Belagavi News In Kannada | News Belgaum

ಹೊಸ ವಂಟಮುರಿ ಘಟನೆ- ಸಂತ್ರಸ್ತ‌ ಮಹಿಳೆಗೆ ಐದು‌ ಲಕ್ಷ ಪರಿಹಾರ: ಸಚಿವ ಸತೀಶ್ ಜಾರಕಿಹೊಳಿ

 

ಬೆಳಗಾವಿ, ಡಿ.14 : ಹೊಸ ವಂಟಮುರಿ ಗ್ರಾಮದಲ್ಲಿ ಇತ್ತೀಚೆಗೆ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತ ಮಹಿಳೆಗೆ ರಾಜ್ಯ ಸರಕಾರದ ವತಿಯಿಂದ ಐದು ಲಕ್ಷ ರೂಪಾಯಿ ಪರಿಹಾರವನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿರುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಇದಲ್ಲದೇ ನೊಂದ ಮಹಿಳೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದಲೂ 50 ಸಾವಿರ ರೂಪಾಯಿ ಪರಿಹಾರವನ್ನು ಘೋಷಿಸಲಾಗಿರುತ್ತದೆ.
***