Belagavi News In Kannada | News Belgaum

ಬೈಕ್​ ಮಧ್ಯೆ ಅಪಘಾತ; ಇಬ್ಬರು ಸಾವು

ತುಮಕೂರು: ಕಾರು ಮತ್ತು ಬೈಕ್​ ನಡುವೆ ಭೀಕರವಾದ ಅಪಘಾತ ಸಂಭವಿಸಿ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ನಡೆದಿದೆ..

ಬೈಕ್​ ಸವಾರರಾದ ಶ್ರೀಧರ್ (28), ಮುನಿರಾಜು (25) ಮೃತ ದುರ್ದೈವಿ. ಅನಾರೋಗ್ಯದಿಂದ ಬಳಲುತ್ತಿದ್ದ ಮುನಿರಾಜುನನ್ನ ಬೈಕ್​ನಲ್ಲಿ ಆಸ್ಪತ್ರೆಗೆ ಶ್ರೀಧರ್ ಕರೆದುಕೊಂಡು ಹೋಗುತ್ತಿದ್ದನು. ಈ ವೇಳೆ ಜೋಗಿಹಳ್ಳಿ ಬಳಿ ಬರುತ್ತಿದ್ದಂತೆ ಕಾರು ಮತ್ತು ಬೈಕ್​ ನಡುವೆ ಭಯಾನಕವಾದ ಡಿಕ್ಕಿ ಸಂಭವಿಸಿದೆ..

ಪರಿಣಾಮ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.