿ ಪಿ.ಆರ್.ಎ.ಎಂ.ಸಿ ವತಿಯಿಂದ ಅಭಿವೃದ್ದಿಪಡಿಸಿ ಅಪಘಾತ ಮುಕ್ತ ಸ್ಥಳಗಳನ್ನಾಗಿಸಲು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಈ ಪೈಕಿ 182 ಕಪ್ಪುಸ್ಥಳಗಳ ಅಭಿವೃಧ್ದಿ ಕಾಮಗಾರಿಗಳು ಪೂರ್ಣಗೊಂಡಿದ್ದು ಬಾಕಿ ಉಳಿದ 5 ಕಾಮಗಾರಿಗಳು ಪ್ರಗತಿಯಲ್ಲಿವೆ. ಇದುವರೆಗೆ ಸದ್ರಿ ಕಪ್ಪು ಸ್ಥಳಗಳ ಅಭಿವೃದ್ದಿಗೆ ರೂ.13841.49 ಲಕ್ಷಗಳನ್ನು ವೆಚ್ಚ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

ಅವರು ಇಂದು ವಿಧಾನಪರಿಷತ್‌ನಲ್ಲಿ ಸದಸ್ಯ ಕೆ.ಎ. ತಪ್ಪೇಸ್ವಾಮಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಲೋಕೋಪಯೋಗಿ ಸಚಿವರ ಪರವಾಗಿ ಉತ್ತರಿಸಿದರು.

ಪಿ.ಆರ್.ಎ.ಎಂ.ಸಿ ವತಿಯಿಂದ ಹಾಗೂ ಲೋಕೋಪಯೋಗಿ ಇಲಾಖೆ ಸಂಪರ್ಕ ಮತ್ತು ಕಟ್ಟಡಗಳ ವಲಯಗಳ ಅಡಿಯಲ್ಲಿನ ವಿಭಾಗಗಳ ವತಿಯಿಂದ ಇಲ್ಲಿಯವರೆಗೆ ಅಭಿವೃದ್ಧಿಪಡಿಸಿರುವ ಒಟ್ಟು 205 ಕಪ್ಪು ಸ್ಥಳಗಳ ಅನುಷ್ಠಾನ್ನೊತ್ತರ ಅಧ್ಯಯನ (Post implementation study) ವನ್ನು ವೈಜ್ಞಾನಿಕವಾಗಿ ಕೈಗೊಳ್ಳಲು ವಿವಿಧ ತಾಂತ್ರಿಕ ಕಾಲೇಜುಗಳಿಗೆ ವಹಿಸಿಕೊಡಲಾಗಿದ್ದು, ಇಲ್ಲಿಯವರೆಗೆ ಅಭಿವೃದ್ಧಿಪಡಿಸಲಾದ 99 ಕಪ್ಪು ಸ್ಥಳಗಳ 3 ವರ್ಷಗಳ ವಾರ್ಷಿಕವಾರು ಅಧ್ಯಯನ ವರದಿಗಳು ಸ್ವೀಕೃತವಾಗಿದ್ದು, ಸದರಿ ಅಧ್ಯಯನ ವರದಿಯನುಸಾರ ಅಭಿವೃದ್ಧಿಪಡಿಸಲಾದ ಕಪ್ಪು ಸ್ಥಳಗಳಲ್ಲಿ ಅಪಘಾತಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿರುವುದು ಕಂಡುಬ0ದಿರುತ್ತದೆ ಎಂದು ತಿಳಿಸಿದರು.

ರಾಜ್ಯದಲ್ಲಿ 2,73,778 ಎಕರೆ/ಗುಂಟೆ ಸರ್ಕಾರಿ ಜಮೀನು ಒತ್ತುವರಿಯಿಂದ ತೆರವು : ಸಚಿವ ಕೃಷ್ಣ ಭೈರೇಗೌಡ

ಬೆಳಗಾವಿ ಸುವರ್ಣ ಸೌಧ,ಡಿ.13(ಕರ್ನಾಟಕ ವಾರ್ತೆ): ರಾಜ್ಯಾದ್ಯಾಂತ 2,73,778 ಎಕರೆ/ಗುಂಟೆ ಸರ್ಕಾರಿ ಜಮೀನನ್ನು ಒತ್ತುವರಿಯಿಂದ ತೆರವುಗೊಳಿಸಲಾಗಿದ್ದು, ರಾಜ್ಯಾದ್ಯಂತ ಒತ್ತುವರಿ ತೆರವು ಕಾರ್ಯಚರಣೆ ಪ್ರಗತಿಯಲ್ಲಿರುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

ಅವರು ಇಂದು ವಿಧಾನಪರಿಷತ್‌ನಲ್ಲಿ ಸದಸ್ಯ ಡಾ: ವೈ.ಎ. ತಿಪ್ಪೇಸ್ವಾಮಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.

ರಾಜ್ಯಾದ್ಯಂತ ಒಟ್ಟು 63,32,486 ಎಕರೆ/ಗುಂಟೆ ಸರ್ಕಾರಿ ಜಮೀನಿದ್ದು, ಇದರಲ್ಲಿ 14,72,493 ಎಕರೆ/ಗುಂಟೆ ಸರ್ಕಾರಿ ಜಮೀನು ಒತ್ತುವರಿ ಇದೆ. ವಿವಿಧ ನ್ಯಾಯಾಲಯಗಳಲ್ಲಿರುವ ಪ್ರಕರಣಗಳು, ಅಕ್ರಮ ಸಕ್ರಮ ಯೋಜನೆ ಮತ್ತು ಸಾರ್ವಜನಿಕ ಉದ್ದೇಶಗಳಿಗೆ ಬಳಕೆಯಾಗಿರುವ ಒಟ್ಟು 10,82,752 ಎಕರೆ/ಗುಂಟೆ ಜಮೀನು ಹೊರತುಪಡಿಸಿ, ಉಳಿದಂತೆ 3,89,741 ಎಕರೆ/ಗುಂಟೆ ಜಮೀನನ್ನು ಒತ್ತುವರಿಯಿಂದ ತೆರವುಗೊಳಿಸಬೇಕಾಗಿದ್ದು, ಇದರಲ್ಲಿ 2,73,778 ಎಕರೆ/ಗುಂಟೆ ಸರ್ಕಾರಿ ಜಮೀನನ್ನು ಒತ್ತುವರಿಯಿದ ತೆರವುಗೊಳಿಸಲಾಗಿದೆ. ಉಳಿದಂತೆ 1,15,963 ಎಕರೆ/ಗುಂಟೆ ಜಮೀನನ್ನು ಒತ್ತುವರಿ ತೆರವುಗೊಳಿಸಲು ಬಾಕಿ ಇದೆ ಎಂದು ತಿಳಿಸಿದರು.

ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದಲ್ಲಿ ಅಕ್ಟೋಬರ್-2023ರ ಅಂತ್ಯಕ್ಕೆ ಒಟ್ಟು 21,712 ಪ್ರಕರಣಗಳು ದಾಖಲಾಗಿದ್ದು, ಇತ್ಯರ್ಥಪಡಿಸಲಾಗಿದೆ. ಪೈಕಿ 16,205 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, 5,507 ಪ್ರಕರಣಗಳು ಬಾಕಿ ಇದೆ. ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದಲ್ಲಿ ವಿವಿಧ ಪ್ರಕರಣಗಳಲ್ಲಿ ಈವರೆಗೂ 75 ಜನರಿಗೆ ಒಂದು ವರ್ಷದಂತೆ ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ.

ಸರ್ಕಾರಿ ಜಮೀನಿನ ಒತ್ತುವರಿಯನ್ನು ತೆರವುಗೊಳಿಸಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ, ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಕಾರ್ಯ ಪಡೆಗಳನ್ನು ರಚಿಸಲಾಗಿದೆ. ಅದರಂತೆ ಎಲ್ಲಾ ಜಿಲ್ಲಾಧಿಕಾರಿಗಳು ಕಾಲಬದ್ಧ ಕ್ರಿಯಾ ಯೋಜನೆ ಸಿದ್ಧಪಡಿಸಿಕೊಂಡು, ಒತ್ತುವರಿ ಆಗಿರುವ ಸರ್ಕಾರಿ ಜಮೀನುಗಳನ್ನು ತೆರವುಗೊಳಿಸಲು ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದರು.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಖಾಸಗಿಯವರಿಂದ ಒಟ್ಟು 23,307 ಪ್ರಕರಣಗಳಲ್ಲಿ 51,555-31.01 ಎಕರೆ/ಗುಂಟೆ ಜಮೀನು ಅತಿಕ್ರಮಣಗೊಂಡಿದ್ದು, 12,434 ಪ್ರಕರಣಗಳಲ್ಲಿ 28,264-19.05 ಎಕರೆ/ಗುಂಟೆ ಜಮೀನು ಒತ್ತುವರಿಯಿಂದ ತೆರವುಗೊಳಿಸಲಾಗಿದೆ.

ಸರ್ಕಾರಿ ಜಮೀನು ಒತ್ತುವರಿ ಮಾಡುವವರಿಗೆ ಸಹಾಯ ಮಾಡುವ ಅಧಿಕಾರಿಗಳ ವಿರುದ್ದ ಎಫ್.ಐ.ಆರ್ ದಾಖಲು ಹಾಗೂ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.////

 

ದೇವಾಲಯಗಳ ವ್ಯವಸ್ಥಾಪನಾ ಸಮಿತಿಯಲ್ಲಿ ವಿಶ್ವಕರ್ಮ ಜನಾಂಗದವರಿಗೆ ಅವಕಾಶ : : ಸಚಿವ ರಾಮಲಿಂಗಾರೆಡ್ಡಿ

 

ಬೆಳಗಾವಿ ಸುವರ್ಣ ಸೌಧ,ಡಿ.13 : ಕಳೆದ ಅಧಿವೇಶನದಲ್ಲಿ ನೀಡಿದ ಅಶ್ವಾಸನೆಯಂತೆ, ದೇವಾಲಯಗಳ ವ್ಯವಸ್ಥಾಪನಾ ಸಮಿತಿಯಲ್ಲಿ ಒಬ್ಬರು ವಿಶ್ವ ಕರ್ಮ ಜನಾಂಗದವರಿಗೆ ಅವಕಾಶ ಮಾಡಿಕೊಡುವ ಬಗ್ಗೆ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ಅಧಿನಿಯಮ 2011ರ ಸೆಕ್ಷನ್ 25ಕ್ಕೆ ಅಗತ್ಯ ತಿದ್ದುಪಡಿ ತರುವ ಸಂಬAಧ ಕರಡು ತಿದ್ದುಪಡಿ ಕಾನೂನು ಮಸೂದೆಯನ್ನು ಸಿದ್ಧಪಡಿಸಿದ್ದು,ಕಾನೂನು ಇಲಾಖೆಯೊಂದಿಗೆ ಸಮಾಲೋಚಿಸಲಾಗುತ್ತಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಅವರು ಇಂದು ವಿಧಾನಪರಿಷತ್‌ನಲ್ಲಿ ಸದಸ್ಯ ಡಾ: ಕೆ.ಪಿ. ನಂಜು0ಡಿ ವಿಶ್ವಕರ್ಮ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ರ ಕಲಂ 25 ರಡಿಯಲ್ಲಿ ವ್ಯವಸ್ಥಾಪನಾ ಸಮಿತಿಗೆ ಸದಸ್ಯರನ್ನಾಗಿ ಒಂದು ದೇವಾಲಯದ ಸಂಬ0ಧದಲ್ಲಿ ಪ್ರಧಾನ ಅರ್ಚಕ ಅಥವಾ ಅರ್ಚಕ. ಅನುಸೂಚಿತ ಜಾತಿ ಅಥವಾ ಅನುಸೂಚಿತ ಬುಡಕಟ್ಟಿಗೆ ಸೇರಿದವರ ಪೈಕಿಯಿಂದ ಕೊನೇ ಪಕ್ಷ ಒಬ್ಬರು.ಇಬ್ಬರು ಮಹಿಳೆಯರು. ಸಂಸ್ಥೆಯು ಇರುವ ಸ್ಥಳದಲ್ಲಿ ವಾಸಿಸುತ್ತಿರುವ ವ್ಯಕ್ತಿಗಳ ಪೈಕಿಯಿಂದ ಕೊನೇ ಪಕ್ಷ-ಒಬ್ಬರು- ಸದಸ್ಯರುಗಳನ್ನು ಹೊಂದಿರತಕ್ಕದ್ದು. ಸಾಮಾನ್ಯ ವರ್ಗಕ್ಕೆ ಸೇರಿದ ಇತರ ನಾಲ್ಕು ಸದಸ್ಯರುಗಳನ್ನು ಹೊಂದಿರತಕ್ಕದ್ದು.

ಅಧಿಸೂಚಿತ ಸಂಸ್ಥೆಗಳಿಗೆ ವ್ಯವಸ್ಥಾಪನಾ ಸಮಿತಿಯನ್ನು ಮೇಲಿನಂತೆ ಸಂದರ್ಭಾನುಸಾರ ರಾಜ್ಯ ಧಾರ್ಮಿಕ ಅಥವಾ ಜಿಲ್ಲಾ ಧಾರ್ಮಿಕ ಪರಿಷತ್ ವತಿಯಿಂದ ಕಾಯ್ದೆಯ ಸೆಕ್ಷನ್ 25 ರಡಿಯಲ್ಲಿ ನೇಮಕ ಮಾಡಲಾಗುತ್ತಿದೆ. ವ್ಯವಸ್ಥಾಪನಾ ಸಮಿತಿಗೆ ಸದಸ್ಯರನ್ನು ಮೇಲ್ಕಂಡ0ತೆ ನಿಗಧಿಪಡಿಸಿರುವ ಮೀಸಲಾತಿಯನ್ವಯ ನೇಮಕ ಮಾಡಬೇಕಾಗಿರುತ್ತದೆ.

ದೇವಾಲಯಗಳ ವ್ಯವಸ್ಥಾಪನಾ ಸಮಿತಿಯಲ್ಲಿ ಒಬ್ಬರು ವಿಶ್ವಕರ್ಮ ಜನಾಂಗದವರಿಗೆ ಅವಕಾಶ ಮಾಡಿಕೊಡುವ ಬಗ್ಗೆ ಕಾನೂನು ಇಲಾಖೆಯೊಂದಿಗೆ ಸಮಾಲೋಚಿಸಲಾಗುತ್ತಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಯವರ ಒಂದು ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಯಡಿ 57809 ಅರ್ಜಿ ಸ್ವೀಕಾರ: : ಸಚಿವ ಜಮೀರ್ ಅಹಮದ್ ಖಾನ್

ಬೆಳಗಾವಿ ಸುವರ್ಣ ಸೌಧ,ಡಿ.13(ಕರ್ನಾಟಕ ವಾರ್ತೆ): ಮುಖ್ಯಮಂತ್ರಿಯವರ ಒಂದು ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಯಡಿ 23-11-2023 ರ ವರೆಗೆ ಆನ್‌ಲೈನ್ ಮೂಲಕ 57809 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ತಿಳಿಸಿದರು.

ಅವರು ಇಂದು ವಿಧಾನಪರಿಷತ್‌ನಲ್ಲಿ ಸದಸ್ಯ ಕೆ.ಅಬ್ದುಲ್ ಜಬ್ಬಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.

ಮುಖ್ಯ ಮಂತ್ರಿಯವರ ಒಂದು ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಯಡಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳು ಆರಂಭಿಕ ಠೇವಣಿಯನ್ನು ಪಾವತಿಸಿದ ನಂತರ ಫಲಾನುಭವಿಗಳೇ ಸ್ವತಃ ತಮ್ಮ ಫ್ಲಾಟ್‌ಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್-ಲೈನ್ ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಅದರಂತೆ ಆರಂಭಿಕ ಠೇವಣಿಯನ್ನು ಪಾವತಿಸಿ,11,568 ಫಲಾನುಭವಿಗಳು ಫ್ಲಾಟ್‌ಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ಈ ಯೋಜನೆಯನ್ನು ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಮಾತ್ರ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಡಿ ಈವರೆಗೆ ಪೂರ್ಣಗೊಳಿಸಿರುವ ಒಟ್ಟು 1150 ಪ್ಲಾಟ್ ಗಳಿಗೆ ಪ್ರತ್ಯೇಕ ಇ ಖಾತೆಯನ್ನು ಪಡೆಯುವ ಪ್ರಕ್ರಿಯೆಯು ಪ್ರಗತಿಯಲ್ಲಿದೆ. ಈಗಾಗಲೇ ಇ-ಖಾತೆಯನ್ನು ಪಡೆದಿರುವ ಪ್ಲಾಟ್ ಗಳ ಫಲಾನುಭವಿಗಳಿಗೆ ಉಳಿಕೆ ಹಣವನ್ನು ಪಾವತಿಸುವಂತೆ ಬೇಡಿಕೆ ಪತ್ರವನ್ನು ಕಳುಹಿಸಲಾಗಿದ್ದು, ಫಲಾನುಭವಿಗಳು ಪೂರ್ಣ ಹಣವನ್ನು ಪಾವತಿಸಿದ ನಂತರ ಪ್ಲಾಟ್ ಗಳನ್ನು ನೊಂದಣಿ ಮಾಡಿಸಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುತ್ತದೆ , ಫಲಾನುಭವಿ ವಂತಿಕೆಯನ್ನು ಭರಿಸಲು ಅನುಕೂಲವಾಗುವಂತೆ ಅವರುಗಳಿಗೆ ಬ್ಯಾಂಕ್ ಸಾಲವನ್ನು ಕೊಡಿಸಲು ಕ್ರಮವಹಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಪ್ರಸಕ್ತ ವರ್ಷದಲ್ಲಿ ರಾಜ್ಯದಲ್ಲಿ 3 ಲಕ್ಷ ಮನೆ ನಿರ್ಮಾಣ ಗುರಿ: : ಸಚಿವ ಜಮೀರ್ ಅಹಮದ್ ಖಾನ್

ಬೆಳಗಾವಿ ಸುವರ್ಣ ಸೌಧ,ಡಿ.13(ಕರ್ನಾಟಕ ವಾರ್ತೆ): ರಾಜ್ಯದಲ್ಲಿ ವಿವಿಧ ವಸತಿ ಯೋಜನೆಗಳಡಿ ಹಿಂದಿನ ಶ್ರೇಣಿಗಳಲ್ಲಿ ಪ್ರಗತಿಯಲ್ಲಿದ್ದ ಮನೆಗಳನ್ನು ಒಳಗೊಂಡ0ತೆ 2023-24 ನೇ ಆರ್ಥಿಕ ವರ್ಷದಲ್ಲಿ 3 ಲಕ್ಷ ಮನೆಗಳನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದ್ದು, 28-11-2023 ಕ್ಕೆ 1,12,891 ಮನೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ತಿಳಿಸಿದರು.

ಅವರು ಇಂದು ವಿಧಾನಪರಿಷತ್‌ನಲ್ಲಿ ಸದಸ್ಯ ಸುನೀಲ್ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.

ರಾಜ್ಯದಲ್ಲಿ ಪ್ರಸ್ತುತ ಗ್ರಾಮೀಣ ಪ್ರದೇಶದಲ್ಲಿ 18,92,756 ವಸತಿ ರಹಿತರು ಹಾಗೂ 7,13,950 ನಿವೇಶನ ರಹಿತರು ಕಂಡು ಬಂದಿರುತ್ತಾರೆ. ವಸತಿ ರಹಿತ ಕುಟುಂಬಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಲು ಸರ್ಕಾರವು ವಿವಿದ ವಸತಿ ಯೋಜನೆಗಳಡಿ ಗ್ರಾಮ ಪಂಚಾಯಿತಿ/ನಗರ ಸ್ಥಳೀಯ ಸಂಸ್ಥೆಗಳಿಗೆ ಗುರಿ ಹಂಚಿಕೆ ಮಾಡಿ ಅರ್ಹ ಫಲಾನುಭವಿಗಳಿಗೆ ವಸತಿ ಕಲ್ಪಿಸಲಾಗುತ್ತಿದೆ. 2020-21 ರಿಂದ 2022-23 ನೇ ಸಾಲಿನವರೆಗೆ ವಿವಿಧ ವಸತಿ ಯೋಜನೆಗಳಡಿ ಒಟ್ಟಾರೆ 6,35,412 ಮನೆಗಳ ಗುರಿ ಹಂಚಿಕೆ ಮಾಡಲಾಗಿದ್ದು, ಈವರೆಗೆ 4,07,923 ಮನೆಗಳಿಗೆ ಮಂಜೂರಾತಿ ನೀಡಲಾಗಿದೆ ಎಂದು ತಿಳಿಸಿದರು.////

 

ಆಧಿವೇಶನದ ನಡುವೆಯೂ ಸರ್ಕಾರಿ ಶಾಲೆಗಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ : ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ ಭರವಸೆ ಈಡೇರಿಸಿದ ಶಿಕ್ಷಣ ಸಚಿವರು

 

ಬೆಳಗಾವಿ: ನಗರದಲ್ಲಿ ನಡೆಯುತ್ತಿರುವ ಚಳಿಗಾಲದ ಆಧಿವೇಶನದ ನಡುವೆಯೂ ಸರ್ಕಾರಿ ಶಾಲೆಗಳಿಗೆ ಶಾಲಾ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್ ಮಧು ಬಂಗಾರಪ್ಪ ಅವರು ಭೇಟಿ ನೀಡಿ, ಮಕ್ಕಳ ಸಮಸ್ಯೆಗಳಿಗೆ ಧನಿಯಾಗಿದ್ದಾರೆ.

ಇಂದು ಬೆಳಿಗ್ಗೆ ನಗರದ ಖಂಜರಗಲ್ಲಿ, ವೀರಭದ್ರ ನಗರದ ಉರ್ದು ಶಾಲೆ, ಸರ್ದಾರ್ ಪ್ರೌಢಶಾಲೆ ಹಾಗೂ ಕಿತ್ತೂರು ತಾಲ್ಲೂಕಿನ ಹುಲಿಕಟ್ಟಿ ಮತ್ತು ಕಾದರವಳ್ಳಿ ಶಾಲೆಗೆ ಭೇಟಿ ನೀಡಿದರು.

ಶತಮಾನ ಕಂಡಿರುವ ಖಂಜರಗಲ್ಲಿಯಲ್ಲಿರುವ ಉರ್ದು ಶಾಲೆಯಲ್ಲಿ ಮಕ್ಕಳೊಂದಿಗೆ ಪ್ರಾರ್ಥನೆಯಲ್ಲಿ ಪಾಲ್ಗೊಂಡು, ಸಂವಿಧಾನ ಪೀಠಿಕೆ ಓದುವಿಕೆಯನ್ನು ನೋಡಿ ಸಂತಸ ವ್ಯಕ್ತಪಡಿಸಿದರು.

ನಿತ್ಯ ಶಾಲಾ ಮಕ್ಕಳಿಗೆ ವಿದ್ಯಾರ್ಥಿನಿಯರಿಗೆ ಕ್ಷೀರಭಾಗ್ಯ ಯೋಜನೆಯಡಿಯ ಬಿಸಿ ಹಾಲು ವಿತರಿಸಿ, ಸದೃಢವಾದ ಆರೋಗ್ಯದಿಂದರಲು ತಿಳಿಸಿದರು.

ಇನ್ನು ವೀರಭದ್ರನಗರದಲ್ಲಿ ನ ಉರ್ದು ಶಾಲೆಯಲ್ಲಿ 1 ರಿಂದ 7 ನೇ ತರಗತಿಯವರೆಗೆ 254 ವಿದ್ಯಾರ್ಥಿಗಳು ಓದುತ್ತಿರುವುದನ್ನು ಕಂಡು ಸಂತಸ ವ್ಯಕ್ತಪಡಿಸಿದರು.

ಶಾಲೆಯಲ್ಲಿ ಮಕ್ಕಳಿಗೆ ಸಿಗುತ್ತಿರುವ ಸೌಲಭ್ಯಗಳನ್ನು ಪರಿಶೀಲಿಸಿ, ಶಾಲೆಗೆ ಕೂಡಲೇ ಬೆಂಚ್ ಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು. ಈ ವೇಳೆ ಇದೇ ಶಾಲೆಯಲ್ಲಿ ಪ್ರೌಢಶಾಲೆ ಆರಂಭಿಸಬೇಕು ಎನ್ನುವ ಪೋಷಕರ ಪ್ರಶ್ನೆ ಸಕಾರಾತ್ಮಕವಾಗಿ ಸ್ಪಂದಿಸಿ, ಸ್ಥಳೀಯ ಶಾಸಕರಿಗೆ ಶಾಲೆಯ ಸಮಗ್ರ ಮಾಹಿತಿ ಸಂಗ್ರಹಿಸಿ, ಸಚಿವರಿಗೆ ನೀಡಲು ಸಲಹೆ ನೀಡಿದರು.

ಅಲ್ಲದೇ ಇದೇ ವೇಳೆ 173 ವರ್ಷ ಪೂರೈಸಿರುವ ಸರದಾರ ಶಾಲೆಗೆ ಭೇಟಿ ನೀಡಿ, ಬ್ರಿಟಿಷ ಶೈಲಿಯ ಕಟ್ಟಡ ಹೊಂದಿರುವುದನ್ನು ಗಮನಿಸಿ, ಶಾಲೆಯಲ್ಲಿನ ವಿದ್ಯಾರ್ಥಿಗಳೊಂದಿಗೆ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಸಂವಾದ ನಡೆಸಿದರು. ಇಂತಹ ಪಾರಂಪರಿಕ ಶಾಲೆಗಳನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬಿಸಿಯೂಟ ಸವಿದು ಮಕ್ಕಳಿಗೆ ನೀಡಿದ್ದ ಭರವಸೆ ಈಡೇರಿಸಿದ ಸಚಿವರು :

ಆಧಿವೇಶನ ವೀಕ್ಷಣೆಗೆ ತೆರಳಿದ್ದ ಕಿತ್ತೂರು ತಾಲ್ಲೂಕಿನ ಹುಲಿಕಟ್ಟಿ ಗ್ರಾಮದ ಮಕ್ಕಳನ್ನು ಭೇಟಿ ಮಾಡಿದ್ದ ಸಚಿವ ಮಧು ಬಂಗಾರಪ್ಪ ಅವರು, ಆಧಿವೇಶನ ಮುಗಿಯುವ ನಡುವೆ ನಿಮ್ಮ ಶಾಲೆಗೆ ಬರುತ್ತೇನೆ. ನಿಮ್ಮ ಶಾಲೆಯಲ್ಲಿಯೇ ನಿಮ್ಮನ್ನು ಭೇಟಿ ಮಾಡಿ, ನಿಮ್ಮ ಶಾಲೆಯಲ್ಲಿ ನೀಡುವ ಬಿಸಿಯೂಟವನ್ನು ಮಾಡೋಣ ಎಂದು ಭರವಸೆ ನೀಡಿದ್ದರು. ಅದರಂತೆ ಶಿಕ್ಷಣ ಸಚಿವರು, ಹುಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಗೆ ತೆರಳಿ ಮಕ್ಕಳ ಜೊತೆ ಕುಳಿತು ಊಟ ಮಾಡುವ ಮೂಲಕ ಮಕ್ಕಳಿಗೆ ನೀಡಿದ್ದ ಭರವಸೆ ಈಡೇರಿಸಿದ್ದಾರೆ.

ಈ ಸಂದರ್ಭದಲ್ಲಿ ಜಂಟಿ ನಿರ್ದೇಶಕರಾದ ಎಂ ಎಂ ಸಿಂಧೂರ, ಉಪನಿರ್ದೇಶಕರಾದ ಮೋಹನಕುಮಾರ ಹಂಚಾಟೆ, ಪ್ರಭಾರ ಉಪನಿರ್ದೇಶಕರಾದ ರವಿ ಭಜಂತ್ರಿ, ಬೆಳಗಾವಿ ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಲೀಲಾವತಿ ಎಸ್ ಹಿರೇಮಠ, ಕ್ಷೇತ್ರ ಸಮನ್ವಯಾಧಿಕಾರಿ ಆಯ್ ಡಿ ಹಿರೇಮಠ, ಇಸಿಓ, ಬಿ.ಆರ್.ಪಿ, ಸಿ.ಆರ್.ಪಿಗಳು ಮತ್ತು ನಗರ ಸೇವಕರು ಎಸ್ ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಗೂ ಪಾಲಕರು ಮತ್ತಿತರರು ಉಪಸ್ಥಿತರಿದ್ದರು.////

 

ಮೊದಲ ಕಂತಿನ ಪೂರಕ ಅಂದಾಜು ವೆಚ್ಚಗಳಿಗೆ ವಿಧಾನಸಭೆ ಅಂಗೀಕಾರ

ಬೆಳಗಾವಿ: ಸುವರ್ಣ ಸೌಧ, ಡಿ.13: ಬೆಳಗಾವಿ ಚಳಿಗಾಲದ ಅಧಿವೇಶನದ ವಿಧಾನಸಭಾ ಕಲಾಪದಲ್ಲಿ ಬುಧವಾರ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2023-24ನೇ ಸಾಲಿನ ಮೊದಲನೇ ಪೂರಕ ಅಂದಾಜುಗಳ ವೆಚ್ಚ ರೂ.3542.10 ಕೋಟಿಗಳಿಗೆ ಅಂಗೀಕಾರ ದೊರಕಿದೆ.
ಸದನದ ಅಂಗೀಕಾರ ಕೋರಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಹಿಂದೆ ಜುಲೈನಲ್ಲಿ ರೂ.3,41,321 ಕೋಟಿಗಳ ಆಯವ್ಯಯ ಮಂಡಿಸಲಾಗಿತ್ತು. ಆಯವ್ಯಯದಲ್ಲಿ ಘೋಷಿಸಿದ ಹೊರತಾಗಿ ಸರ್ಕಾರದ ಕೆಲವು ಖರ್ಚುಗಳಿಗೆ ರಾಜ್ಯದ ತುರ್ತ ನಿಧಿಯಡಿ ಅನುದಾನವನ್ನು ಒದಗಿಸಲಾಗಿದೆ. ಹೀಗೆ ವೆಚ್ಚ ಮಾಡಿದ ಮೊಬಲಗನ್ನು ತೋರಿಸುವ ಪೂರಕ ಅಂದಾಜು ವಿವರಣೆಯನ್ನು ರಾಜ್ಯದ ಸದನದಲ್ಲಿ ಇಟ್ಟು ಒಪ್ಪಿಗೆ ಪಡೆದುಕೊಳ್ಳಬೇಕು. ಇದಕ್ಕೆ ಸಂವಿಧಾನದ 205(1)(ಎ) ಅನುಚ್ಛೇದ ಅವಕಾಶ ಕಲ್ಪಿಸಿದೆ. ಈಗ ಮಂಡಿಸಿದ ಪೂರಕ ಅಂದಾಜಿನ ಗಾತ್ರ 2023-24ರ ಆಯವ್ಯಯದ ಶೇ.1 ರಷ್ಟು ಮಾತ್ರ ಎಂದರು.
ಮೊದಲನೇ ಪೂರಕ ಅಂದಾಜಿನಲ್ಲಿ ಒದಗಿಸಿರುವ ಒಟ್ಟು ಮೊತ್ತ ರೂ.3542.10 ಕೋಟಿಯಲ್ಲಿ ರೂ.17.66 ಕೋಟಿ ಪ್ರಭೃತ ವೆಚ್ಚ ಮತ್ತು ರೂ.3524.44 ಕೋಟಿ ಪುರಸ್ಕೃತ ವೆಚ್ಚಗಳು ಸೇರಿವೆ. ಇದರಲ್ಲಿ ರೂ.326.98 ಕೋಟಿ ರಿಸರ್ವ ಫಂಡ್ ಠೇವಣಿ ಹಾಗೂ ಎಸ್.ಎನ್.ಎ ಖಾತೆಗಳಿಂದ ಭರಿಸಲಾಗುವುದು. ರೂ.684.28 ಕೋಟಿ ಕೇಂದ್ರ ಸರ್ಕಾರ ಸಹಾಯಕ್ಕೆ ಸಂಬAಧಿಸಿವೆ ಎಂದರು.
ಪೂರಕ ಅಂದಾಜಿನಲ್ಲಿ ರೂ.915 ಕೋಟಿ ಬಂಡವಾಳ ವೆಚ್ಚವಾಗಿ ಅಭಿವೃದ್ಧಿ ಕಾರ್ಯಗಳಿಗೆ ವ್ಯಯಿಸಲಾಗುವುದು. ಸಮಾಜ ಕಲ್ಯಾಣ ಇಲಾಖೆಯ ಎಸ್.ಇ.ಪಿ ಹಾಗೂ ಟಿ.ಎಸ್.ಪಿ ಯೋಜನಗೆ ರೂ.508 ಕೋಟಿ, ರಾಜ್ಯ ವಿಪತ್ತು ನಿರ್ವಹಣೆ ಪ್ರಾಧಿಕಾರಕ್ಕೆ ರೂ.502 ಕೋಟಿ, ಸಮಗ್ರ ಶಿಶು ಅಭಿವೃದ್ದಿ ಯೋಜನೆಗೆ ರೂ.310 ಕೋಟಿ, ರಾಷ್ಟಿçÃಯ ಆಹಾರ ಭದ್ರತಾ ಯೋಜನೆಯ ಸಾಗಣಿಕೆ ವೆಚ್ಚಗಳಿಗೆ ರೂ.297 ಕೋಟಿ, ಎಸ್.ಸಿ.ಡಿ.ಎಸ್‌ಗೆ ರೂ.284 ಕೋಟಿ, ಉಗ್ರಾಣ ನಿಗಮಕ್ಕೆ ಸಾಲವಾಗಿ ರೂ.229 ಕೋಟಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಆರೋಗ್ಯ ಕ್ಷೇಮ ಕೇಂದ್ರಗಳಾಗಿ ಮೇಲ್ದರ್ಜೆಗೆ ಏರಿಸಲು ರೂ.189 ಕೋಟಿ, ನಬಾರ್ಡ ರಸ್ತೆಗಳಿಗೆ ರೂ.150 ಕೋಟಿ, ಕೇಂದ್ರದ ಹದಿಹರಿಯದ ಗ್ರಂಥಾಲಯ ಇ ಲೈಬ್ರರಿಗೆ ಯೋಜನೆಗೆ ರಾಜ್ಯದ ಪಾಲಾಗಿ ರೂ.132 ಕೋಟಿ, ಕೃಷಿ ಭಾಗ್ಯ ಯೋಜನೆಗೆ ರೂ.100 ಸೇರಿದಂತೆ ತೋಟಗಾರಿಕೆ, ಪಶುಸಂಗೋಪನೆ ಮತ್ತು ಮೀನುಗಾರಿಕೆ, ಕಂದಾಯ, ಶಿಕ್ಷಣ, ಆಹಾರ ಮತ್ತು ನಾಗರಿಕ ಸರಬರಾಜು, ವಾಣಿಜ್ಯ ಮತ್ತು ಕೈಗಾರಿಕೆ, ನಗರಾಭಿವೃದ್ಧಿ ಮತ್ತು ವಸತಿ, ಲೋಕೋಪಯೋಗಿ, ನೀರಾವರಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಆರ್ಥಿಕ ಇಲಾಖೆಗಳಿಗೆ ಅನುದಾನ ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದರು.
ರಾಜ್ಯ ಸರ್ಕಾರ ರೂ.39,000 ಕೋಟಿಗಳ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಇದರ ನಡುವೆಯು ಆರ್ಥಿಕ ಶಿಸ್ತು ಕಾಪಾಡಿಕೊಂಡು ಬರಲಾಗಿದೆ. ಹಿಂದಿನ ಸರ್ಕಾರಗಳು ಸಹ ಪೂರಕ ಅಂದಾಜು ಮಂಡಿಸಿವೆ. ಸದನವು 2023-24ನೇ ಸಾಲಿನ ಪೂರಕ ಅಂದಾಜಿಗೆ ಅಂಗೀಕಾರ ನೀಡುವಂತೆ ಕೋರಿದರು. ಪೂರಕ ಅಂದಾಜಿನ ಧನವಿಯೋಗಕ್ಕೆ ಅನುವಾಗುವಂತೆ 2023ನೇ ಸಾಲಿನ ಕರ್ನಾಟಕ ಧನವಿನಯೋಗ ಸಂಖ್ಯೆ-4 ವಿಧೇಯಕವನ್ನು ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದರು.
ಚರ್ಚೆಯ ನಂತರ ಸದನದಲ್ಲಿ ಪೂರಕ ಅಂದಾಜು ಹಾಗೂ ಧನವಿನಯೋಗ ವಿಧೇಯಕಕ್ಕೆ ಅನುಮೋದನೆ ನೀಡಿ ಅಂಗೀಕರಿಸಲಾಯಿತು. ಈವುಗಳು ಇದೇ ಅಧಿವೇಶನದಲ್ಲಿ ವಿಧಾನ ಪರಿಷತ್ ಅಂಗೀಕಾರಕ್ಕಾಗಿ ಚರ್ಚೆಗೆ ಬರಲಿವೆ.////

ಸಂಸತ್ತ ಸದನಕ್ಕೆ ಆಗುಂತಕರ ಪ್ರವೇಶ ಖಂಡಿಸಿ ವಿಧಾನಸಭೆ ನಿರ್ಣಯ ಅಂಗೀಕಾ

 

ಬೆಳಗಾವಿ: ಸುವರ್ಣ ಸೌಧ, ಡಿ.13: ಇಂದು ದೇಶದ ಪ್ರಜಾಪ್ರಭುತ್ವದ ಪವಿತ್ರ ಸ್ಥಳವಾದ ದೆಹಲಿಯ ಸಂಸತ್ತಿನಲ್ಲಿ ಆಗುಂತಕ ವ್ಯಕ್ತಿಗಳು ಸದನಕ್ಕೆ ಪ್ರವೇಶಿಸಿದ್ದು, ಕಳವಳಕಾರಿಯಾಗಿದ್ದು, ಈ ಭದ್ರತಾ ವೈಫಲ್ಯವನ್ನು ಖಂಡಿಸಿ, ಕರ್ನಾಟಕ ವಿಧಾನಸಭೆ ಇಂದು ಸಂಜೆ ಘಟನೆಯನ್ನು ಖಂಡಿಸಿ, ಸದನದಲ್ಲಿ ಖಂಡನಾ ನಿರ್ಣಯ ಅಂಗೀಕರಿಸಿತು.
ಕಲಾಪ ಮಧ್ಯದಲ್ಲಿ ವಿಷಯ ಪ್ರಸ್ತಾಪಿಸಿದ ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ, ಸಂಸತ್ತಿನಲ್ಲಿ ಇಂದು ಅಪರಿಚಿತ, ಆಂಗುತಕರು ಪ್ರವೇಶಿಸಿ, ಭಯ ಹುಟ್ಟಿಸಿರುವುದು ತೀವ್ರ ಖಂಡನೀಯವಾದದ್ದು. ಈ ಘಟನೆಯನ್ನು ಸದನವು ಖಂಡಿಸಿ ನಿರ್ಣಯ ಕೈಗೊಳ್ಳಬೇಕೆಂದು ವಿಷಯ ಪ್ರಸ್ತಾಪಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಸಂಸತ್ ಸದನ ಪ್ರವೇಶಿಸಿ ಭಯ ಹುಟ್ಟಿಸಿದ ಘಟನೆ ಅತ್ಯಂತ ಖಂಡನೀಯವಾದದ್ದು. ಇದನ್ನು ರಾಜ್ಯದ ಜನತೆಯ ಪರವಾಗಿ ಖಂಡಿಸಬೇಕು. ರಾಜ್ಯ ವಿಧಾನಮಂಡಲದ ಕಲಾಪಗಳಿಗೂ ಸುರಕ್ಷತೆಯ ದೃಷ್ಟಿಯಿಂದ ಇದು ಪಾಠವಾಗಬೇಕು. ಸದನ ಸದಸ್ಯರು ಪ್ರವೇಶ ಪತ್ರಗಳನ್ನು ನೀಡುವಾಗ ಎಚ್ಚರಿಕೆ ವಹಿಸಿ ಪೂರ್ವಾಪರ ವಿಚಾರಿಸಿ ಪರಿಚಯಸ್ಥರಿಗೆ ಮಾತ್ರ ನೀಡಬೇಕು. ತಪಾಸಣೆ ತೀವ್ರವಾಗಬೇಕು. ಭದ್ರತಾ ಲೋಪವಾಗದಂತೆ ಕಟ್ಟುನಿಟ್ಟಾಗಿ ನೋಡಿಕೊಳ್ಳಬೇಕು. ಈ ಕುರಿತು ತಮ್ಮ ಸಿಬ್ಬಂದಿಗಳಿಗೂ ಸೂಚನೆ ನೀಡಬೇಕೆಂದು ಸಭಾಧ್ಯಕ್ಷರಿಗೆ ತಿಳಿಸಿದರು.
ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮಾತನಾಡಿ, ಘಟನೆಯನ್ನು ರಾಜ್ಯದ ಪರವಾಗಿ ಕಠಿಣವಾಗಿ ಖಂಡಿಸುತ್ತೇವೆ. ಇಂದು ಸದನಕ್ಕೆ ಅಕ್ರಮವಾಗಿ ಪ್ರವೇಶಿಸಿದ ಆಗುಂತಕರಿಗೆ ಕಠಿಣ ಕ್ರಮವಾಗಬೇಕು. ಸದನಗಳ ಪ್ರವೇಶಕ್ಕೆ ಪಾಸ್ ನೀಡುವಾಗ ಅವರ ಆಧಾರ್ ಕಾರ್ಡ್ ಪರಿಶೀಲಿಸಿ, ಸರಿಯಾದ ಪರಿಚಯ ನೋಡಿ ನೀಡಬೇಕು ಎಂದು ಹೇಳಿದರು.
ಘಟನೆಯನ್ನು ಖಂಡಿಸಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ, ವಿಪಕ್ಷ ನಾಯಕ ಆರ್. ಅಶೋಕ, ಶಾಸಕರಾದ ಸುರೇಶಕುಮಾರ್, ಅರಗ ಜ್ಞಾನೇಂದ್ರ ಸೇರಿದಂತೆ ಇತರರು ಮಾತನಾಡಿದರು.////

 

ವಿಧಾನಸಭೆಯಲ್ಲಿ ವಿವಿಧ ಮಸೂದೆಗಳ ಅಂಗೀಕಾರ

ಬೆಳಗಾವಿ: ಸುವರ್ಣ ಸೌಧ, ಡಿ.13:ಮಸೂದೆಗಳಿಗೆ ಸದನದ ಅಂಗೀಕಾರ ನೀಡಲಾಯಿತು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಡಿಸಿದ 2023ನೇ ಸಾಲಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕ, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಮಂಡಿಸಿದ 2023ನೇ ಸಾಲಿನ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ ಹಾಗೂ 2023ನೇ ಸಾಲಿನ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (2ನೇ ತಿದ್ದುಪಡಿ) ವಿಧೇಯಕವನ್ನು ಅಂಗೀಕರಿಸಲಾಯಿತು.
ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಮಂಡಿಸಿದ 2023ನೇ ಸಾಲಿನ ಕರ್ನಾಟಕ ಸಾರ್ವಜನಿಕ ಪರೀಕ್ಷೆ (ನೇಮಕಾತಿಯಲ್ಲಿನ ಭ್ರಷ್ಟಾಚಾರ ಮತ್ತು ಅನುಚಿತ ವಿಧಾನಗಳ ಪ್ರತಿಬಂಧಕ ಕ್ರಮಗಳು) ವಿಧೇಯಕವನ್ನು, ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ ಅವರು ಮಂಡಿಸಿದ 2023ನೇ ಸಾಲಿನ ಕರ್ನಾಟಕ ಉಚ್ಚ ನ್ಯಾಯಾಲಯ (ತಿದ್ದುಪಡಿ) ವಿಧೇಯಕ, 2023ನೇ ಸಾಲಿನ ಕರ್ನಾಟಕ ಸಿವಿಲ್ ನ್ಯಾಯಾಲಯಗಳ (ತಿದ್ದುಪಡಿ) ವಿಧೇಯಕ, 2023ನೇ ಸಾಲಿನ ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ವಿಧೇಯಕ, 2023ನೇ ಸಾಲಿನ ಸಾರ್ವಜನಿಕ ಸಂಗ್ರಹಣೆಗಳ ಪಾರದರ್ಶಕತೆ (ಎರಡನೇ ತಿದ್ದುಪಡಿ) ವಿಧೇಯಕ, ಹಾಗೂ ಮತ್ತು ನಗರಾಭಿವೃದ್ಧಿ ಮತ್ತು ನಗರ ಯೋಜನಾ ಸಚಿವ ಬಿ.ಎಸ್. ಸುರೇಶ ಅವರ ಪರವಾಗಿ ಮಂಡಿಸಿದ 2023ನೇ ಸಾಲಿನ ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ, ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹಾದೇವಪ್ಪ ಅವರು ಮಂಡಿಸಿದ 2023ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳ ಉಪ ಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆ (ಹಂಚಿಕೆ ಮಾಡಬಹುದಾದ ಆಯವ್ಯಯ ರೂಪಿಸುವುದು, ಆರ್ಥಿಕ ಸಂಪನ್ಮೂಲಗಳ ಹಂಚಿಕೆ ಮತ್ತು ಬಳಕೆ) (ತಿದ್ದುಪಡಿ) ವಿಧೇಯಕಗಳನ್ನು ಸದನದಲ್ಲಿ ಅಂಗೀಕರವಾಯಿತು. ಈ ವಿಧೇಯಕಗಳು ವಿಧಾನ ಪರಿಷತ್‌ನಲ್ಲಿ ಚರ್ಚೆಗೆ ಬರಲಿವೆ.////

 

ಪರಿಷತ್‌ನಲ್ಲಿ ನಾಲ್ಕು ವಿಧೇಯಕಗಳಿಗೆ ಅಂಗೀಕಾರ

ಬೆಳಗಾವಿ ಸುವರ್ಣಸೌಧ ಡಿಸೆಂಬರ್ 13:ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ವಿಧೇಯಕ-2023, ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕ-2023 ಸೇರಿದಂತೆ ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ನಾಲ್ಕು ವಿವಿಧ ವಿಧೇಯಕಗಳಿಗೆ ವಿಧಾನ ಪರಿಷತ್‌ನಲ್ಲಿ ಡಿಸೆಂಬರ್ 13ರಂದು ಅಂಗೀಕಾರ ದೊರೆಯಿತು
ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ 2023ನೇ ಸಾಲಿನ ಕರ್ನಾಟಕ ಸರಕು ಮ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಯಲೋಸಲು ಮುಖ್ಯಮಂತ್ರಿಗಳ ಪರವಾಗಿ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಕೋರಿದರು.
2023ನೇ ಸಾಲಿನ ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ವಿಧೇಯಕಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ವಿಧೇಯಕವನ್ನು ಪರ್ಯಾಲೋಸಬೇಕೆಂದು ಕೋರಿದರು. 2023ನೇ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕವನ್ನು ಪರ್ಯಾಯಲೋಚಿಸಲು ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಕೋರಿದರು. ಅದೇ ರೀತಿ 2023ನೇ ಸಾಲಿನ ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕ-2023ನ್ನು ಪರ್ಯಾಯಲೋಚಿಸಲು ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಿ.ಸುಧಾಕರ್ ಅವರು ಕೋರಿದರು.
ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಈ ವಿಧೇಯಕಗಳ ಮೇಲೆ ಚರ್ಚೆಗೆ ಅವಕಾಶ ಕಲ್ಪಿಸಿದರು. ಚರ್ಚೆಯ ಬಳಿಕ ಸಭಾಪತಿಗಳು ಪ್ರಸ್ತಾವವನ್ನು ಮತಕ್ಕೆ ಹಾಕಿದರು. ಸದನ ಸದಸ್ಯರು ಪ್ರಸ್ತಾವಕ್ಕೆ ಒಪ್ಪಿಗೆ ಸೂಚಿಸಿದರು. ಸಚಿವರು, ವಿಧೇಯಕಗಳನ್ನು ಅಂಗೀಕರಿಸಲು ಕೋರಿದ ಬಳಿಕ ಸಭಾಪತಿಯವರು ಈ ವಿಧೇಯಕಗಳ ಅಂಗೀಕಾರಕ್ಕೆ ವಿಧಾನ ಪರಿಷತ್‌ನಿಂದ ಅನುಮೋದನೆ ದೊರೆತಿದೆ ಎಂದು ಘೋಷಿಸಿದರು./////